newskadaba

ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ಜು.01. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದುದರ ಪರಿಣಾಮ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಾರು ಢಿಕ್ಕಿ ಹೊಡೆದು ಚರಂಡಿಗೆ ಇಳಿದರೂ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.bi

ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ

ಜಿಎಸ್‌ಟಿ ಗೆ ಪ್ರಧಾನಿ ಮೋದಿಯಿಂದ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,ಜು.01. ಸ್ವಾತಂತ್ರದ ನಂತರ ಭಾರತದ ‘ಅತಿ ದೊಡ್ಡ ತೆರಿಗೆ ಸುಧಾರಣೆ’ ಎಂದು ಬಣ್ಣಿಸಲಾದ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಶನಿವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ. ಹೊಸದಿಲ್ಲಿಯ ಸಂಸತ್ ಭವನದ ಐತಿಹಾಸಿಕ ಸೆಂಟ್ರಲ್ ಭವನದಲ್ಲಿ ರಾತ್ರಿ 11:00 ಗಂಟೆಗೆ ಆರಂಭ ಗೊಂಡ ವಿಶೇಷ ಅಧಿವೇಶನದಲ್ಲಿ ಮಧ್ಯರಾತ್ರಿಯ ಬಳಿಕ ರಾಷ್ಟ್ರ ಪತಿ ಪ್ರಣವ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಬೆಲ್ ಹೊಡೆಯುವ ಮೂಲಕ ಜಿಎಸ್‌ಟಿಗೆ ಅಧಿಕೃತ ಚಾಲನೆ ನೀಡಿದರು.   ಲೋಕಸಭಾ ಸ್ಪೀಕರ್

ಜಿಎಸ್‌ಟಿ ಗೆ ಪ್ರಧಾನಿ ಮೋದಿಯಿಂದ ಅಧಿಕೃತ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಹೆದ್ದಾರಿ ಬದಿಯಲ್ಲಿನ ಬಾರ್ ಬಂದ್

(ನ್ಯೂಸ್ ಕಡಬ) newskadaba.com ಕಡಬ, ಜೂ.30. ಹೆದ್ದಾರಿ ಬದಿಗಳಲ್ಲಿ ಕಾರ್ಯಾಚರಿಸುತ್ತಿದ್ದ ಬಾರ್ ಗಳನ್ನು 220 ಮೀಟರ್ ದೂರಕ್ಕೆ ಸ್ಥಳಾಂತರಿಸಬೇಕೆನ್ನುವ ಸುಪ್ರೀಂ ಕೋರ್ಟ್ ಆದೇಶವು ನಾಳೆಯಿಂದ ಜಾರಿಗೆ ಬರಲಿದೆ‌. ಮೊದಲು ಹೆದ್ದಾರಿಯಿಂದ 500 ಮೀ. ಅಂತರ ಇರಬೇಕೆಂದು ನೀಡಲಾಗಿದ್ದ ಆದೇಶವನ್ನು ತಿದ್ದುಪಡಿ ಮಾಡಿರುವ ಸುಪ್ರೀಂಕೋರ್ಟ್ 220 ಮೀ. ಅಂತರವನ್ನು ನಿಗದಿಪಡಿಸಿತ್ತು. ಈ ಆದೇಶದನ್ವಯ ದೇಶದಾದ್ಯಂತ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬದಿಗಳಲ್ಲಿನ ಬಾರ್ ಗಳಿಗೆ ಕುತ್ತು ಬಂದಿದ್ದು, ನಾಳೆಯಿಂದ ಮುಚ್ಚಬೇಕಾಗಿದೆ. ಕಡಬದಲ್ಲಿನ ಬಾರ್ ಗಳೂ ಈ ಆದೇಶದ ಹೊರತಾಗಿಲ್ಲ.

ನಾಳೆಯಿಂದ ಹೆದ್ದಾರಿ ಬದಿಯಲ್ಲಿನ ಬಾರ್ ಬಂದ್ Read More »

ರಾಷ್ಟ್ರೀಯ ನ್ಯೂಸ್

ಕಾರು ಬಸ್ಸು ಢಿಕ್ಕಿ: ಕಡಬದ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.30. ಇಲ್ಲಿಗೆ ಸಮೀಪದ ಕರಾಯದ ಕಲ್ಲೇರಿ ಎಂಬಲ್ಲಿ ಕಾರು ಹಾಗೂ ಸರಕಾರಿ ಬಸ್ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಕಡಬದ ವ್ಯಕ್ತಿ ಓರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಅಪರಾಹ್ನ ನಡೆದಿದೆ. ಗಾಯಾಳುವನ್ನು ಕಡಬದ ಕಳಾರ ನಿವಾಸಿ ಸಾಯಿಪ್ರಸಾದ್ ಪೈ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಕಾರು ಬಸ್ಸು ಢಿಕ್ಕಿ: ಕಡಬದ ವ್ಯಕ್ತಿ ಗಂಭೀರ Read More »

