ಕುತ್ತಾರು: ಯುವಕನಿಗೆ ಚೂರಿ ಇರಿತ ► ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಪ್ರಕರಣಗಳು
(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ರಾಣಿಪುರದಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಅಂಬ್ಲಮೊಗರು ಕೋಟ್ರಗುತ್ತು ನಿವಾಸಿ ಚಿರಂಜೀವಿ(24) ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಮೂವರು ಅಪರಿಚಿತರು ತಲೆಗೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಚಿರಂಜೀವಿಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ಕುತ್ತಾರು: ಯುವಕನಿಗೆ ಚೂರಿ ಇರಿತ ► ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಪ್ರಕರಣಗಳು Read More »
ಕರಾವಳಿ









