newskadaba

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 27. ಆನ್‌ ಲೈನ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭದ ಭರವಸೆ ನೀಡಿ 68.3 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.   ದೂರಿನ ಪ್ರಕಾರ, ಅಪರಿಚಿತರು ಅಜಿತ್ ಕುಮಾರ್ ಎಂಬವರನ್ನು ‘372 SCBI ಇನ್ವೆಸ್ಟಿಂಗ್ ಲ್ಯಾಬ್’ ಎಂಬ ವಾಟ್ಸಾಪ್ ಗುಂಪಿಗೆ ಸೇರಿಸಿ ಬಳಿಕ, ಗುಂಪಿನ ಸದಸ್ಯರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೋತ್ಸಾಹಿಸುವ ಸಂದೇಶಗಳನ್ನು ಕಳುಹಿಸಿದ್ದಾರೆ. […]

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷ ಪ್ರಾಶನದಿಂದಲೇ ಹುಲಿಗಳು ಮೃತಪಟ್ಟಿವೆ- ಸಿಸಿಎಫ್

(ನ್ಯೂಸ್ ಕಡಬ) newskadaba.com ಜೂ. 27. ಮೈಸೂರಿನ ಮಲೆಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ವಿಷ ಪ್ರಾಷನದಿಂದಲೇ ಸಾವನ್ನಪ್ಪಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದ್ದಾರೆ.   ಹುಲಿಗಳ ಮರಣೋತ್ತರ ಪರೀಕ್ಷೆಯ ನಂತರ ಮಾತನಾಡಿದ ಅವರು, ತಾಯಿ ಹುಲಿಗೆ 8 ವರ್ಷ ಆಗಿದ್ದರೆ ಮರಿ ಹುಲಿಗಳಿಗೆ 10 ತಿಂಗಳು ಆಗಿತ್ತು. ಹಸುವಿನ ವಿಷದ ಮಾಂಸ ತಿಂದು ಹುಲಿಗಳು ಮೃತಪಟ್ಟಿದೆ.   ಯಾವ ಪ್ರಮಾಣದ ವಿಷ? ಹುಲಿ ಭೇಟೆಯಾಡಿದ ಮೇಲೆ ಹಸುವಿಗೆ ವಿಷ ಹಾಕಲಾಗಿದೆಯಾ ಅಥವಾ ಮೊದಲೇ ಹಸುವಿಗೆ

ವಿಷ ಪ್ರಾಶನದಿಂದಲೇ ಹುಲಿಗಳು ಮೃತಪಟ್ಟಿವೆ- ಸಿಸಿಎಫ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಲಬ್ ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಿಷೇಧ- ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜೂ. 27. ಮಾನ್ಯತೆ ಪಡೆದಿರುವ ಕ್ಲಬ್‌ ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಡೆಸುವುದನ್ನು ಸಂಪೂರ್ಣವಾಗಿ ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸೂಚನೆ ನೀಡಿರುವ ಹಿನ್ನೆಲೆ ಪೊಲೀಸರು ಪುತ್ತೂರಿನ ವಿವಿಧ ಕ್ಲಬ್‌ ಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕ್ಲಬ್‌ಗಳು ಹಲವು ನಿಯಮಗಳನ್ನು ಪಾಲಿಸಿಕೊಂಡು ನಡೆಯುತ್ತಿವೆ. ಅಲ್ಲಿ ಕ್ಯಾರಂ, ಇಸ್ಪೀಟ್ ಆಟಗಳನ್ನು ಆಡಬಹುದು. ಆದರೆ ಯಾವುದೇ ಕಾರಣಕ್ಕೂ ಹಣವನ್ನು ಪಣವಾಗಿಟ್ಟು ಆಡುವಂತಿಲ್ಲ ಎಂಬ ಎಸ್ಪಿಯವರ ಸ್ಪಷ್ಟ ಸೂಚನೆ ಹಿನ್ನಲೆ ಪೊಲೀಸರು ಕ್ಲಬ್‌

ಕ್ಲಬ್ ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಿಷೇಧ- ಪೊಲೀಸರಿಂದ ಪರಿಶೀಲನೆ Read More »

