newskadaba

ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..!

(ನ್ಯೂಸ್ ಕಡಬ) newskadaba.com ಜೂ. 30. ನಗರದ ಕೊಡಿಯಾಲ್‌ ಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಪೊಲೀಸ್ ತಪಾಸಣೆಯ ವೇಳೆ 1 ಕೀಪ್ಯಾಡ್ ಮೊಬೈಲ್ ಮತ್ತು 2 ಟಚ್ ಸ್ಕ್ರೀನ್ ಮೊಬೈಲ್ ಫೋನ್ ಹಾಗೂ ಎರಡು ಬಂಡಲ್ ಬೀಡಿಗಳು ಪತ್ತೆಯಾಗಿರುವ ಕುರಿತು ವರದಿಯಾಗಿದೆ.   ಜೈಲಿನಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ಬಳಿಕ ಕೇಂದ್ರ ಉಪ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಜೈಲಿನ ಸುರಕ್ಷತೆಯ ದೃಷ್ಟಿಯಿಂದ ಶೋಧ ಕೈಗೊಂಡಿದ್ದರು. ಈ ವೇಳೆ ಇವೆಲ್ಲ ಪತ್ತೆಯಾಗಿದೆ.   ಮಹಜರು ನಡೆಸಿ […]

ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

“ಅದೊಂದಿತ್ತು ಕಾಲ”- ಶಾಲಾ ಹುಡುಗನ ಪಾತ್ರದಲ್ಲಿ ವಿನಯ್ ರಾಜ್ ಕುಮಾರ್

(ನ್ಯೂಸ್ ಕಡಬ) newskadaba.com ಜೂ. 30. ನಟ ವಿನಯ್ ರಾಜ್‌ಕುಮಾರ್ ಅವರು ‘ಅಂದೊಂದಿತ್ತು ಕಾಲ’ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ಅವರು ಶಾಲಾ ಹುಡುಗನ ಪಾತ್ರಕ್ಕಾಗಿ ದೇಹದ ತೂಕ ಕಡಿಮೆ ಮಾಡಿಕೊಂಡಿದ್ದರು.   ಈ ಕುರಿತು ಮಾತನಾಡಿರುವ ಅವರು, ‘ಈ ಸಿನಿಮಾದಲ್ಲಿ ನಾನು 16 ವರ್ಷದ ಹುಡುಗನ ಗೆಟಪ್‌ ನಲ್ಲಿ ಕಾಣಿಸಿಕೊಳ್ಳುವುದು ಚಾಲೆಂಜಿಂಗ್ ಆಗಿತ್ತು. ಒಂದಷ್ಟು ತೂಕ ಕಡಿಮೆ ಮಾಡಿಕೊಂಡೆ. ಚಿಕ್ಕ ಹುಡುಗನ ಮುಗ್ಧತೆ ತೋರಿಸಬೇಕಿತ್ತು. ದೇಹದ ತೂಕ ಕಡಿಮೆ ಮಾಡಿಕೊಳ್ಳುವುದು ಕಷ್ಟವಾಗಿತ್ತು” ಎಂದಿದ್ದಾರೆ.   16ನೇ

“ಅದೊಂದಿತ್ತು ಕಾಲ”- ಶಾಲಾ ಹುಡುಗನ ಪಾತ್ರದಲ್ಲಿ ವಿನಯ್ ರಾಜ್ ಕುಮಾರ್ Read More »

