newskadaba

ಕಡಬ: ನಾದಿನಿಯ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಕರ್ತವ್ಯ ಲೋಪ ಎಸಗಿದ ಎಎಸ್ಐ ಚಂದ್ರಶೇಖರ್ ಅಮಾನತು

ಆರೋಪಿ ಜಯಾನಂದ (ನ್ಯೂಸ್ ಕಡಬ) newskadaba.com ಕಡಬ, ಫೆ‌.08. ಮಹಿಳೆಯೋರ್ವರ ಮುಖಕ್ಕೆ ಆಕೆಯ ಬಾವ ಆ್ಯಸಿಡ್ ಎರಚಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಕಡಬ ಠಾಣಾ ಎಎಸೈ ಯನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಆದೇಶಿಸಿದ್ದಾರೆ. ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂಬಾತ ತನ್ನ ತಮ್ಮನ ಪತ್ನಿ ವಿಧವೆ ಸ್ವಪ್ನಾ(35) ಹಾಗೂ ಆಕೆಯ ಹೆಣ್ಣುಮಗಳ ಮುಖಕ್ಕೆ ಆ್ಯಸಿಡ್ ಎರಚಿದ್ದ ವೇಳೆ ಕಡಬ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ಚಂದ್ರಶೇಖರ್ ಎಂಬವರು […]

ಕಡಬ: ನಾದಿನಿಯ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಕರ್ತವ್ಯ ಲೋಪ ಎಸಗಿದ ಎಎಸ್ಐ ಚಂದ್ರಶೇಖರ್ ಅಮಾನತು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕಾಸರಗೋಡು. ಫೆ. 7. ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಾಯಗೊಂಡ ಘಟನೆ ಬಂದ್ಯೋಡು ಸಮೀಪದ ಮುಟ್ಟ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಕಾಸರಗೋಡು ಸಿರಿಬಾಗಿಲು ನಿವಾಸಿ ಮುಹಮ್ಮದ್ ಶಾಬಿಲ್ (22) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಗಾಯಗೊಂಡ ಸಹಸವಾರ ಆಶಿಮ್ (22) ಎಂಬಾತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಸುಳ್ಯ. ಫೆ.7. ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ವೈದ್ಯ ಡಾ.ಬಿ.ಎಂ.ಶೆಟ್ಟಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೈದ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಧಾರ್ಮಿಕ ನೇತಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದ ಬೆಳ್ಳಾರೆಯ ಡಾ.ಬಿ.ಎಂ. ಶೆಟ್ಟಿ ತಡಗಜೆ ಅವರು ದಾವಣಗೆರೆ ಜಿಲ್ಲೆಯ ಜಗಳೂರು ಎಂಬಲ್ಲಿ 25 ವರ್ಷ ವೈದ್ಯಕೀಯ ಸೇವೆ ಸಲ್ಲಿಸಿದ್ದರು. ಬಳಿಕ ಊರಿಗೆ ಹಿಂತಿರುಗಿ ಕೃಷಿ ಹಾಗೂ ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಸೊಸೆಯಂದಿರು,

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ Read More »

ಕರಾವಳಿ, ಕ್ರೈಮ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ  ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ. ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ Read More »

ಕರಾವಳಿ

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31   ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ  ಪುತ್ತೂರು  ವಿಧಾನಸಭಾ ಕ್ಷೇತ್ರ ಸದಸ್ಯ ಸಂಜೀವ ಮಠಂದೂರು  ಇವರ 2018-19ನೇ ಸಾಲಿನ ಅನುದಾನದಲ್ಲಿ ನಗರಸಭೆ ವ್ಯಾಪ್ತಿಯ 4 ನೇ ವಾರ್ಡ್‍ನ ಬನ್ನೂರು ಜನತಾ ಕಾಲೊನಿ ಹೋಗುವ ಮುಖ್ಯರಸ್ತೆಯಿಂದ ಕವಲೊಡೆದು ದೇವದಾಸ್ ಶೆಟ್ಟಿಯವರ ಮನೆಗೆ ಹೋಗುವ ಕಾಂಕ್ರೀಟ್ ರಸ್ತೆ ಮುಂದುವರಿದ ಕಾಮಗಾರಿಗೆ ರೂ.2 ಲಕ್ಷ, ಪುತ್ತೂರು ನಗರಸಭಾ ವ್ಯಾಪ್ತಿಯ 14 ನೇ ವಾರ್ಡ್ ಹಾರಾಡಿ ಬನ್ನೂರು ರಸ್ತೆಯಲ್ಲಿ ಮೆಸ್ಕಾಂ ಕ್ವಾಟ್ರರ್ಸ್ ಎದುರು