ಕರಾವಳಿ

ಹೆಣ ಹೂತಿದ್ದ ಸ್ಥಳ ಗುರುತು ಮಾಡ್ತೇನೆ ಎಂದ ಅಪರಿಚಿತ ವ್ಯಕ್ತಿ..! ಎಸ್ಪಿ ಭೇಟಿಗೆ ಮಂಗಳೂರಿಗೆ ಬಂದ ವಕೀಲರ ತಂಡ

(ನ್ಯೂಸ್ ಕಡಬ) newskadaba.com ಜೂ. 27. ಧರ್ಮಸ್ಥಳದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವ್ಯಕ್ತಿಯೊಬ್ಬ ಪೊಲೀಸರ ಮುಂದೆ ಹೇಳಿದ್ದ ವಿಚಾರಗಳ ಕುರಿತು ಇದೀಗ ಬೆಂಗಳೂರಿನ ವಕೀಲರ ತಂಡ ಮಂಗಳೂರು ಎಸ್‌ಪಿ ಕಚೇರಿಗೆ ಆಗಮಿಸಿದೆ.   ದ.ಕ. ಎಸ್ಪಿಯನ್ನು ಭೇಟಿ ಮಾಡಿ ದಾಖಲೆ ನೀಡುವುದಾಗಿ ಇತ್ತೀಚೆಗೆ ವಕೀಲರೊಬ್ಬರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದರು. ಇದೀಗ ಎಸ್‌ಪಿ ಭೇಟಿಗಾಗಿ ವಕೀಲರ ತಂಡ ಮಂಗಳೂರಿಗೆ ಆಗಮಿಸಿದೆ.

ಹೆಣ ಹೂತಿದ್ದ ಸ್ಥಳ ಗುರುತು ಮಾಡ್ತೇನೆ ಎಂದ ಅಪರಿಚಿತ ವ್ಯಕ್ತಿ..! ಎಸ್ಪಿ ಭೇಟಿಗೆ ಮಂಗಳೂರಿಗೆ ಬಂದ ವಕೀಲರ ತಂಡ Read More »

ಕರ್ನಾಟಕ

ಭದ್ರತಾ ಕಾಳಜಿಯಿಂದ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್..!

(ನ್ಯೂಸ್ ಕಡಬ) newskadaba.com ಜೂ. 27. ಭದ್ರತಾ ಕಾಳಜಿಯಿಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಕಪ್ಪು ಬಣ್ಣದ ಸಂಪೂರ್ಣ ಬುಲೆಟ್‌ ಪ್ರೂಫ್ ಕಾರನ್ನು ಖರೀದಿ ಮಾಡಿದ್ದಾರೆ.   ಸಲ್ಮಾನ್ ಖಾನ್ ಅವರು ಖರೀದಿಸಿರುವ ಮರ್ಸಿಡೀಸ್ ಮೇಬ್ಯಾಕ್ ಜಿಎಸ್‌ಎಲ್ 600 ಎಸ್‌ಯುವಿ ಕಾರಿನ ಬೆಲೆ 3.4 ಕೋಟಿ ರೂ. ನಿಂದ ಆರಂಭವಾಗುತ್ತದೆ. ಕಾರಿನ ಒಳಗಡೆ ತನಗೆ ಬೇಕಾದಂತೆ ವಿನ್ಯಾಸ ಮಾಡಿದ್ದರಿಂದ ಬೆಲೆ ಮತ್ತಷ್ಟು ಹೆಚ್ಚಾಗಲಿದೆ.   ಕೃಷ್ಣಮೃಗ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಖಾನ್‌ಗೆ ಜೀವ

ಭದ್ರತಾ ಕಾಳಜಿಯಿಂದ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್..! Read More »

ಸಿನಿಮಾ

ಹುಲಿಗಳ ಅಸಹಜ ಸಾವು ಪ್ರಕರಣ – ಐವರನ್ನು ವಶಕ್ಕೆ ಪಡೆದು ವಿಚಾರಣೆ

(ನ್ಯೂಸ್ ಕಡಬ) newskadaba.com ಜೂ. 27.  ಮಹದೇಶ್ವರ ಬೆಟ್ಟದಲ್ಲಿ ಹುಲಿ ಮತ್ತು ನಾಲ್ಕು ಮರಿಗಳ ಅಸ್ವಾಭಾವಿಕ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗುರುವಾರ ಆದೇಶಿಸಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.   ಈ ಬಗ್ಗೆ ದುಃಖ ವ್ಯಕ್ತಪಡಿಸಿದ ಖಂಡ್ರೆ, ತಕ್ಷಣವೇ ಇದರ ಬಗ್ಗೆ ತನಿಖೆಗೆ ಆದೇಶಿಸಿದ್ದರು, ಇದನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ನೇತೃತ್ವದ ತಂಡವು ನೇತೃತ್ವ ವಹಿಸಿದ್ದು, ಪ್ರಕರಣವನ್ನು