ಕರಾವಳಿ

ಜಿಲ್ಲೆಯಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು, ಜೂ.30. ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.30 ನೇ ಮಂಗಳವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜು.02 ರವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ರವರು ಮಂಗಳವಾರ ಆದೇಶಿಸಿದ್ದಾರೆ. ಅದರಂತೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು

ಜಿಲ್ಲೆಯಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ

(ನ್ಯೂಸ್ ಕಡಬ) newskadaba.com ಕೊಣಾಜೆ, ಜೂ.30. ಮನೆಯೊಂದರ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಮನೆಯೊಳಗಿದ್ದ ವೃದ್ಧ ದಂಪತಿಯನ್ನು ಬೆದರಿಸಿ ಸುಮಾರು ಒಂದು ಲಕ್ಷ ವೌಲ್ಯದ ನಗ-ನಗದು ದೋಚಿ ಪರಾರಿಯಾದ ಘಟನೆ ಇಂದು ಬೆಳಗ್ಗಿನ ಜಾವ ಕೊಣಾಜೆ ಗ್ರಾಮದ ನಡುಪದವಿನಲ್ಲಿ ನಡೆದಿದೆ. ದಸ್ತಾವೇಜು ಬರಹಗಾರರಾಗಿರುವ ನಡುಪದವು ನಿವಾಸಿ ಸದಾಶಿವಯ್ಯ ಎಂಬವರ ಮನೆಯಿಂದ ಈ ದರೋಡೆ ನಡೆದಿದೆ. ಸುಮಾರು 30 ಸಾವಿರ ರೂ. ನಗದು ಹಾಗೂ 20 ಗ್ರಾಮ ಚಿನ್ನಾಭರಣವನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಕಳ್ಳರು ಮನೆಯ

ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ Read More »

ಕರಾವಳಿ

ಹದಿಹರೆಯದ ಮಕ್ಕಳು ಹಾದಿ ತಪ್ಪದಂತೆ ಜಾಗ್ರತೆ ವಹಿಸಬೇಕೇ…?

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.30. ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮಕ್ಕಳೇ ಮಾದಕ ವಸ್ತುಗಳಿಗೆ ಆಕರ್ಷಿತರಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿದ್ದು, ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳ ಬಾಹ್ಯ ಚಟುವಟಿಕೆಗಳ ಮೇಲೆ ನಿಗಾ ಇಡಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಕರೆ ನೀಡಿದ್ದಾರೆ. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ) ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು

ಹದಿಹರೆಯದ ಮಕ್ಕಳು ಹಾದಿ ತಪ್ಪದಂತೆ ಜಾಗ್ರತೆ ವಹಿಸಬೇಕೇ…? Read More »

ಕರಾವಳಿ

ಜಿಲ್ಲೆಯ ಪೊಲೀಸರಿಗಿಂತ ಮೊದಲು ರಮಾನಾಥ ರೈಯವರನ್ನು ಎತ್ತಂಗಡಿ ಮಾಡಿ: ಹರಿಕೃಷ್ಣ ಬಂಟ್ವಾಳ್ ಕಿಡಿ

(ನ್ಯೂಸ್ ಕಡಬ) newskadaba.com ಜೂ.29. ಜಿಲ್ಲೆಯಲ್ಲಿ ನಡೆಯುತ್ತಿರುವ ಮತೀಯ ಗಲಭೆಗಳು ಮತ್ತು ಕೋಮು ಹಿಂಸಾಚಾರಗಳಿಗೆ ಪೊಲೀಸರನ್ನು ಮಾತ್ರ ವರ್ಗಾವಣೆ ಮಾಡಿದರೆ ಸಾಕಾಗುವುದಿಲ್ಲ. ಇದರಿಂದ ಯಾವುದೇ ಬದಲಾವಣೆಗಳು ಉಂಟಾಗುವುದಿಲ್ಲ. ಎಲ್ಲದಕ್ಕೂ ಮೊದಲು ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರಾದ ರಮಾನಾಥ ರೈಯವರನ್ನು ಎತ್ತಂಗಡಿ ಮಾಡಿದರೆ ಜಿಲ್ಲೆಯಲ್ಲಿ ಸಂಪೂರ್ಣ ಶಾಂತಿ ನೆಲೆಸುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹರಿಕೃಷ್ಣ ಬಂಟ್ವಾಳ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗೆ ಸಂಸ್ಕಾರವೆಂಬುದು ಇದ್ದರೆ, ಈ ಮಣ್ಣಿನ ಸಂಸ್ಕೃತಿ ಗೊತ್ತಿದ್ದರೆ ಕೂಡಲೇ ರಮಾನಾಥ ರೈಯವರನ್ನು