ಸಿನಿಮಾ

ಸೌಂದರ್ಯವರ್ಧಕ ಉತ್ಪನ್ನಗಳ ಮೇಲೆ ಸಮರಕ್ಕೆ ಮುಂದಾದ ಔಷಧ ಇಲಾಖೆ- ಎಲ್ಲಾ ಕಾಸ್ಮೆಟಿಕ್ಸ್ ಗಳ ಪರೀಕ್ಷೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 30. ಇತ್ತೀಚಿನ ದಿನಗಳಲ್ಲಿ ಕಾಸ್ಮೆಟಿಕ್ ಗಳು ಆರೋಗ್ಯಕ್ಕೆ ಹಾನಿಕಾರಕವಾಗುತ್ತಿದ್ದು, ಯುವಕ-ಯುವತಿಯರಂತೂ ತಕ್ಷಣಕ್ಕೆ ಮುಖ ಹೊಳಪು ಬರಬೇಕು ಅಂತಾ ಹಿಂದೆ ಮುಂದೆ ನೋಡದೆ ಸ್ಟೀರಾಯ್ಡ್ ಬೇಸ್ ಕ್ರೀಮ್‌ ಗಳನ್ನ ಹೆಚ್ಚಾಗಿ ಬಳಕೆ ಮಾಡುತ್ತಿದ್ದಾರೆ.   ಕಳೆದ ವಾರವಷ್ಟೇ ಕುಂಕುಮ, ಪ್ಯಾರಸಿಟಮೋಲ್ ಸೇರಿ 15 ಔಷಧಗಳನ್ನು ನಿರ್ಬಂಧ ಮಾಡಿ ಸರಕಾರ ಆದೇಶಿಸಿತ್ತು. ಇದೀಗ ಅನೇಕ ಕಾಸ್ಮೆಟಿಕ್ಸ್‌ ಗಳ ಮೇಲೆ ಕಣ್ಣಿಟ್ಟಿರುವ ಔಷಧ ನಿಯಂತ್ರಣ ಇಲಾಖೆ, ಮತಷ್ಟು ಸೌಂದರ್ಯ ವರ್ಧಕಗಳ ಸ್ಯಾಂಪಲ್ಸ್ ಗೆ ಮುಂದಾಗಿದೆ.  

ಸೌಂದರ್ಯವರ್ಧಕ ಉತ್ಪನ್ನಗಳ ಮೇಲೆ ಸಮರಕ್ಕೆ ಮುಂದಾದ ಔಷಧ ಇಲಾಖೆ- ಎಲ್ಲಾ ಕಾಸ್ಮೆಟಿಕ್ಸ್ ಗಳ ಪರೀಕ್ಷೆಗೆ ಸೂಚನೆ Read More »

ಕರ್ನಾಟಕ

ಕೆಂಪುಕಲ್ಲು ಪಾಯ ಬಂದ್- ಲಾರಿ ಮಾಲಕರಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಜೂ. 30. ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಪಾಯಗಳು ಬಂದ್ ಆಗಿದ್ದು, ಇದಕ್ಕೆ ಪರಿಹಾರ ಕಲ್ಪಿಸದಿದ್ದಲ್ಲಿ ಜುಲೈ 3ರಂದು ಬೃಹತ್ ಪ್ರತಿಭಟನೆ ನಡೆಸಲು ದ.ಕ ಜಿಲ್ಲಾ ಕೆಂಪುಕಲ್ಲು ಪಾಯ ಹಾಗೂ ಲಾರಿ ಮಾಲಕರ ಒಕ್ಕೂಟ ನಿರ್ಧರಿಸಿದೆ.   ಈ ಬಗ್ಗೆ ಒಕ್ಕೂಟವು ಬಿಸಿರೋಡಿನ ಖಾಸಗಿ ಸಭಾಂಗಣವೊಂದರಲ್ಲಿ ಸಭೆ ನಡೆಸಿ ಚರ್ಚಿಸಿದ್ದು, ಜೂನ್ 30(ಇಂದು) ನಡೆಯಲಿರುವ ಸಭೆಯಲ್ಲಿ ಈ ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಮುಂದಕ್ಕೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲು

ಕೆಂಪುಕಲ್ಲು ಪಾಯ ಬಂದ್- ಲಾರಿ ಮಾಲಕರಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ Read More »