ಹುಲಿಗಳ ಅಸಹಜ ಸಾವು ಪ್ರಕರಣ – ಐವರನ್ನು ವಶಕ್ಕೆ ಪಡೆದು ವಿಚಾರಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿಯ ಆಂತರ್ ಶಕ್ತಿ ಉದ್ದೀಪನ ಕಾರ್ಯದಿಂದ ಜ್ಞಾನಾತ್ಮಕ ವಿಕಾಸ ಸಾಧ್ಯ- ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ ಪಳಂಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಇದರ ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶಶಿಧರ ಪಳಂಗಾಯ ಅವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಭೌತಿಕವಾದ ಹಾಗೂ ಬೌದ್ಧಿಕವಾದ ಅಂತಸತ್ವ ಇರುತ್ತದೆ. ಅಂತರ್ ಶಕ್ತಿಯನ್ನು ಉದ್ದೀಪನ ಗೊಳಿಸುವ ರಚನಾತ್ಮಕ ಕಾರ್ಯಕ್ರಮಗಳು ಅವರ

ವಿದ್ಯಾರ್ಥಿಯ ಆಂತರ್ ಶಕ್ತಿ ಉದ್ದೀಪನ ಕಾರ್ಯದಿಂದ ಜ್ಞಾನಾತ್ಮಕ ವಿಕಾಸ ಸಾಧ್ಯ- ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ ಪಳಂಗಾಯ Read More »

ಕರಾವಳಿ

ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 27.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಗುರುವಾರದಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯ ಪ್ರಗತಿ ಪರಿಶೀಲಿಸಿ, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ತೀರಾ ಕಡಿಮೆ ಇದೆ. ಶೀಘ್ರವಾಗಿ ಪೌಷ್ಟಿಕ ಆಹಾರ ಪೂರೈಸುವ ಕಾರ್ಯಕ್ರಮದಲ್ಲಿ

ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ Read More »

ಕರಾವಳಿ

ಮಂಗಳೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಡಿತರ ಅಂಗಡಿಗಳಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 27.  ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು, 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆಯು ಸರ್ಮಪಕವಾಗಿ ಅನುಷ್ಟಾನಗೊಳ್ಳುತ್ತಿರುವ ಬಗ್ಗೆ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ನೇತೃತ್ವದಲ್ಲಿ ನಾಗೂರಿ, ಅಡ್ಯಾರ್, ಮಲ್ಲೂರು, ಬೊಂಡಂತಿಲ, ನೀರುಮಾರ್ಗ, ಮೇರ್ಲಪದವು, ಪೆರ್ಮಂಕಿ ಉಳಾಯಿಬೆಟ್ಟು ಮತ್ತಿತರ ಕಡೆ ಪಡಿತರ ಅಂಗಡಿಗಳಿಗೆ ಭೇಟಿ ನೀಡಲಾಯಿತು. ನ್ಯಾಯಬೆಲೆ ಅಂಗಡಿಗಳಲ್ಲಿ ಸ್ವಚ್ಚತೆ ಕಾಪಾಡುವಂತೆ, ನ್ಯಾಯಬೆಲೆ ಅಂಗಡಿಗಳಲ್ಲಿ ಫಲಕ ಅಳವಡಿಸುವಂತೆ, ನಿರ್ದಿಷ್ಟ ಅಂಗಡಿಯ

ಮಂಗಳೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಡಿತರ ಅಂಗಡಿಗಳಿಗೆ ಭೇಟಿ Read More »

ಕರಾವಳಿ

ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 27. 2025ನೇ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ ಮೆಂಟ್ ಕೋರ್ಸ್‍ ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜುಲೈ 10. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ, ಪ್ರವೇಶ

ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top