newskadaba

Death, deadbody, Waterfall

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಕ್ಕಡ, ನ. 05. ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ- ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ.  

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 05. ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಕುರಿತು ಗುಜರಾತ್ ನ ಅಮ್ರೇಲಿ ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಘಟನೆ ನಡೆದಿದೆ.   ಘಟನೆಯಲ್ಲಿ ಮಧ್ಯಪ್ರದೇಶದ ಧಾರ್ನ ಕಾರ್ಮಿಕ ದಂಪತಿಯ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಚಿರಾಗ್ ದೇಸಾಯಿ ತಿಳಿಸಿದ್ದಾರೆ. ಕಾರ್ಮಿಕ ದಂಪತಿ ತಮ್ಮ ಮಕ್ಕಳನ್ನು ಬಿಟ್ಟು ಭರತ್ ಮಂದಾನಿ ಎಂಬವರ ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ನಾಲ್ವರು ಮಕ್ಕಳು ಅಲ್ಲೇ ನಿಲ್ಲಿಸಿದ್ದ ಜಮೀನಿನ ಮಾಲಕನ ಕಾರಿನಲ್ಲಿ ಹತ್ತಿ

ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

HSRP ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 05. ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ HSRP ಅಳವಡಿಸಲು ಕಾಲಾವಧಿಯನ್ನು ಸರಕಾರ ಮತ್ತೆ ವಿಸ್ತರಿಸಿದೆ. ಹಲವು ಬಾರಿ ಗಡುವು ವಿಸ್ತರಿಸಿದರೂ ಇನ್ನೂ ಹಲವರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಿದ್ದು, ನವೆಂಬರ್ 30ರವರೆಗೆ ಸಮಯಾವಕಾಶ ನೀಡಿದೆ. ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದವರಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. 1.90 ಕೋಟಿ ಹಳೆ ಹಳೆ

HSRP ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ Read More »

ಕರ್ನಾಟಕ

ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ ‘ಬೇಟಿ ಬಚಾವೋ’ ಪಾದಯಾತ್ರೆ

(ನ್ಯೂಸ್ ಕಡಬ) newskadaba.com ನ. 06. ಹೆಣ್ಣುಮಕ್ಕಳಿಗೆ ರಕ್ಷಣೆ ಮತ್ತು ಭದ್ರತೆ ನೀಡುವಂತೆ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರವೀಣ್ ಮಂಗಳೂರು ಮತ್ತು ಮೂಸಾ ಶರೀಫ್ ರವರ ನಾಯಕತ್ವದಲ್ಲಿ ದಕ್ಷಿಣದಿಂದ ಉತ್ತರಕ್ಕೆ (ಮಂಗಳೂರು- ದೆಹಲಿ) “ಬೇಟಿ ಬಚಾವೋ” ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇಡೀ ವಿಶ್ವಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರಗಳ ಪಾಠ ಹೇಳಿಕೊಟ್ಟ ನಮ್ಮ ಭವ್ಯ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಒಂದು ಹೆಣ್ಣು ಓದಿನ ವಿಚಾರವಾಗಿಯೋ, ಕೆಲಸದ ವಿಚಾರವಾಗಿಯೋ, ಒಂದು ವ್ಯಾಪಾರದ ವಿಚಾರವಾಗಿಯೋ ಅಥವಾ

ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ ‘ಬೇಟಿ ಬಚಾವೋ’ ಪಾದಯಾತ್ರೆ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಪಿಲಿಕುಳ ಕಂಬಳ – ಸಕಲ ಸಿದ್ಧತೆಗೆ ಸೂಚನೆ

(ನ್ಯೂಸ್ ಕಡಬ) newskadaba.com ನ. 05. ಇದೇ ಬರುವ ನವೆಂಬರ್ 17 ಮತ್ತು 18ರಂದು ಪಿಲಿಕುಳದಲ್ಲಿ ಕಂಬಳ ನಡೆಯಲಿರುವ  ಹಿನ್ನೆಲೆಯಲ್ಲಿ ಸೋಮವಾರದಂದು ಕಂಬಳ ಕೆರೆಯಲ್ಲಿ ಸಿದ್ಧತೆಗಳ ಪರಿಶೀಲನೆ ನಡೆಯಿತು. ಶಾಸಕರಾದ ಉಮಾನಾಥ ಕೋಟ್ಯಾನ್, ಮಂಜುನಾಥ ಭಂಡಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ನೇತೃತ್ವದಲ್ಲಿ ಪಿಲಿಕುಲ ಕಂಬಳ ಕೆರೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ಸೌಲಭ್ಯಗಳು ಮತ್ತು ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ಕಂಬಳದ ಕೆರೆ ಪುನರ್‍ ನವೀಕರಣ ಈಗಾಗಲೇ ಬಹುತೇಕ ಅಂತಿಮಗೊಂಡಿದೆ. ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೆ ಬೇಕಾದ ಸೌಲಭ್ಯಗಳು,

