ಮೈಸೂರು ಅರಮನೆಯಲ್ಲಿ ವಿಜಯದಶಮಿ ಆಚರಣೆ ಆರಂಭ
(ನ್ಯೂಸ್ ಕಡಬ) newskadaba.com ಮೈಸೂರು ಅ. 26: ದಸರಾ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆಯಲ್ಲಿ ಸರಳ ವಿಜಯದಶಮಿ ಆಚರಣೆಗಳು ಆರಂಭಗೊಂಡಿದ್ದು, ಇಂದು ರಾಜವಂಶಸ್ಥರಿಂದ ಉತ್ತರ ಪೂಜೆ ನೆರವೇರಲಿದೆ. ಬೆಳಗ್ಗೆ 9.30ಕ್ಕೆ ಪಟ್ಟದ ಆನೆ, ಕುದುರೆ, ಒಂಟೆ, ಹಸುಗಳು ಆನೆ ಬಾಗಿಲಿಗೆ ಆಗಮಿಸಲಿದ್ದು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿಜಯಯಾತ್ರೆ ಹೊರಡಲಿದ್ದಾರೆ. ಬೆಳಗ್ಗೆ 9.45ಕ್ಕೆ ಖಾಸ ಆಯುಧಗಳಿಗೆ ಉತ್ತರ ಪೂಜೆ ನಡೆಯಲಿದ್ದು, ನಂತರ ಅವುಗಳನ್ನು ಬೆಳ್ಳಿ ರಥದಲ್ಲಿ ಭುವನೇಶ್ವರಿ ದೇವಾಲಯಕ್ಕೆ ರವಾನಿಸಲಾಗುವುದು. ಭುವನೇಶ್ವರಿ ದೇವಾಲಯದಲ್ಲಿ ಯದುವೀರ ಅವರು ಬನ್ನಿಪೂಜೆ ನೆರವೇರಿಸಲಿದ್ದಾರೆ. […]
ಮೈಸೂರು ಅರಮನೆಯಲ್ಲಿ ವಿಜಯದಶಮಿ ಆಚರಣೆ ಆರಂಭ Read More »
ಕರ್ನಾಟಕ









