newskadaba

ಜೂನ್ 13 ರಂದು ಉಸ್ತುವಾರಿ ಸಚಿವರಿಂದ ಜಿಲ್ಲೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜೂನ್ 13 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 7:25- ಸರ್ಕ್ಯೂಟ್ ಹೌಸ್, 9 ಗಂಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 12:4ಕ್ಕೆ ವಿಮಾನ ನಿಲ್ದಾಣದಿಂದ ಹೈದರಾಬಾದ್‍ ಗೆ ನಿರ್ಗಮಿಸಲಿದ್ದಾರೆ.

ಜೂನ್ 13 ರಂದು ಉಸ್ತುವಾರಿ ಸಚಿವರಿಂದ ಜಿಲ್ಲೆ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಸಂಸ್ಥೆಯ ಆವರಣದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸಂಧ್ಯಾ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭೂಮಿಯ ಮೇಲಿನ ಜೀವ ವೈವಿಧ್ಯವನ್ನು ರಕ್ಷಿಸಲು ಪರಿಸರ ಪರಿಪೂರ್ಣವಾಗಿ ನಿರ್ಮಾಣಗೊಂಡಿದೆ; ಇಂದು ಮನುಷ್ಯನ ಸ್ವಾರ್ಥ, ದುರಾಸೆಯಿಂದಾಗಿ ಪರಿಸರ ಅಸಮತೋಲನಗೊಂಡಿದೆ. ಜೀವವೈವಿಧ್ಯವನ್ನು, ಸಸ್ಯ ವೈವಿಧ್ಯವನ್ನು ಕಾಪಾಡಿಕೊಂಡು ಹೋಗುವ ದೃಢವಾದ ನಿರ್ಧಾರವನ್ನು

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11.  ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕ್ಯಾ. ಚೌಟ, ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ಕಾಲ್ತುಳಿತ ಪ್ರಕರಣ- ಜೂನ್ 12ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಜೂ. 10. ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಳ್ಳಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ನಡೆಯಿತು. ಘಟನೆಗೆ ಸಂಬಂಧಪಟ್ಟಂತೆ ವಸ್ತುಸ್ಥಿತಿ ವರದಿಯನ್ನು ಜೂ. 12ರಂದು ಮುಚ್ಚಿದ ಲಕೊಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ. ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ನಮ್ಮ ಪ್ರತಿಕ್ರಿಯೆಯನ್ನು ನಾವಿನ್ನೂ

ಕಾಲ್ತುಳಿತ ಪ್ರಕರಣ- ಜೂನ್ 12ಕ್ಕೆ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಜೂ. 10. ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲು ದೂರದಲ್ಲಿ ಬೃಹತ್ ಕಂಟೈನರ್ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿರುವ ಹಡಗಿನ ಆರು ಮಂದಿ ಸಿಬ್ಬಂದಿಗಳನ್ನು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೇರೀತಿ ರಕ್ಷಿಸಲ್ಪಟ್ಟ ಉಳಿದ 12 ಮಂದಿಯನ್ನೂ ಮಂಗಳೂರಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ದುರಂತಕ್ಕೀಡಾದ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಹೊತ್ತ ಐಎನ್ಎಸ್ ಸೂರತ್ ಸೋಮವಾರದಂದು ತಡರಾತ್ರಿ ಪಣಂಬೂರಿನ ಹೊಸ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಆಗಮಿಸಿದೆ. ಅಲ್ಲಿಂದ ಆರು ಮಂದಿ

ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿ.ದಯಾನಂದ್ ಸೇರಿ ಮೂವರ ಅಮಾನತು ಆದೇಶ ರದ್ದುಗೊಳಿಸುವಂತೆ ಸಿಎಂಗೆ ಪತ್ರ..!

(ನ್ಯೂಸ್ ಕಡಬ) newskadaba.com ಜೂ. 10. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಹಿತ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದುಪಡಿಸಬೇಕೆಂದು ರಾಜ್ಯ ಸರಕಾರಕ್ಕೆ ಇಂಡಿಯನ್ ಪೊಲೀಸ್ ಫೌಂಡೇಶನ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಪೂರ್ವ ತಯಾರಿ ಇಲ್ಲದೇ ಏಕಾಏಕಿ ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಬರುವಂತೆ ಆಹ್ವಾನಿಸಿತ್ತು. ಆರಂಭದಲ್ಲೇ ಭದ್ರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದರು. ಊಹೆಗೂ

