newskadaba

ಚಲಿಸುತ್ತಿದ್ದ ಪಿಕಪ್ ಮೇಲೆ ಮರ ಬಿದ್ದು ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಜು. 24. ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದ ಪರಿಣಾಮ ಪಿಕಪ್ ವಾಹನ ಸಂಪೂರ್ಣ ಹಾನಿಗೀಡಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ಕಾಳವರ ಗ್ರಾಮದ ಕಟ್ಕೇರಿ ಶಾಲೆ ಸಮೀಪ ನಡೆದಿದೆ. ಗಾಯಗೊಂಡ ಚಾಲಕನನ್ನು ಆನಗಳ್ಳಿಯ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಚಾಲಕ ಹರೀಶ್ ತನ್ನ ಪತ್ನಿ ಮನೆಯಾದ ಸಳ್ವಾಡಿಯಿಂದ ಬೆಳಗ್ಗೆ ತಮ್ಮ ಪಿಕಪ್ ವಾಹನದಲ್ಲಿ ಮಲ್ಪೆಗೆ ಮೀನು ತರಲೆಂದು ಹೊರಟಿದ್ದರು ಎನ್ನಲಾಗಿದೆ. ಕಾಳಾವರ ಗ್ರಾಮದ ಕಟ್ಕೇರಿ […]

ಚಲಿಸುತ್ತಿದ್ದ ಪಿಕಪ್ ಮೇಲೆ ಮರ ಬಿದ್ದು ಚಾಲಕನಿಗೆ ಗಾಯ Read More »

ಕರಾವಳಿ
crime, arrest, suspected

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಜು. 24.  2021ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಯತಿರಾಜ್ (34) ಎಂದು ಗುರುತಿಸಲಾಗಿದೆ. ಆರೋಪಿಯು 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಗೆ 7 ಬಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತಾದರೂ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆ ಆರೋಪಿಯ ವಿರುದ್ಧ ಉಪ್ಪಿನಂಗಡಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 24. ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ವಿಟ್ಲ ಪಟ್ಟಣ ಪಂಚಾಯತ್, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ:- ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. ವಯೋಮಿತಿ 18-45 ವರ್ಷದ

ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಸೂರಿಕುಮೇರು ಸಂಜರಿ ಕಾಂಪ್ಲೆಕ್ಸ್ ನಲ್ಲಿ ‘ಸಂಜರಿ ಮೆನ್ಸ್ ಬ್ಯೂಟಿ ಪಾರ್ಲರ್ ಸಲೂನ್” ಶುಭಾರಂಭ

(ನ್ಯೂಸ್ ಕಡಬ) newskadaba.com ಜು. 24. ಇಲ್ಲಿನ ಸೂರಿಕುಮೇರು ಜಂಕ್ಷನ್ ಸಮೀಪದ ಹೈವೇ ಚಿಕನ್ ಸ್ಟಾಲ್ ಬಳಿ ಸಂಜರಿ ಕಾಂಪ್ಲೆಕ್ಸ್ ನಲ್ಲಿ  “The Sanjari Men’s Beauty Parlor Saloon” ಬುಧವಾರದಂದು ಶುಭಾರಂಭಗೊಂಡಿತು. ಯೂಸುಫ್ ಹಾಜಿ ಮಾಲಕತ್ವದ ಈ ಸಲೂನ್ ನಲ್ಲಿ ಉತ್ತರ ಪ್ರದೇಶದ ಅಹ್ಮದ್ ರಝಾಕ್ ಕೇಶ ವಿನ್ಯಾಸವನ್ನು ಮಾಡಲಿರುವರು, ಕಾರ್ಯಕ್ರಮದ ಉದ್ಘಾಟನೆಯ ಭಾಗವಾಗಿ ನಡೆದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ನಾಯಕರಾದ ಅಲ್ ಹಾಜ್ ಬಹು | ಇಬ್ರಾಹಿಂ ಸ‌ಅದಿ

ಸೂರಿಕುಮೇರು ಸಂಜರಿ ಕಾಂಪ್ಲೆಕ್ಸ್ ನಲ್ಲಿ ‘ಸಂಜರಿ ಮೆನ್ಸ್ ಬ್ಯೂಟಿ ಪಾರ್ಲರ್ ಸಲೂನ್” ಶುಭಾರಂಭ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ವಿಟ್ಲ ಸ್ಕೌಟ್ಸ್ ಗೈಡ್ಸ್ ನ ಕಟ್ಟಡಕ್ಕೆ ಮಂಜೂರಾತಿ ಪತ್ರ ವಿತರಣೆ

(ನ್ಯೂಸ್ ಕಡಬ) newskadaba.com ಜು. 24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ವಿಟ್ಲ ಸ್ಕೌಟ್ ಮತ್ತು ಗೈಡ್ಸ್ ನ ಕಟ್ಟಡ ನಿರ್ಮಾಣಕ್ಕೆ 1.50 ಲಕ್ಷ ಮಂಜೂರುಗೊಂಡಿದ್ದು, ಇದರ ಮಂಜೂರಾತಿ ಪತ್ರವನ್ನು ವಿಟ್ಲ ಯೋಜನಾ ಕಛೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ-2 ರ ನಿರ್ದೇಶಕರಾದ ಶ್ರೀ ಬಾಬು ನಾಯ್ಕ, ಯೋಜನಾಧಿಕಾರಿಗಳಾದ ಸುರೇಶ್ ಗೌಡ, ತಾಲೂಕಿನ ಮೇಲ್ವಿಚಾರಕರ ಸಮ್ಮುಖದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷರಾದ ಶ್ರೀ ಸುದರ್ಶನ್ ಪಡೆಯಾರ್ ಮತ್ತು ಸಮಿತಿಯವರಿಗೆ ಹಸ್ತಾಂತರ ಮಾಡಲಾಯಿತು.

