ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ
(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.26: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿಯಲ್ಲಿ ಜನರೇ ಸುಮಾರು 1 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಲು ಸಂಕವನ್ನು ಗುರುವಾರದಿಂದ ಜನರ ಬಳಕೆಗೆ ಲಭ್ಯವಾಗಿದೆ. ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಗ್ರಾಮಸ್ಥರಿಗೆ ಸರಿಯಾದ ಸಂಪರ್ಕ ವ್ಯವಸ್ಥೆ ಇರಲಿಲ್ಲ. ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ, ‘ಜನರಿಂದ ಜನರಿಗಾಗಿ ಜನರೇ ಗ್ರಾಮ ಸೇತು’ ಎಂಬ ಹೆಸರಿನಲ್ಲಿ ಗ್ರಾಮಸ್ಥರೇ ಕಾಲು ಸಂಕ ನಿರ್ಮಿಸಿದ್ದಾರೆ. ತೂಗುಸೇತುವೆಗಳ ತಜ್ಞ ಸುಳ್ಯದ ಗಿರೀಶ್ ಭಾರದ್ವಾಜ್ ಅವರ […]









