newskadaba

ಡಿಸೆಂಬರ್ 21 ರಿಂದ ಕರಾವಳಿ ಉತ್ಸವ

(ನ್ಯೂಸ್ ಕಡಬ) newskadaba.com ಡಿ. 10. ಬಹುನಿರೀಕ್ಷಿತ ಕರಾವಳಿ ಉತ್ಸವವು ಡಿಸೆಂಬರ್ 21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಡಿಸೆಂಬರ್ 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸ್ಕೃತಿ, ಭಾಷೆ, ವೈವಿಧ್ಯಮಯ ಆಚರಣೆಗಳನ್ನು ಪ್ರದರ್ಶಿಸಬೇಕು. ವಿವಿಧ ಅಕಾಡೆಮಿಗಳೊಂದಿಗೆ ಸೇರಿ ಕಾರ್ಯಕ್ರಮ ನಡೆಸಲು […]

ಡಿಸೆಂಬರ್ 21 ರಿಂದ ಕರಾವಳಿ ಉತ್ಸವ Read More »

ಕರಾವಳಿ

ಮಾಜಿ ಸಿ.ಎಂ ಎಸ್.ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 10. ಮಾಜಿ ಸಿಎಂ ಎಸ್.ಎಂ ಕೃಷ್ಣರವರು ಬೆಳಗಿನ ಜಾವ ಸುಮಾರು 2.45ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆದು  ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ  ಎಸ್ಎಂ ಕೃಷ್ಣ ನಿಧನರಾಗಿದ್ದಾರೆ. ದೀರ್ಘ ಕಾಲದವರೆಗೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ  ಅವರು ರಾಜಕೀಯ ಅಂತ್ಯದ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕವೂ ಎಸ್ ಎಂ ಕೃಷ್ಣ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು

ಮಾಜಿ ಸಿ.ಎಂ ಎಸ್.ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಅಪಘಾತ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, . 09. ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನೋರ್ವ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಮಾನ್ವಿ ಹೊರವಲಯದಲ್ಲಿ ಸಂಭವಿಸಿದೆ. ಬೈಕ್‌ ಸವಾರನನ್ನು ಹುಣಸಿಹಾಳಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ (26) ಎಂದು ಗುರುತಿಸಲಾಗಿದೆ. ಬೈಕ್‌ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿ ರಿಮ್ಸ್‌ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರುಳಿದಿದ್ದಾರೆ. ಬೈಕ್‌ ಹಿಂದೆ ಕುಳಿತಿದ್ದ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ರಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದ ವೇಳೆ

ರಸ್ತೆ ಅಪಘಾತ: ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್

ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದೂ ಸಂಘಟನೆ ಕಾರ್ಯಾಚರಣೆ: 25 ಕ್ಕೂ ಅಧಿಕ ಜಾನುವಾರು ರಕ್ಷಣೆ

(ನ್ಯೂಸ್ ಕಡಬ)newskadaba.com ಚಾಮರಾಜನಗರ, ನ.25. ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 25 ಕ್ಕೂ ಅಧಿಕ‌ ಜಾನುವಾರುಗಳನ್ನು ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಕ್ಷಿಸಿರುವ ಘಟನೆ ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ ಬಳಿ ನಡೆದಿದೆ. ಟಿ.ನರಸೀಪುರ ಕಡೆಯಿಂದ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯಿಂದ ಹಿಂದೂ ಸಂಘಟನೆ  ಕಾರ್ಯಕರ್ತರು 5 ವಾಹನಗಳನ್ನು ತಡೆದು 25 ಕ್ಕೂ ಅಧಿಕ ಎಮ್ಮೆ, ಹಸುಗಳನ್ನು ರಕ್ಷಣೆ ಮಾಡಿದ್ದಾರೆ.    

ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದೂ ಸಂಘಟನೆ ಕಾರ್ಯಾಚರಣೆ: 25 ಕ್ಕೂ ಅಧಿಕ ಜಾನುವಾರು ರಕ್ಷಣೆ Read More »

ಕರ್ನಾಟಕ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ನ. 25. ಕಡಬದ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ KSWS and Vedhik IAS Academy ಸಂಸ್ಥೆಗೆ Admission Manager (Female), Student Counsellor (Female) ಮತ್ತು Telecaller ಹುದ್ದೆಗಳಿಗೆ ಅರ್ಹ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ತಾಯಿ ನೀಡಿರುವ ದೂರಿನ ಪ್ರಕಾರ ಬಾಲಕಿ ಆಟವಾಡುತ್ತಿದ್ದಾಗ ಅಡಿಕೆ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಅಂಗಡಿಯವನು ಮುಡಂಗಾರುಕಟ್ಟೆ ನಿವಾಸಿ ಅಹ್ಮದ್ ಕುಂಞಿ ಎಂಬವರ ಪುತ್ರ ಅಬ್ದುಲ್ಲ (70) ಎಂದು ಗುರುತಿಸಲಾಗಿದ್ದು, ಮಗುವಿನೊಂದಿಗೆ ಅನುಚಿತ ದೈಹಿಕ ಸಂಪರ್ಕ ಹೊಂದಿದ್ದ ಆರೋಪವಿದೆ. ಕೊಣಾಜೆ ಪೊಲೀಸರು

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನ. 23. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುವ ವಿರುದ್ಧ ರಾಜ್ಯಾದ್ಯಂತ ಹೋರಾಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 21. ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯಾದ್ಯಂತ ಹೋರಾಟವನ್ನು ಆರಂಭಿಸಿದೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪದಾಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,

ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುವ ವಿರುದ್ಧ ರಾಜ್ಯಾದ್ಯಂತ ಹೋರಾಟ Read More »

ಕರ್ನಾಟಕ

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 21. ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಶೇಖಮಲೆಯಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕುರುಳಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.  

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..!

(ನ್ಯೂಸ್ ಕಡಬ) newskadaba.com ನ. 15. ಈಗಾಗಲೇ ರಾಜ್ಯದಲ್ಲಿ ‘ವಕ್ಫ್’ ವಿವಾದದಿಂದ ವಿಪಕ್ಷಗಳು ಹಾಗೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆಯೇ ಮುಸ್ಲಿಮರ ಖಬರಸ್ಥಾನಗಳಿಗೆ ಸರ್ಕಾರಿ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮತ್ತೊಂದು ವಿವಾದವನ್ನು ರಾಜ್ಯ ಸರ್ಕಾರ ಮೈ ಮೇಲೆ ಎಳೆದುಕೊಂಡಿಂತಾಗಿದೆ. ರಾಜ್ಯ ಸರಕಾರ ಖಬರಸ್ಥಾನಗಳಿಗೆ ಸರ್ಕಾರಿ ಕಂದಾಯ ಭೂಮಿ ನೀಡಲು ಮುಂದಾಗಿದೆ. ರಾಜ್ಯ ಸರ್ಕಾರದ ಈ ಆದೇಶ ಇದೀಗ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಸುಮಾರು 328 ಖಬರಸ್ಥಾನಗಳಿಗೆ ಸರಕಾರಿ ಭೂಮಿಯನ್ನು ನೀಡಲು ಮುಂದಾಗಿರುವ

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..! Read More »

ಕರ್ನಾಟಕ
Scroll to Top