newskadaba

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 12.  ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಗಣಿತದ ಪರಿಕರಗಳನ್ನು ಒಳಗೊಂಡ ಕಿಟ್ಟನ್ನು ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ.ಎಸ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ವಿತರಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ-ಶಿಕ್ಷಕರೇತರ ವೃಂದದವರು ಉಪಸ್ಥಿತರಿದ್ದರು.

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ Read More »

ಕರಾವಳಿ

ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ದೃಢೀಕರಣ ಕಡ್ಡಾಯ

(ನ್ಯೂಸ್ ಕಡಬ) newskadaba.com ಜೂ. 12. ಸಾಮಾನ್ಯ ಜನರು ಕೂಡಾ ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಪಡೆಯುವ ನಿಟ್ಟಿನಲ್ಲಿ ಜುಲೈ ಒಂದರಿಂದ ತತ್ಕಾಲ್‌ನಲ್ಲಿ ರೈಲು ಟಿಕೆಟ್‌ ಬುಕ್ ಮಾಡಲು ಆಧಾರ್ ದೃಢೀಕರಣ ಕಡ್ಡಾಯವಾಗಿರಲಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದೆ. ಈ ಕುರಿತು ಎಲ್ಲಾ ವಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಜುಲೈ 1 ರಿಂದ ಅನ್ವಯವಾಗುವಂತೆ ಆಧಾರ್ ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ಯೋಜನೆ ಅಡಿಯಲ್ಲಿ ಟಿಕೆಟ್‌ ಗಳನ್ನು ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೊರೇಷನ್(ಐಆರ್‌ಸಿಟಿಸಿ)ವೆಬ್‌ಸೈಟ್/ಅದರ ಆಪ್ ಮೂಲಕ ಬುಕ್

ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ದೃಢೀಕರಣ ಕಡ್ಡಾಯ Read More »

ಕರ್ನಾಟಕ

ರಹೀಂ ಕೊಳತ್ತಮಜಲು ಮನೆಗೆ ಸ್ಪೀಕರ್ ಯುಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskafaba.com ಬಂಟ್ವಾಳ, ಜೂ. 11. ಇತ್ತೀಚೆಗೆ ಹತ್ಯೆಗೀಡಾದ ಕೊಳತ್ತಮಜಲು ಅಬ್ದುಲ್ ರಹೀಂ ಮನೆಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭ ರಹೀಂ ಸಹೋದರ ಮಾತನಾಡಿ, ನನ್ನ ತಮ್ಮ ಅಮಾಯಕ, ನಾವು ಊರಿನಲ್ಲಿ ಹಿಂದೂ ಮುಸ್ಲಿಮ್ ಅಣ್ಣ ತಮ್ಮ ರೀತಿಯಲ್ಲಿ ಇದ್ದೇವೆ. ನನ್ನ ತಮ್ಮನನ್ನು ವಿನಾ ಕಾರಣ ಹತ್ಯೆ ಮಾಡಿದ್ದಾರೆ. ನಮಗೆ ನ್ಯಾಯ ಸಿಗಬೇಕು, ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಈ ಪ್ರಕರಣದಲ್ಲಿ 7, 8

ರಹೀಂ ಕೊಳತ್ತಮಜಲು ಮನೆಗೆ ಸ್ಪೀಕರ್ ಯುಟಿ ಖಾದರ್ ಭೇಟಿ Read More »

ಕರಾವಳಿ

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ ವಿಟ್ಲ ಪಿಎಸ್ಐ ಸಸ್ಪೆಂಡ್

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 11. ಜುಗಾರಿ ಅಡ್ಡೆಗೆ ದಾಳಿ ನಡೆಸಿದ ವಿಚಾರದಲ್ಲಿ ಹಣ ಬೇಡಿಕೆ ಒಡ್ಡಿದ ಆರೋಪದಡಿ ವಿಟ್ಲ ಎಸೈ ಕೌಶಿಕ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ವರದಿಯ ಪ್ರಕಾರ ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಸ್ಥಳಕ್ಕೆ ವಿಟ್ಲ ಪಿಎಸ್ಐ ಕೌಶಿಕ್ ರವರು ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದೇ ಇದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಪತ್ತೆಯಾಗಿತ್ತು.

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ ವಿಟ್ಲ ಪಿಎಸ್ಐ ಸಸ್ಪೆಂಡ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು..!

