ಮಾಜಿ ಸಚಿವ ಖಮರುಲ್ ಇಸ್ಲಾಂ ವಿಧಿವಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.18, ಮಾಜಿ ಸಚಿವ ಖಮರುಲ್ ಇಸ್ಲಾಂ(69) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು. 1974ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ ಇವರು ಕಲುಬುರಗಿ ಉತ್ತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ, 3 ಬಾರಿ ಮುಸ್ಲಿಂ ಲೀಗ್‌ನಿಂದ ಹಾಗೂ 3 ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು. ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಸೇವೆ ಸಲ್ಲಿಸಿದ ಅವರನ್ನು ಸಂಪುಟ ಪುನಾರಚನೆ ವೇಳೆ ಸಂಪುಟದಿಂದ ಕೈಬಿಡಲಾಗಿತ್ತು. […]
ಮಾಜಿ ಸಚಿವ ಖಮರುಲ್ ಇಸ್ಲಾಂ ವಿಧಿವಶ Read More »
ಕರ್ನಾಟಕ





