newskadaba

ಒಂದೇ ಜಾತಿ, ಒಂದೇ ಮತದ ಸಂದೇಶ ಸಾರಿದ ಲೋಕ ಸಂತ ನಾರಾಯಣ ಗುರು- ಶಾಸಕ ಉಮಾನಾಥ ಕೋಟ್ಯಾನ್

(ನ್ಯೂಸ್ ಕಡಬ) newskadaba.com ಆ. 30. ಕೆಲವೇ ಪಂಗಡಗಳ ಗುರುವಾಗಿ ನಾರಾಯಣ ಗುರುಗಳನ್ನು ಸೀಮಿತಗೊಳಿಸಲಾಗದು. ಅವರು ಲೋಕ ಸಂತರು. ಜಾತಿ- ಮತ, ಬೇಧಭಾವಗಳನ್ನು ಬದಿಗಿರಿಸಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಾನವೀಯ  ಸಂದೇಶವನ್ನು ಲೋಕಕ್ಕೆ ಸಾರಿದ ಮಹಾನ್ ಸಮಾಜ ಸುಧಾರಕ ನಾರಾಯಣ ಗುರುಗಳು ಎಂದು ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕುದ್ರೋಳಿ ಶ್ರೀ […]

ಒಂದೇ ಜಾತಿ, ಒಂದೇ ಮತದ ಸಂದೇಶ ಸಾರಿದ ಲೋಕ ಸಂತ ನಾರಾಯಣ ಗುರು- ಶಾಸಕ ಉಮಾನಾಥ ಕೋಟ್ಯಾನ್ Read More »

ಕರಾವಳಿ

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್

(ನ್ಯೂಸ್ ಕಡಬ) newskadaba.com ಆ. 30. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ ಚಂದ್ ಅವರು ತಮ್ಮ ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ  ಗೌರವ ತಂದುಕೊಟ್ಟು  ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು. ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಪ್ರದರ್ಶಿಸಿ ದೇಶಕ್ಕೆ

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಆ. 30. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಶನಿವಾರದಂದು ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆಯನ್ನು ಯಾದವಶ್ರೀ ಸಭಾಂಗಣದಲ್ಲಿ ಆಚರಿಸಲಾಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಆಗಮಿಸಿ ಮೇಜರ್ ಧ್ಯಾನ್ ಚಂದ್ ಅವರ ಕುರಿತಾಗಿ ಮಾತನಾಡಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ಮಾತನಾಡಿ, ಮೇಜರ್ ಧ್ಯಾನ್ ಚಂದ್

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ Read More »

ಕರಾವಳಿ

21 ವರ್ಷದೊಳಗಿನವರಿಗೆ ಸಿಗರೇಟ್ ಮಾರುವಂತಿಲ್ಲ ನಿರಂತರ ತಪಾಸಣೆಗೆ ಎಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಆ. 28. 21 ವರ್ಷದ ಒಳಗಿನ ವ್ಯಕ್ತಿಗಳಿಗೆ ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯಿದೆ 2024ಕ್ಕೆ ತಂದಿರುವ ತಿದ್ದುಪಡಿ ಅನ್ವಯ 21 ವರ್ಷದೊಳಗಿನ ಯಾವುದೇ ವ್ಯಕ್ತಿಗಳಿಗೆ ಸಿಗರೇಟ್

21 ವರ್ಷದೊಳಗಿನವರಿಗೆ ಸಿಗರೇಟ್ ಮಾರುವಂತಿಲ್ಲ ನಿರಂತರ ತಪಾಸಣೆಗೆ ಎಡಿಸಿ ಸೂಚನೆ Read More »

ಕರ್ನಾಟಕ

ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ

(ನ್ಯೂಸ್ ಕಡಬ) newskadaba.com ಆ. 28. ಕಾಡಾನೆಗಳ ಹಿಂಡೊಂದು ಇದೀಗ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದ್ದು, ಐತ್ತೂರು ಗ್ರಾಮದ ಕೋರಿಯಾರ್ ಸಮೀಪದ ತೋಟದಲ್ಲಿ ಬೀಡುಬಿಟ್ಟಿರುವುದು ಸ್ಥಳೀಯ ಕೃಷಿಕರು ಹಾಗೂ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.   ಒಂದು ಮರಿಯಾನೆ ಸೇರಿದಂತೆ ಒಟ್ಟು ಆರು ಕಾಡಾನೆಗಳು ಈ ಹಿಂಡಿನಲ್ಲಿರುವುದು ಕಂಡುಬಂದಿದೆ. ಮೊದಲಿಗೆ ಬಳ್ಪ ಗ್ರಾಮದ ಪಠೋಳಿ ಭಾಗದಲ್ಲಿ ಕಾಡಾನೆಗಳು ಸಂಚರಿಸಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಬಳಿಕ ಪಠೋಳಿಯಿಂದ ಕಣ್ಕಲ್ ಭಾಗದತ್ತ ತೆರಳಿದ ಆನೆಗಳು, ದಾರಿಯುದ್ದಕ್ಕೂ ಬೈನೆ ಮರಗಳನ್ನು ಮುರಿದು

ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ

ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಮೃತ್ಯು!!