(ನ್ಯೂಸ್ ಕಡಬ) newskadaba.com ಜೂ. 11. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.   ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ. ಅರ್ಜಿಯ ವಾದಗಳನ್ನು ಮಂಗಳವಾರದಂದು ಆಲಿಸಿದ್ದ ಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೆ.ಲಕ್ಷ್ಮಣ್ ಅವರು ಸಿಬಿಐ ನ್ಯಾಯಾಲಯದ ತೀರ್ಪನ್ನು ತಾತ್ಕಾಲಿಕವಾಗಿ ತಡೆಹಿಡಿದು ತೀರ್ಪು

ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಜೂನ್ 12 ಮತ್ತು 13ರಂದು ಭಾರೀ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಹವಾಮಾನ ಇಲಾಖೆಯ ವರದಿ ಪ್ರಕಾರ ಜೂನ್ 12 ಮತ್ತು ಜೂನ್ 13ರಂದು ರಾಜ್ಯ ರಾಜಧಾನಿ ಸೇರಿದಂತೆ ಸುಮಾರು 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲಾ ಜಿಲ್ಲೆಗಳಿಗೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ. ಉಳಿದ

ರಾಜ್ಯದಲ್ಲಿ ಜೂನ್ 12 ಮತ್ತು 13ರಂದು ಭಾರೀ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಅವರು ಬುಧವಾರದಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶ ವಿ.ಕಾಮೇಶ್ವರ ರಾವ್, ಇಂಧನ ಸಚಿವ ಕೆ.ಜೆ.ಜಾರ್ಜ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಬ್ಬಂದಿಗಳು ಮತ್ತು ಆಡಳಿತ ಸುಧಾರಣಾ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ಕರ್ನಾಟಕ ಕಬಡ್ಡಿ ತಂಡಕ್ಕೆ ಕಡಬದ ಝಮೀರ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಕರ್ನಾಟಕ ಕಬಡ್ಡಿ ತಂಡಕ್ಕೆ ಕಡಬ ತಾಲೂಕಿನ ಕೊಯಿಲದ ನಿವಾಸಿ ಝಮೀರ್ ಆಯ್ಕೆಯಾಗಿದ್ದು, 2 ದಿನಗಳ ಹಿಂದೆ ಆಂಧ್ರಪ್ರದೇಶದ ಮಚಲೀಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೀಚ್ ಕಬಡ್ಡಿಯಲ್ಲಿ ಆಟವಾಡಿ ಉತ್ತಮ ಪ್ರದರ್ಶನ ತೋರಿದ್ದಾರೆ. ಝಮೀರ್ ಅವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ದ್ವಿತೀಯ ವರ್ಷದ ಬಿ.ಎ. ತರಗತಿ ವಿದ್ಯಾರ್ಥಿಯಾಗಿರುತ್ತಾರೆ. ಝಮೀರ್ ತನ್ನ ಪ್ರಾಥಮಿಕ ಶಿಕ್ಷಣವನ್ನು ಆತೂರು ಬದ್ರಿಯಾ ಸ್ಕೂಲ್ ನಲ್ಲಿ ಮುಗಿಸಿ, ಪ್ರೌಢ ಶಿಕ್ಷಣವನ್ನು ಕಡಬದ ಸೈಂಟ್ ಜೋಕಿಮ್ ಪ್ರೌಢ ಶಾಲೆಯಲ್ಲಿ,

ಕರ್ನಾಟಕ ಕಬಡ್ಡಿ ತಂಡಕ್ಕೆ ಕಡಬದ ಝಮೀರ್ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳದ ರೈಲ್ವೆ ಹಳಿ ಸಮೀಪ ಅಣ್ಣನನ್ನು ತಮ್ಮನೇ ಮೈಮೇಲೆ ಡೀಸೆಲ್ ಮಿಶ್ರಿತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹನುಮಪ್ಪ (42) ಎಂಬವರು ಆಸ್ಪತ್ರೆಯಲ್ಲಿ ಸೋಮವಾರದಂದು ಕೊನೆಯುಸಿರೆಳೆದಿದ್ದಾರೆ. ವರದಿಗಳ ಪ್ರಕಾರ, ಆರೋಪಿ ನಿಂಗಪ್ಪ (21) ತನ್ನ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಆರಂಭದಲ್ಲಿ ಕೊಲೆ ಯತ್ನ ಪ್ರಕರಣ ಎಂದು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ

ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಜೂ. 11. ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಮಹಿಳೆಯೊಬ್ಬಳು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಹಲ್ಲೆ ಮಾಡಿದ ಘಟನೆ ಕುಂದಾಪುರದ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್‌ ಶಾಪ್‌ ನಲ್ಲಿ ನಡೆದಿದೆ.   ಹಲ್ಲೆಗೊಳಗಾದ ಯುವತಿಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಯಾಸ್ಮಿನ್‌ ಹಲ್ಲೆಗೈದ ಆರೋಪಿಯಾಗಿದ್ದು, ಈಕೆ ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದು ಔಷಧ ಖರೀದಿಸಿ 500ರ ನೋಟು ಕೊಟ್ಟಿದ್ದಳು. ಈ ವೇಳೆ ಯುವತಿ ಚಿಲ್ಲರೆ ಇಲ್ಲ ಎಂದಾಗ ಯಾಸ್ಮಿನ್‌ ಅದೇ ವಿಚಾರಕ್ಕೆ ಯುವತಿಯ ಮೇಲೆ

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top