ಕರಾವಳಿ

ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ವರ್ಗಾವಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 30. ವಿವಿಧ ಸಂಘ ಸಂಸ್ಥೆಗಳ ಮೂಲಕ ಸರಕಾರಿ ಆಸ್ಪತ್ರೆಗೆ ಹಲವು ಸೌಲಭ್ಯಗಳನ್ನು ನೀಡುವ ಮೂಲಕ ಜನಪ್ರಿಯತೆ ಗಳಿಸಿದ್ದ ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರು ಮಡಿಕೇರಿ ಜಿಲ್ಲಾಸ್ಪತ್ರೆಗೆ  ವರ್ಗಾವಣೆಗೊಳ್ಳಲಿದ್ದಾರೆ. ಇದರ ಜೊತೆಗೆ ಅರಿವಳಿಕೆ ತಜ್ಞೆ ಡಾ.ಜಯಕುಮಾರಿ ಅವರು ತುಮಕೂರು ಜಿಲ್ಲಾಸ್ಪತ್ರೆಗೆ, ದಂತ ತಜ್ಞ ಡಾ.ಜೈದೀಪ್ ಅವರು ಸಕಲೇಶಪುರ ತಾಲೂಕು ಆಸ್ಪತ್ರೆಗೆ ಹಾಗೂ ಅರಿವಳಿಕೆ ತಜ್ಞೆ ಡಾ.ಶ್ವೇತಾ ಸುಳ್ಯ ಸರಕಾರಿ ಆಸ್ಪತ್ರೆಗೆ ವರ್ಗಾವಣೆಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ವೈದ್ಯರುಗಳ ಕುರಿತು ಕೌನ್ಸಿಲ್

ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ವರ್ಗಾವಣೆ Read More »

ಕರಾವಳಿ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ..!

(ನ್ಯೂಸ್ ಕಡಬ) newskadaba.com ಜೂ. 30. ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರು 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.   ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.   ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ..! Read More »

ಕರ್ನಾಟಕ

ಮಂಗಳೂರು ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿರುವುದಾಗಿ ವರದಿಯಾಗಿದೆ.   ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದ್ದು, ಬಜ್ಪೆಯ ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ

ಮಂಗಳೂರು ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಹಾಗೂ ಭಾರತೀಯ ರೆಡ್‍ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವನ್ನು ಶನಿವಾರದಂದು ಆಸ್ಪತ್ರೆಯ ಸಭಾಂಗಣದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದಂತಹ ಡಾ.ಜೀವರಾಜ್ ಸೊರಕೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯವಿರುವ ರಕ್ತವನ್ನು ಪೂರೈಸುವ ಸದುದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳಲಾಯಿತು. ರಕ್ತದಾನವು ಶೇಷ್ಠದಾನವಾಗಿದ್ದು, ಪ್ರತಿಯೊಬ್ಬರ ರಕ್ತದಾನವೂ ಸಹ ಹಲವರ ಜೀವವನ್ನು ಉಳಿಸಲು ಸಹಾಯಕವಾಗುತ್ತದೆ

ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜೂ. 30. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ನೆಲ್ಯಾಡಿ ವಲಯ ವ್ಶಾಪ್ತಿಯ ಕೊಣಾಜೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತಿಗೆ ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕದ ಹಸ್ತಾಂತರ ಕಾರ್ಯಕ್ರಮ ನಡೆಯಿತು.   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಶ್ರೀ ಪ್ರಕಾಶ್ ಕುಮಾರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿಯವರು ಮಂಜೂರು ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಿ

ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ Read More »

ಕರಾವಳಿ

ಅಡಿಕೆಗೆ ಔಷಧಿ ಸಿಂಪಡನೆ ವೇಳೆ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 28. ವಿದ್ಯುತ್ ತಗುಲಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಅರಸಿನಮಕ್ಕಿಯ ಎಂಜೀರ ಎಂಬಲ್ಲಿ ನಡೆದಿದೆ.   ಮೃತಪಟ್ಟವರನ್ನು ಉಡೈರೆ ಕೃಷ್ಣಪ್ಪ ಕುಲಾಲ್(49) ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ರವರು ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುತ್ತಿದ್ದ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ವಿದ್ಯುತ್‌ ತಗುಲಿ ಈ ದುರ್ಘಟನೆ ನಡೆದಿದೆನ್ನಲಾಗಿದೆ.   ಕೂಡಲೇ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಡಿಕೆಗೆ ಔಷಧಿ ಸಿಂಪಡನೆ ವೇಳೆ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top