ಅಪರಾಧ ಚಟುಚಟಿಕೆಗಳನ್ನು ಮಟ್ಟಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.➤ ಸಚಿವ ಯು.ಟಿ ಖಾದರ್ ಸ್ಪಷ್ಟ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ರವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಮಾದಕ ವಸ್ತುಗಳ ಚಟುವಟಿಕೆ, ಅಕ್ರಮ ಗೋ ಸಾಗಾಟ ಸೇರಿದಂತೆ ಅಪರಾಧ ಚಟುಚಟಿಕೆಗಳನ್ನು ಮಟ್ಟಹಾಕುಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಲೋಪವಾದರೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.ದ.ಕ. ಜಿಲ್ಲೆಯ ಶಾಸಕರು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಜತೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ವಿಶೇಷ ಸಭೆಯ ಬಳಿಕ ಸುದ್ದಿಗಾರರ […]