(ನ್ಯೂಸ್ ಕಡಬ) newskadaba.com ಆ. 28. ಖಾಸಗಿ ತರಬೇತಿ ವಿಮಾನ ಅಪಘಾತ ಸಂಭವಿಸಿದ ಪರಿಣಾಮ ಉಡುಪಿ ಮೂಲದ ತರಬೇತಿ ಪೈಲಟ್ ಓರ್ವ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.   ಮೃತ ಯುವಕನನ್ನು ಅಭಿಷೇಕ್ ಪೂಜಾರಿ(22) ಎಂದು ಗುರುತಿಸಲಾಗಿದೆ. ಅಭಿಷೇಕ್ ಪೂಜಾರಿಯವರು ಮೂಲತಃ ಉಡುಪಿ ಜಿಲ್ಲೆಯ ಕಣಜಾರು ಗ್ರಾಮದ ಕಾಡೆಬರ್ಕೆ ನಿವಾಸಿ. ವರದಿಯ ಪ್ರಕಾರ, ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು. ಅಭಿಷೇಕ್

ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಮೃತ್ಯು!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Theft, crime, Robbery

ಕಡಬ: ಪಟ್ಟಣ ಪಂಚಾಯತ್ ಅಧ್ಯಕ್ಷರ ಮನೆಯಿಂದಲೇ ಹಣ ಕಳ್ಳತನ- ದೂರು ದಾಖಲು

(ನ್ಯೂಸ್ ಕಡಬ) newskadaba.com ಆ. 28. ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆಯ ಮನೆಯೊಂದರಿಂದ 84,800 ರೂ. ನಗದು ಕಳ್ಳತನವಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಈ ಸಂಬಂಧ ಕಡಬ ಗ್ರಾಮ ನಿವಾಸಿ ತಮನ್ನಾ ಜಬೀನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.   ದೂರುದಾರರ ಪ್ರಕಾರ, ಪಿರ್ಯಾದುದಾರರು ತಮ್ಮ ಗಂಡ, ಮಕ್ಕಳು ಹಾಗೂ ಕುಟುಂಬ ಸದಸ್ಯರೊಂದಿಗೆ ಅಡ್ಡಗದ್ದೆಯಲ್ಲಿರುವ ಮನೆಯಲ್ಲಿ ವಾಸವಾಗಿದ್ದು, ತಮ್ಮ ರೂಮ್‌ನಲ್ಲಿದ್ದ ಮರದ ಬಾಕ್ಸ್‌ನಲ್ಲಿ ಹಣವನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಆಗಸ್ಟ್ 18ರಂದು

ಕಡಬ: ಪಟ್ಟಣ ಪಂಚಾಯತ್ ಅಧ್ಯಕ್ಷರ ಮನೆಯಿಂದಲೇ ಹಣ ಕಳ್ಳತನ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 28. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವು ಶುಕ್ರವಾರದಂದು ಜರಗಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಶ್ರೀ ಪೂರ್ಣ ಆಯುರ್ವೇದ ಚಿಕಿತ್ಸಾಲಯ ಇದರ ವೈದ್ಯರಾದ ಡಾ| ಸುರೇಶ್ ಕುಮಾರ್ ಕೂಡೂರು ಇವರು ರಕ್ಷೆಯಲ್ಲಿರುವ ಸಾವಿರಾರು ನೂಲು ಸೇರಿ ಒಂದು ಹೂವಿನ ಆಕಾರವನ್ನು ಪಡೆದು ಬಲವಾದಂತೆ ನಾವು ಕೂಡ ಜಾತಿ ಬಣ್ಣ ಯಾವುದೇ ಬೇಧವಿಲ್ಲದೇ ಭಾರತ ಮಾತೆಯನ್ನು ವಿಶ್ವಗುರು ಮಾಡುವಲ್ಲಿ ಒಂದಾಗಬೇಕು ಎಂದು ರಕ್ಷಾಬಂಧನದ ಮಹತ್ವವನ್ನು ವಿವರಿಸಿದರು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »

ಕರಾವಳಿ

ಉದ್ಯೋಗಾವಕಾಶ: ಆಗಸ್ಟ್ 31ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಆ. 27. ಮೆಡ್ ಪ್ಲಸ್ ಕಂಪೆನಿಯ ವತಿಯಿಂದ ಬೆಂಗಳೂರಿನಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್, ಫಾರ್ಮಾಸಿ ಎಡ್,ಸಿ.ಎಸ್.ಎ(ಕಸ್ಟಮರ್ ಸರ್ವಿಸ್ ಅಸೋಸಿಯೆಟ್/ ಫಾರ್ಮಾಸಿ ಅಸಿಸ್ಟೆಂಟ್) ಹುದ್ದೆಗೆ ನೇರ ಸಂದರ್ಶನ ಆಗಸ್ಟ್ 31ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30ರ ವರೆಗೆ ಪಡೀಲ್ ಜಿಲ್ಲಾಡಳಿತ ಕೇಂದ್ರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಹಾಗೂ ಡಿ.ಫಾರ್ಮಾ/ಬಿ.ಫಾರ್ಮಾ (ಪಿ.ಸಿ.ಐ. ಸರ್ಟಿಫಿಕೇಟ್) ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಕಂಪನಿ

ಉದ್ಯೋಗಾವಕಾಶ: ಆಗಸ್ಟ್ 31ರಂದು ಸಂದರ್ಶನ Read More »

ಉದ್ಯೋಗ, ಕರ್ನಾಟಕ

ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ಆ. 27. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ಸೆ.12 ರ ಬದಲು ಸೆ.19 ರಂದು ಮಧ್ಯಾಹ್ನ 2 ರಿಂದ ಸಂಜೆ 5.30 ರ ವರೆಗೆ ರಾಜ್ಯಾದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಿದೆ.    ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ರೀತಿ ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ

ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್ Read More »

ಕರಾವಳಿ, ಕರ್ನಾಟಕ
Scroll to Top