newskadaba

ರಸ್ತೆ ನಾಮಕರಣ: ಆಕ್ಷೇಪಣೆ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 28. ಉಳ್ಳಾಲ ತಾಲೂಕಿನ ಸೋಮೇಶ್ವರದಿಂದ ಬಟಪಾಡಿ ರಸ್ತೆಗೆ “ಅಮೃತ ಸೋಮೇಶ್ವರ ರಸ್ತೆ” ಎಂದು ನಾಮಕರಣ ಮಾಡಲು ನಿರ್ಣಯಿಸಲಾಗಿದೆ. ಆದುದರಿಂದ ಈ ಪ್ರಕಟಣೆ ಪ್ರಕಟಿಸಿದ 30 ದಿನಗಳೊಳಗೆ ಈ ಬಗ್ಗೆ ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆ ನೀಡಬಹುದು ಎಂದು ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ರಸ್ತೆ ನಾಮಕರಣ: ಆಕ್ಷೇಪಣೆ ಆಹ್ವಾನ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜೂ. 28. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನಗೊಂಡಿರುವ ಮಂಗಳೂರು ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆ ಗ್ರೇಡ್ 2 ತಹಶೀಲ್ದಾರ್ ರಫೀಕ್ ಚೌಧರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ತಾಲೂಕು ಕಚೇರಿಯಲ್ಲಿ ನಡೆಯಿತು. ವಿಕಲಚೇತನರ ವಿಶೇಷ ಗುರುತಿನ ಚೀಟಿ ನೊಂದಣಿಗೆ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಅವರು ಸೂಚಿಸಿದರು. ಮಹಿಳೆಯರ ಮತ್ತು ಮಕ್ಕಳ ಮಾರಾಟ ಸಾಗಾಟ, ವರದಕ್ಷಿಣೆ, ಬಾಲ್ಯವಿವಾಹ,

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ Read More »

ಕರಾವಳಿ

ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಜೂ. 28. ವೃತ್ತಿಪರ ಕೋರ್ಸ್‍ ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆ.ಇ.ಎ.) ಮುಖಾಂತರ 2025-26ನೇ ಸಾಲಿನ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆಗೆ ಕುರಿತಂತೆ ಅರಿವು ಮೂಡಿಸುವ ಸಂಬಂಧ ವಿದ್ಯಾರ್ಥಿಗಳಿಗೆ ಯು.ಜಿ.ಸಿ.ಇ.ಟಿ. ಕೌನ್ಸೆಲಿಂಗ್ ಕುರಿತು ತಿಳುವಳಿಕೆ ನೀಡಲು ಜೂನ್ 28ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್(ಕೆ.ಪಿ.ಟಿ)ನಲ್ಲಿ ಯು.ಜಿ.ಸಿ.ಇ.ಟಿ 2025 – ಸೀಟು ಹಂಚಿಕೆ ಮಂಥನ ಕಾರ್ಯಾಗಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ.) ರವರ ಸಹಕಾರದೊಂದಿಗೆ ಆಯೋಜಿಸಲಾಗಿದೆ.

ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ Read More »

ಕರಾವಳಿ

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯುಟಿಕೆ ಭೇಟಿ

(ನ್ಯೂಸ್ ಕಡಬ) newskadaba.com ಜೂ. 28. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ  ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು.   ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯುಟಿಕೆ ಭೇಟಿ Read More »

ಕರಾವಳಿ

ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 28. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿದ ಪ್ರಕರಣದ ಸಂತ್ರಸ್ತೆ ಶುಕ್ರವಾರದಂದು ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿರುವ ಕುರಿತು ವರದಿಯಾಗಿದೆ. ವರದಿಯ ಪ್ರಕಾರ, ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಎಂಬಾತ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಜೂ.25ರಂದು ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ

ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಎಲ್ಲೆಡೆಯೂ ಮಳೆ, ಪ್ರವಾಹ, ಪ್ರಕೃತಿ ವಿಕೋಪ, ಅಪಘಾತ, ಯುದ್ಧ ಇಂತಹ ಅನಾಹುತಗಳ ಬಗ್ಗೆಯೇ ಕೇಳಲ್ಪಡುತ್ತಿರುವ ಇಂತಹ ಸಂದರ್ಭದಲ್ಲಿ ನಗರದಿಂದ ದೂರವಾದ ಕಡಲತಡಿಯ ಪ್ರಶಾಂತವಾದ ವಾತಾವರಣದಲ್ಲಿ ಸಾಹಿತಿಗಳು ಸೇರಿಕೊಂಡು ಎಲ್ಲವನ್ನೂ ಮರೆತು ಒಟ್ಟಾಗಿ ಕುಳಿತು ಒಂದಿಷ್ಟು ಕವಿತೆ, ಸಂಗೀತ, ಹರಟೆಗಳನ್ನು ಮಾಡುವುದರಿಂದ ಮನಸ್ಸು ಪ್ರಫುಲ್ಲಿತವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ರೇವಣಕರರು ಅಭಿಪ್ರಾಯಪಟ್ಟರು. ಅವರು ಚೂಂತಾರು ಸರೋಜಿನಿ ಭಟ್

ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ Read More »

ಕರಾವಳಿ

RCB ಕಾಲ್ತುಳಿತ ಪ್ರಕರಣ- ವಿಚಾರಣೆಗೆ ಹಾಜರಾದ ಪೊಲೀಸ್ ಆಯುಕ್ತ ಬಿ.ದಯಾನಂದ್..!

