newskadaba

 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಲು ನಿಗದಿಪಡಿಸಿದ ಕೊನೆಯ ದಿನ ಜುಲೈ 3 ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಕೊನೆಯ ದಿನ […]

 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನ Read More »

ಕರಾವಳಿ

ವಿಟ್ಲ ಶಿಶು ಅಭಿವೃದ್ಧಿ ಇಲಾಖಾವತಿಯಿಂದ ಅಲ್ಪಾವಧಿ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8. ವಿಟ್ಲ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ 2019-20 ನೇ ಸಾಲಿಗೆ ಬಾಹ್ಯ ಮೂಲದಿಂದ ಏಜೆನ್ಸಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ 1 ಗ್ರೂಪ್ ಡಿ ಹುದ್ದೆ ಮತ್ತು 1 ಡಾಟ ಎಂಟ್ರಿ ಅಪರೇಟರ್ ಹುದ್ದೆಗಳ ಸೇವೆ ಒದಗಿಸುವ ಬಗ್ಗೆ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಜೂನ್ 14 ಕೊನೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಟ್ಲ ಶಿಶು ಅಭಿವೃದ್ಧಿ ಇಲಾಖಾವತಿಯಿಂದ ಅಲ್ಪಾವಧಿ ಟೆಂಡರ್ ಆಹ್ವಾನ Read More »

ಕರಾವಳಿ

ಸಸಿಗಳನ್ನು ನೆಡುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ನೆಹರೂ ಯುವ ಕೇಂದ್ರ ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವರು ಭಾರತ ಸರ್ಕಾರ ಹಾಗೂ ಪ್ರಜ್ವಲ್ ಯುವಕ ಮಂಡಲ (ರಿ) ಇವರ ಸಹಯೋಗದೊಂದಿಗೆ ನಗರದ ಕುದ್ಮುಲ್ ರಂಗರಾವ್ ಮೆಮೋರಿಯಲ್, ಬಾಬು ಗುಡ್ಡ ಪರಿಸರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನೆಹರೂ ಯುವ ಕೇಂದ್ರ ಮಂಗಳೂರು ಅದರ ಜಿಲ್ಲಾ ಸಮನ್ವಯಾಧಿಕಾರಿ ರಘುವೀರ್ ಸೂಟರ್‍ಪೇಟೆ ರವರು ಉದ್ಘಾಟಿಸಿ ಸ್ವಚ್ಛ ಹಾಗೂ ಆರೋಗ್ಯಪೂರ್ಣ

ಸಸಿಗಳನ್ನು ನೆಡುವ ಕಾರ್ಯಕ್ರಮ Read More »

ಕರಾವಳಿ

ಕಾನೂನು ಅರಿವು ಹಾಗೂ ನೆರವು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೊಜನಾ ಸಂಘ, ಪೊಲೀಸ್ ಇಲಾಖೆ, ವಕೀಲರ ಸಂಘ, ಮಕ್ಕಳ ಸಹಾಯವಾಣಿ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನರಲ್ಲಿ ಕಾನೂನಿನ ನೆರವು ಹಾಗೂ ನೆರವಿನ ಬಗ್ಗೆ ತಿಳಿಯಪಡಿಸಲು ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಬರುವ ಜೂನ್ 12 ರಂದು ಪೂರ್ರ್ವಾಹ್ನ 10 ಗಂಟೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾನೂನು

ಕಾನೂನು ಅರಿವು ಹಾಗೂ ನೆರವು Read More »

ಕರಾವಳಿ

ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.8. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಂಕ್ಷಿಗಳ ಸೇವಾ ಕೇಂದ್ರ ಹಾಗೂ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ನಡೆಸಲು ಉದ್ಯೋಗ ಮೇಳ ಕಾರ್ಯಕ್ರಮವನ್ನು ಆಯೋಜಿಸಿದೆ. ಇದೇ ಬರುವ ಜೂನ್12 ರಂದು ಪೂರ್ವಾಹ್ನ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಕದ್ರಿ ಹಿಲ್ಸ್, ನಂತೂರು, ಮಂಗಳೂರು, ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ

ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳ Read More »

ಕರಾವಳಿ

ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಮಂಗಳೂರಿನ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಜೂನ್ 8 ಮತ್ತು 9 ರಂದು (ಶನಿವಾರ ಮತ್ತು ಆದಿತ್ಯವಾರ) ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ತೋಟಗಾರಿಕಾ ಇಲಾಖಾ ಸಹಯೋಗದೊಂದಿಗೆ ಆಚರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ಇತರೆ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ವಿವಿಧ ಹಣ್ಣುಗಳು, ಔಷದೀಯ ಸಸಿಗಳು, ಕಸಿ ಗಿಡಗಳು, ಬೀಜಗಳು, ಖಾದಿ

ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಪ್ರಸ್ತುತ ನೀರಿನ ಅಭಾವವಿರುವ ಹಿನ್ನಲೆಯಲ್ಲಿ ಪಡಿತರ ಪದ್ಧತಿಯನ್ನು ಅನುಸರಿಸಲಾಗುತ್ತಿದೆ. ಜೂನ್ 5 ರಂದು ಮಳೆಯಾಗಿರುವುದರಿಂದ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ಅಲ್ಪ ಪ್ರಮಾಣದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಪಡಿತರ ಪದ್ದತಿಯನ್ನು ಪರಿಷ್ಕರಿಸಲಾಗಿದ್ದು, ಅದರಂತೆ ಪ್ರಸ್ತುತ ಜೂನ್ 6 ರಿಂದ ಜೂನ್ 9 ರವರೆಗೆ ನೀರು ಪೂರೈಕೆ ಸ್ಥಗಿತಗೊಳಿಸುವುದನ್ನು ಪುನರ್ ಪರಿಶೀಲಿಸಿ, ಪರಿಷ್ಕರಿಸಿ ಜೂನ್ 8 ರಂದು ಪೂರ್ವಾಹ್ನ 6 ಗಂಟೆಯಿಂದ 12 ರಂದು