ಬಿ.ದಯಾನಂದ್ ಸೇರಿ ಮೂವರ ಅಮಾನತು ಆದೇಶ ರದ್ದುಗೊಳಿಸುವಂತೆ ಸಿಎಂಗೆ ಪತ್ರ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಜೂ. 10. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಸೇವಾಪ್ರತಿನಿಧಿಗಳು ಹಾಗೂ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರವು ಶ್ರೀ ದುರ್ಗಾಂಭಿಕಾ ಸಭಾಭವನ ಕಡಬದಲ್ಲಿ ನಡೆಯಿತು. ಕಾರ್ಯಗಾರವನ್ನು ಉಧ್ಘಾಟಿಸಿ ಮಾರ್ಗದರ್ಶನ ನೀಡಿದ ಕರಾವಳಿ ಪ್ರಾದೇಶಿಕ ವ್ಶಾಪ್ತಿಯ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣರವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳನ್ನು ಗ್ರಾಮಮಟ್ಟದಲ್ಲಿ ಅನುಷ್ಟಾನ ಮಾಡುತ್ತಿರುವ ಸೇವಾಪ್ರತಿನಿಧಿಗಳ ಕೆಲಸವು ಹೆಚ್ಚು ಮಹತ್ವ ತರುವಂತಹುದು. ಪೂಜ್ಯ ಹೆಗ್ಗಡೆಯವರ

ಕಡಬ: ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರ Read More »

ಕರಾವಳಿ

ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ..!

(ನ್ಯೂಸ್ ಕಡಬ) newskadaba.com ಜೂ. 10. ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು, ಕೋಡಿ ಸೇತುವೆಯ ಮೇಲೆ ತನ್ನ ಸ್ಕೂಟಿಯನ್ನು ಇರಿಸಿ ನದಿಗೆ ಹಾರಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್ ಎಂದು ಗುರುತಿಸಲಾಗಿದೆ. ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮೃತ ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ವಾಸಿಸುತ್ತಿದ್ದರು. ವರದಿಗಳ ಪ್ರಕಾರ, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟಿದ್ದರು. ಬಳಿಕ ಅವರ

ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿಗೆ ತೆರಳಿದ ಸಿಎಂ ಸಿದ್ದು ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ..!?

(ನ್ಯೂಸ್ ಕಡಬ) newskadaba.com ಜೂ. 10. ರಾಷ್ಟ್ರ ರಾಜಧಾನಿಯಲ್ಲಿ ಇಂದು ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಲಿದೆ. ಇದರಿಂದಾಗಿ ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು, ಹಲವು ಖಾತೆಗಳು ಬದಲಾವಣೆಯಾಗುವ ನಿರೀಕ್ಷೆಯಿದೆ. ಈ ಕುರಿತು ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಕೂಡ ಹೈಕಮಾಂಡ್ ಗೆ ಸಿಎಂ, ಡಿಸಿಎಂ ವರದಿ ಸಲ್ಲಿಸಲಿದ್ದಾರೆ. ಸಭೆಯಲ್ಲಿ ಕೆ.ಸಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಮತ್ತಿತರರಲಿದ್ದಾರೆ. ವರಿಷ್ಠರ

ದೆಹಲಿಗೆ ತೆರಳಿದ ಸಿಎಂ ಸಿದ್ದು ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ನಗರದ ಹೊರವಲಯದ ಕುಡುಪುವಿನಲ್ಲಿ ಬಾಯಾರಿಕೆ ಆದಾಗ ನೀರು ಕೇಳಿದಕ್ಕೆ ಸಂಘಪರಿವಾರದ ಗೂಂಡಾಗಳಿಂದ ಗುಂಪು ದಾಳಿಯ ಮೂಲಕ ಹತ್ಯೆಯಾದ ಕೇರಳದ ವಯನಾಡಿನ ಅಶ್ರಫ್ ಹಾಗೂ ಬಜರಂಗದಳದ ಕಿರಾತಕರ ಪೂರ್ವ ಯೋಜನೆಯ ಮತ್ತು ಸಂಘಟಿತ ಷಡ್ಯಂತ್ರದಿಂದ ತನ್ನ ಗೆಳೆಯ ಬಜರಂಗದಳದ ಕಾರ್ಯಕರ್ತ ದೀಪಕ್ ಮತ್ತು ತಂಡದಿಂದ ವಂಚನೆಯ ಮೂಲಕ ಅಮಾನುಷವಾಗಿ ಕೊಲೆಯಾದ ಬಂಟ್ವಾಳ ತಾಲೂಕಿನ ಕೊಳ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ  ಹಾಗೂ ದಲಿತ ಯುವಕ ಕೀರ್ತಿ ಮತ್ತು ಫಾಝಿಲ್ ಕೊಲೆ ಪ್ರಕರಣದ

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top