(ನ್ಯೂಸ್ ಕಡಬ) newskadaba.com ಜೂ. 27. ಆರ್’ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿದ ಪ್ರಕರಣಕ್ಕೆ ಸಬಂಧಿಸಿದಂತೆ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಮಾಜಿ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಗುರುವಾರದಂದು ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದರು.   ಈಗಾಗಲೇ ಜಿಲ್ಲಾಧಿಕಾರಿ ಜಿ.ಜಗದೀಶ್‌, ಎರಡು ಬಾರಿ ನೋಟಿಸ್‌ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಬಿ.ದಯಾನಂದ್‌ ಇದೀಗ 3 ವಾರಗಳ ಬಳಿಕ ಗುರುವಾರದಂದು ಮಧ್ಯಾಹ್ನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದರು. ಇವರನ್ನು

RCB ಕಾಲ್ತುಳಿತ ಪ್ರಕರಣ- ವಿಚಾರಣೆಗೆ ಹಾಜರಾದ ಪೊಲೀಸ್ ಆಯುಕ್ತ ಬಿ.ದಯಾನಂದ್..! Read More »

ಕರ್ನಾಟಕ

ಸರ್ಕಾರಿ ಶಾಲಾ ಮಕ್ಕಳ ಕಲಿಕಾಮಟ್ಟ ಹೆಚ್ಚಿಸಲು ಜ್ಞಾನಸೇತು ಅನುಷ್ಠಾನ..!

(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದಲ್ಲಿರುವ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಗುಣಮಟ್ಟದ ಡಿಜಿಟಲ್ ಕಲಿಕೆಗಾಗಿ ಖಾನ್ ಅಕಾಡೆಮಿಯ ಸಹಯೋಗದಲ್ಲಿ ರಾಜ್ಯ ಸರಕಾರವು ಜ್ಞಾನ ಸೇತು ಎಂಬ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.   ಇದರ ಮೂಲಕ ರಾಜ್ಯದ 21,726 ಹಿರಿಯ ಪ್ರಾಥಮಿಕ ಶಾಲೆ, 4821 ಪ್ರೌಢಶಾಲೆ ಹಾಗೂ 1,229 ಪಿಯು ಕಾಲೇಜುಗಳಲ್ಲಿ ಈಗಾಗಲೇ ಲಭ್ಯವಿರುವ ಎಲ್‌ ಇಡಿ ಪ್ರೊಜೆಕ್ಟರ್‌ ಅಥವಾ ಸ್ಮಾರ್ಟ್‌ ಬೋರ್ಡ್‌ ಗಳನ್ನು ಬಳಸಿಕೊಂಡು ವಾರದಲ್ಲಿ ಒಂದು

ಸರ್ಕಾರಿ ಶಾಲಾ ಮಕ್ಕಳ ಕಲಿಕಾಮಟ್ಟ ಹೆಚ್ಚಿಸಲು ಜ್ಞಾನಸೇತು ಅನುಷ್ಠಾನ..! Read More »

ಕರ್ನಾಟಕ

ಹುಲಿಗಳ ಅಸಹಜ ಸಾವು ಪ್ರಕರಣ ವರದಿ ಬಳಿಕ ಸೂಕ್ತ ಕ್ರಮ- ಸಿಎಂ

(ನ್ಯೂಸ್ ಕಡಬ) newskadaba.com ಜೂ. 27. ಮೈಸೂರಿನ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ನಂತರ ಕ್ರಾಂತಿ ಆಗಲಿದೆ ಎಂದಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣರ ಹೇಳಿಕೆಯ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ

ಹುಲಿಗಳ ಅಸಹಜ ಸಾವು ಪ್ರಕರಣ ವರದಿ ಬಳಿಕ ಸೂಕ್ತ ಕ್ರಮ- ಸಿಎಂ Read More »

ಕರ್ನಾಟಕ

ಅನ್ನಭಾಗ್ಯ ಯೋಜನೆಯಡಿ ಸಿಗಲಿದೆ ಈ 7 ಆಹಾರ ಕಿಟ್ ಗಳು..!

(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ಹೆಚ್ಚುವರಿಯಾಗಿ 5ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮೂಲಗಳ ಪ್ರಕಾರ ಈ ಬಗ್ಗೆ ಪ್ರಸ್ತಾವನೆ ಸಿದ್ಧವಾಗಿದ್ದು, ಜುಲೈ 2ರಂದು ನಂದಿ ಬೆಟ್ಟದಲ್ಲಿ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಸಿಗುತ್ತಿದ್ದು, ಅದು ಮಾರುಕಟ್ಟೆಗೆ ಹೋಗುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಆಹಾರದ ಕಿಟ್

ಅನ್ನಭಾಗ್ಯ ಯೋಜನೆಯಡಿ ಸಿಗಲಿದೆ ಈ 7 ಆಹಾರ ಕಿಟ್ ಗಳು..! Read More »

ಕರ್ನಾಟಕ
Scroll to Top