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ವಿಟ್ಲ ಸ್ಕೌಟ್ಸ್ ಗೈಡ್ಸ್ ನ ಕಟ್ಟಡಕ್ಕೆ ಮಂಜೂರಾತಿ ಪತ್ರ ವಿತರಣೆ Read More »

ಕರಾವಳಿ

ಮಂಗಳೂರು ವಿವಿ: ವಿವಿಧ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಶೈಕ್ಷಣಿಕ ವರ್ಷ 2025-26ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ಮಂಗಳ ಗಂಗೋತ್ರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು/ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾದ ಸೀಟುಗಳು) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲಾಗುವ ಸ್ನಾತಕೋತ್ತರ/ ಬಿ.ಪಿ.ಎಡ್/ಡಿಪ್ಲೋಮಾ/ ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದುಕೊಳ್ಳಬಹುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿವಿ: ವಿವಿಧ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಾ:ಬಿ.ಆರ್ ಅಂಬೇಡ್ಕರ್ ನಿಗಮದಿಂದ ವಿವಿದೆಡೆ ಜಮೀನು ಖರೀದಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಡಾ:ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಪ್ರತಿಷ್ಠಿತ ಭೂ ಒಡೆತನ ಯೋಜನೆಯನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿಯ ಭೂ ರಹಿತ ಮಹಿಳಾ ಅರ್ಜಿದಾರರಿಂದ ಎಡಮಂಗಲ (ಕಡಬ ತಾಲೂಕು), ಸುಳ್ಯ ಕಸಬ (ಸುಳ್ಯ), ಜಾಲ್ಸೂರು (ಸುಳ್ಯ), ಕಡೇಶಿವಾಲಯ (ಬಂಟ್ವಾಳ ತಾಲೂಕು) ಗ್ರಾಮಗಳಲ್ಲಿ ಅರ್ಜಿಗಳು ಸ್ವೀಕೃತಗೊಂಡಿರುತ್ತದೆ. ಫಲಾಪೇಕ್ಷಿಗಳಿಗೆ ನಿಗಮದ ಮುಖಾಂತರ ಕನಿಷ್ಟ 0.50 ರಿಂದ 1.00 ಎಕ್ರೆ ಕೃಷಿ ಮತ್ತು ಕೃಷಿ ಯೋಗ್ಯ ಜಮೀನನ್ನು ಖರೀದಿ ಮಾಡಿ ನೀಡಬೇಕಾಗಿರುವುದರಿಂದ ನಿಗಮಕ್ಕೆ ಜಮೀನು ಮಾರಾಟ ಮಾಡಲು

ಡಾ:ಬಿ.ಆರ್ ಅಂಬೇಡ್ಕರ್ ನಿಗಮದಿಂದ ವಿವಿದೆಡೆ ಜಮೀನು ಖರೀದಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. 2025ನೇ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರಕಾರದ ವತಿಯಿಂದ ನ್ಯಾಷನಲ್ ಇ-ಸ್ಕಾಲರ್‍ ಶಿಪ್ ಯೋಜನೆಯಡಿ, ಪ್ರಿ ಮೆಟ್ರಿಕ್ ಟಾಪ್, ಟಾಪ್ ಕ್ಲಾಸ್, ಪೋಸ್ಟ್ ಮೆಟ್ರಿಕ್ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್‍ಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ವಿದ್ಯಾರ್ಥಿಗಳು ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಯೋಜನೆಗೆ ನ್ಯಾಷನಲ್ ಸ್ಕಾಲರ್‍ ಶಿಪ್ ಪೋರ್ಟಲ್ https://scholarships.gov.in ಮೂಲಕ ಅರ್ಜಿ ಸಲ್ಲಿಸಬಹುದು.

ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ಅರ್ಜಿ ಆಹ್ವಾನ Read More »

ಕರಾವಳಿ

ಮನೆ ಬಾಗಿಲಿಗೆ ಆರೋಗ್ಯ ಸೇವೆ-14 ರೋಗಗಳ ತಪಾಸಣೆ- ಕೈಪಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆ ಇವರ ಸಹಯೋಗದೊಂದಿಗೆ ಗೃಹ ಆರೋಗ್ಯ ಯೋಜನೆ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಐವನ್ ಡಿ’ಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗೃಹ ಆರೋಗ್ಯ ಸೇವೆ ಮನೆಬಾಗಿಲಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಅಸಾಂಕ್ರಾಮಿಕ

ಮನೆ ಬಾಗಿಲಿಗೆ ಆರೋಗ್ಯ ಸೇವೆ-14 ರೋಗಗಳ ತಪಾಸಣೆ- ಕೈಪಿಡಿ ಬಿಡುಗಡೆ Read More »

ಕರಾವಳಿ

ಜನನ-ಮರಣ: 21 ದಿನಗಳೊಳಗೆ ನೋಂದಣಿ ಕಡ್ಡಾಯ– ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/ ಗ್ರಾಮ ಪಂಚಾಯತ್  ನೋಂದಣಾಧಿಕಾರಿಗಳ ಮೂಲಕ ನೋಂದಣಿ ಮಾಡಿಸಬೇಕು  ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವ್ಯಾಪ್ತಿಯಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯು ಅಪಘಾತ ಅಥವಾ ಇನ್ನಿತರ ಅಪರಾಧ ಕೃತ್ಯಗಳ

ಜನನ-ಮರಣ: 21 ದಿನಗಳೊಳಗೆ ನೋಂದಣಿ ಕಡ್ಡಾಯ– ಅಪರ ಜಿಲ್ಲಾಧಿಕಾರಿ Read More »

ಕರಾವಳಿ
Scroll to Top