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ Read More »

ಕರಾವಳಿ

ಚಾಲಕನ ನಿಯಂತ್ರಣತಪ್ಪಿ ಕಾರು ಪಲ್ಟಿ➤ತನಿಕೆ ವೇಳೆ ಅಕ್ರಮ ಗೋ ಸಾಗಾಟ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.7.ಮುಂಡಾಜೆ ಪರಿಸರದಲ್ಲಿ ಶುಕ್ರವಾರ ಬೆಳಗ್ಗೆ ಐಷಾರಾಮಿ ಕಾರೊಂದು ಪಲ್ಟಿ ಆಗಿತ್ತು.ತನಿಕೆ ವೇಳೆ ಅದು ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಕಾರು ಎಂದು ಪತ್ತಯಾಗಿದೆ.ಕಾರಿನಲ್ಲಿದ್ದ ದನಗಳು ಸಾವನ್ನಪ್ಪಿದ್ದು,ಆರೋಪಿಗಳು ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಒಟ್ಟು ಆರು ದನಗಳನ್ನು ಕೂಡಿ ಹಾಕಲಾಗಿತ್ತು. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಕಾರು ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಮರಿಗೆ ಬಿದ್ದಿದೆ ಎನ್ನಲಾಗಿದೆ. ಈ ಕಾರು ಬೆಂಗಳೂರು ನೋಂದಣಿ ಸಂಖ್ಯೆ ಹೊಂದಿದೆ. ಚಾರ್ಮಾಡಿಯ

ಚಾಲಕನ ನಿಯಂತ್ರಣತಪ್ಪಿ ಕಾರು ಪಲ್ಟಿ➤ತನಿಕೆ ವೇಳೆ ಅಕ್ರಮ ಗೋ ಸಾಗಾಟ ಪತ್ತೆ Read More »

ಕರಾವಳಿ

ರೆಂಜಿಲಾಡಿ➤ವಿಶೇಷ ದಾಖಲಾತಿ ಆಂದೋಲನ

(ನ್ಯೂಸ್ ಕಡಬ) newskadaba.com ರೆಂಜಿಲಾಡಿ, ಜೂನ್.7. ರೆಂಜಿಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2019-20ನೇ ಸಾಲಿನ ವಿಶೇಷ ದಾಖಲಾತಿ ಆಂದೋಲನ ನಡೆಯಿತು. ಶಾಲ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ. ಸಹಕಾರದೊಂದಿಗೆ ಗೋಳಿಯಡ್ಕ ಮೋಹಿತಾ, ಪದ್ಮಪ್ರಿಯ ಇವರ ಮನೆಗೆ ಬೇಟಿ ನೀಡಿ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು. ವಿಶೇಷ ದಾಖಲಾತಿ ಆಂದೋಲನದಲ್ಲಿ ಒಟ್ಟು 11 ವಿದ್ಯಾರ್ಥಿಗಳನ್ನು ಪ್ರಸಕ್ತ ವರ್ಷ ಶಾಲೆ ದಾಖಲಿಸಿಕೊಳ್ಳಲಾಯಿತು.ಮನೆ ಮನೆಗೆ ಬೇಟಿ ನೀಡಿ ವಿಶೇಷ ದಾಖಲಾತಿ ನಡೆಯಿತು.

ರೆಂಜಿಲಾಡಿ➤ವಿಶೇಷ ದಾಖಲಾತಿ ಆಂದೋಲನ Read More »

ಕರಾವಳಿ

ನೇರ್ಲ ಶಾಲಾ ಮಂತ್ರಿ ಮಂಡಲ ರಚನೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.7.ಇಚ್ಲಂಪಾಡಿ ನೇರ್ಲ ಉನ್ನತ ಹಿರಿಯ ಪ್ರಾಥಮಿಕ ಶಾಲಾ 2019-20ನೇ ಸಾಲಿನ ಮಂತ್ರಿಮಂಡಲವನ್ನು ಚುನಾವಣೆ ನಡೆಸುವ ಮೂಲಕ ಆಯ್ಕೆ ಮಾಡಲಾಯಿತು. ಮುಖ್ಯಮಂತ್ರಿಯಾಗಿ 8ನೇ ತರಗತಿಯ ಅನನ್ಯ, ಉಪಮುಖ್ಯಮಂತ್ರಿಯಾಗಿ ಸಹನಾ ಆಯ್ಕೆಯಾಗಿದ್ದಾರೆ.ಶಾಲಾ ಸಂಸತ್ತಿನ ಮಾರ್ಗದರ್ಶಕರಾಗಿ ಮುಖ್ಯ ಶಿಕ್ಷಕಿ ಶಾಂತಿ ವಿ. ಭಟ್, ಸಂಚಾಲಕರಾಗಿ ಸಂದೀಪ್ ಕುಮಾರ್ ಎಂ., ಉಸ್ತುವಾರಿ ಶಿಕ್ಷಕರಾಗಿ ಗಿರೀಶ್ ಎಚ್.ಎಂ., ಹಾಗೂ ಶಿಕ್ಷಕ ವೃಂಧ, ವಿದ್ಯಾರ್ಥಿಗಳು ಸಹಕರಿಸಿದರು.

ನೇರ್ಲ ಶಾಲಾ ಮಂತ್ರಿ ಮಂಡಲ ರಚನೆ Read More »

ಕರಾವಳಿ
Scroll to Top