ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿಯಲ್ಲಿ ➤ ಪ.ಪಂಗಡ ವಿವಿಧ ಸೌಲಭ್ಯ ಪಡೆಯಲು ಅರ್ಜಿಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಕಾರ್ಯಕ್ರಮಗಳಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಹಂದಿ ಸಾಕಾಣಿಕೆ ಸೌಲಭ ಪಡೆಯುವ ಅರ್ಜಿದಾರ ವಯಸ್ಸು 18 ರಿಂದ 60 ವರ್ಷದೊಳಗಿರಬೇಕು. ಅರ್ಜಿದಾರರ ವಾರ್ಷಿಕ ಆದಾಯ ರೂ.1.50ಲಕ್ಷಗಳ ಒಳಗಡೆ ಇರಬೇಕು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ […]