ಜಿಲ್ಲೆಯ ಪೊಲೀಸರಿಗಿಂತ ಮೊದಲು ರಮಾನಾಥ ರೈಯವರನ್ನು ಎತ್ತಂಗಡಿ ಮಾಡಿ: ಹರಿಕೃಷ್ಣ ಬಂಟ್ವಾಳ್ ಕಿಡಿ Read More »

ಕರಾವಳಿ

ಕಡಬ: ವ್ಯಕ್ತಿ ಕಾಣೆ – ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.29. ಠಾಣಾ ವ್ಯಾಪ್ತಿಯ ಅಲಂಕಾರು ಗ್ರಾಮದ ಪಜ್ಜಡ್ಕ ನಿವಾಸಿ ದುಗ್ಗಣ್ಣ ಗೌಡ ಎಂಬವರ ಪುತ್ರ ಉಮ್ಮಣ್ಣ ಗೌಡ(54) ಬುಧವಾರದಂದು ಕಡಬಕ್ಕೆಂದು ಮನೆಯಿಂದ ತೆರಳಿದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮನೆಯವರು ಸಂಬಂಧಿಕರ ಮನೆಯಲ್ಲೆಲ್ಲಾ ವಿಚಾರಿಸಿದ್ದು, ಪತ್ತೆಯಾಗದೆ ಇರುವುದರಿಂದ ಉಮ್ಮಣ್ಣ ಗೌಡರ ತಮ್ಮ ಉಮೇಶ್ ಗೌಡ ಗುರುವಾರದಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದವರ ಚಹರೆ: 5’6″ ಎತ್ತರವಾಗಿದ್ದು, ಸಪೂರ ಶರೀರ, ಬಿಳಿ ತಲೆಗೂದಲನ್ನು ಹೊಂದಿರುತ್ತಾರೆ. ಎಣ್ಣಿ ಕಪ್ಪು ಮೈಬಣ್ಣ ಹೊಂದಿದ್ದು,

ಕಡಬ: ವ್ಯಕ್ತಿ ಕಾಣೆ – ದೂರು Read More »

ಕರಾವಳಿ

ಸಾಲ ಮನ್ನಾ ಮಾಡಿರುವ ಸಿಎಂ ಗೆ ಕೇಂದ್ರದಿಂದ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.29. ರೈತರ ಸಾಲ ಮನ್ನಾ ಖುಷಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಖಡಕ್ ವಾರ್ನಿಂಗ್ ಕೊಟ್ಟಿದೆ. ರೈತರ ಉದ್ದಾರಕ್ಕಾಗಿ, ಉತ್ತಮ ರಸ್ತೆಗಳ ನಿರ್ಮಾಣದ ಹೆಸರಿನಲ್ಲಿ ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ತೆಗೆದುಕೊಂಡಿರುವ ಸಾಲವನ್ನೇ ಸರಿಯಾಗಿಯೇ ಬಳಸಿಕೊಂಡಿಲ್ಲ ಅಂತ ಗರಂ ಆಗಿ ಪತ್ರ ಬರೆದಿದೆ. ಮಿಲಿಯನ್ ಗಟ್ಟಲೆ ಸಾಲವಿದೆ.  ಆದರೆ ಆ ಯೋಜನೆಗಳು ಮಾತ್ರ ಶೇ.20ರಷ್ಟು ಮುಗಿದಿಲ್ಲ. ಇನ್ನು ಆ ಯೋಜನೆಗೆ ನಿಗದಿಪಡಿಸಿರುವ ಸಮಯ ಶೇ. 60ರಷ್ಟು ಮುಗಿದಿದೆ ಅಂತಾ ಖಾರವಾಗಿ ಪತ್ರ

ಸಾಲ ಮನ್ನಾ ಮಾಡಿರುವ ಸಿಎಂ ಗೆ ಕೇಂದ್ರದಿಂದ ಖಡಕ್ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top