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ

ಫೆ.2 – ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳರ ಸಂಘ(ರಿ), ದ.ಕ ಜಿಲ್ಲಾ ಸವಿತಾ ಸಮಾಜ ಮಂಗಳೂರು ಇವರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆಯು  ಫೆಬ್ರವರಿ 2 ರಂದು ಬೆಳಿಗ್ಗೆ 10.30 ಗಂಟೆಗೆ ತುಳು ಭವನ, ಉರ್ವಸ್ಟೋರ್ ಇಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು  ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ

ಫೆ.2 – ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ Read More »

ಕರಾವಳಿ

ಯುವ ಭಾರತ ನಿರ್ಮಾಣ ನಮ್ಮ ಗುರಿ: ಭಾಸ್ಕರ ರೈ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ದೇಶದ ಯುವಜನತೆ ಆ ದೇಶದ ಅಭಿವೃದ್ಧಿಯಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ದೇಶದಲ್ಲಿ ಯುವಜನತೆಯ ಪ್ರಮಾಣ ಹೆಚ್ಚಾದಂತೆ ದೇಶ ಬಲಿಷ್ಠವಾಗುತ್ತಾ ಹೋಗುತ್ತದೆ. ಅಂತೆಯೇ ಭಾರತವೂ ಕೂಡಾ ಒಂದು ಯುವ ರಾಷ್ಟ್ರವಾಗಿ ನಿರ್ಮಾಣ ವಾಗುವ ವಾತಾವರಣ ನಾವು ನಿರ್ಮಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಹೇಳಿದರು. ನಗರದ ಭಾರತೀ ಪದವಿ ಕಾಲೇಜಿನಲ್ಲಿ ನಡೆದ ಯುವ ಸಬಲೀಕರಣ  ಕ್ರೀಡಾ ಇಲಾಖೆ ಇದರ ಯುವಸ್ಪಂದನ ಘಟಕದ ಯುವ ಅರಿವು ಕಾರ್ಯಕ್ರಮದಲ್ಲಿ

ಯುವ ಭಾರತ ನಿರ್ಮಾಣ ನಮ್ಮ ಗುರಿ: ಭಾಸ್ಕರ ರೈ Read More »

ಕರಾವಳಿ

ಯುವ ಕೌಶಲ್ಯ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುವ ಕೌಶಲ್ಯ ಎಂಬ ಒಂದು ದಿನದ ಕಾರ್ಯಕ್ರಮವನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿ.ಯು.ಸಿ, ಪದವಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಸ್ನಾತಕೋತ್ತರ ಪದವೀಧರರಿಗೆ ಮೃದು ಕೌಶಲ್ಯ ತರಬೇತಿ ನೀಡಿ, ಉದ್ಯೋಗಾರ್ಹತೆಯ ಮಟ್ಟವನ್ನು ಹೆಚ್ಚಿಸಿ, ಅವರೊಡನೆ ಸಮಾಲೋಚನೆಯನ್ನು ನಡೆಸಿ ಅವರಲ್ಲಿರುವ ಕೊರತೆಗಳನ್ನು ಅರಿತು,  ಸೂಕ್ತ ತರಬೇತಿ ನೀಡಿ, ಮೌಲ್ಯ ಮಾಪನವನ್ನು ಮಾಡಲಾಗುತ್ತದೆ. ಯುವ ಕೌಶಲ್ಯದ ಮೂಲಕ

ಯುವ ಕೌಶಲ್ಯ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಇಂದು ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಷ್ಠರೋಗ ವಿಭಾಗ) ಮಂಗಳೂರು ಮತ್ತು ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಕುಷ್ಠರೋಗದ ವಿರುದ್ಧ ಅಂತಿಮ ಯುದ್ಧ ಎಂಬ ಘೋಷಣೆಯೊಂದಿಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ-2020 ಕಾರ್ಯಕ್ರಮ ಜನವರಿ 30 ರಂದು ಬೆಳಿಗ್ಗೆ 9.30 ಗಂಟೆಗೆ ಆರ್.ಎ.ಪಿ.ಸಿ.ಸಿ ಕಾನ್ಫರೆನ್ಸ್ ಹಾಲ್ (3ನೇ ಮಹಡಿ) ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿ ನಡೆಯಲಿದೆ.

ಇಂದು ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ  Read More »

ಕರಾವಳಿ
Scroll to Top