ಪಿಲಿಕುಳ ಕಂಬಳ – ಸಕಲ ಸಿದ್ಧತೆಗೆ ಸೂಚನೆ Read More »

ಕರಾವಳಿ, ಕ್ರೀಡಾ ನ್ಯೂಸ್

ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರು ತಿಳಿದಿರಬೇಕು- ಸಿವಿಲ್ ನ್ಯಾಯಾಧೀಶೆ ಬಿ.ಜಿ.ಶೋಭಾ

(ನ್ಯೂಸ್ ಕಡಬ) newskadaba.com ನ. 05. ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ನೀಡಲಾಗುವ ಹಲವಾರು ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರಿಗೆ  ತಿಳಿದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ಹೇಳಿದರು. ಅವರು ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ,

ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರು ತಿಳಿದಿರಬೇಕು- ಸಿವಿಲ್ ನ್ಯಾಯಾಧೀಶೆ ಬಿ.ಜಿ.ಶೋಭಾ Read More »

ಕರಾವಳಿ, ಕರ್ನಾಟಕ

ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿ ಸೇವೆ; ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. 2012ರ ಪೋಕ್ಸೋ ಕಾಯಿದೆಯಡಿ ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸಾಮಾಜಿಕ ಕಾರ್ಯ ಅಥವಾ ಮನೋವಿಜ್ಞಾನ ಅಥವಾ ಮಕ್ಕಳ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ಮಕ್ಕಳ ಶಿಕ್ಷಣ, ಅಭಿವೃದ್ಧಿ, ರಕ್ಷಣೆ ವಿಷಯದಲ್ಲಿ ಕನಿಷ್ಠ 3 ವರ್ಷ ಅನುಭವವುಳ್ಳ ಪದವೀಧರರು, ಮಕ್ಕಳ ಹಕ್ಕುಗಳು ಅಥವಾ ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಂಸ್ಥೆಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಯ ಅಧಿಕಾರಿಗಳೂ ಅರ್ಜಿ ಸಲ್ಲಿಸಬಹುದು.

ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿ ಸೇವೆ; ಅರ್ಜಿ ಆಹ್ವಾನ Read More »

ಕರಾವಳಿ

ಸಜಿಪಮೂಡ ಗ್ರಾಮ ಪಂಚಾಯತ್ ಉಪಚುನಾವಣೆ- ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿ

(ನ್ಯೂಸ್ ಕಡಬ) newskadaba.com ನ. 05. ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮ ಪಂಚಾಯತ್ ನ ತೆರವಾಗಿರುವ ಸ್ಥಾನಕ್ಕೆ ಮತದಾನ ನಡೆಯಲಿದ್ದು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಇದರ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿಯನ್ನು ಅಯ್ಕೆ ಮಾಡಲಾಯಿತು. ಸೋಮವಾರದಂದು ಕಾರಾಜೆಯಲ್ಲಿ ನಡೆದ ಅಭ್ಯರ್ಥಿ ಘೋಷಣೆ ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿಯಾದ ಖಬೀರ್ ಅಕರಂಗಡಿಯವರು ಘೋಷಣೆ ಮಾಡಿದರು.

ಸಜಿಪಮೂಡ ಗ್ರಾಮ ಪಂಚಾಯತ್ ಉಪಚುನಾವಣೆ- ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿ Read More »

ಕರಾವಳಿ

ಬಿಸ್ಮಿಲ್ಲಾ ಜುಮಾ ಮಸ್ಜಿದ್ ದೂಮಳಿಕೆ, ಕಾವಳಕಟ್ಟೆ; 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ನ. 05. ಕಾವಲಕಟ್ಟೆ ಬಿಸ್ಮಿಲ್ಲಾ ಜುಮಾ ಮಸೀದಿಯ ಆಡಳಿತ ಕಮಿಟಿಯ ವಾರ್ಷಿಕ ಮಹಾಸಭೆಯು ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಇವರ ಸಭಾ ಅದ್ಯಕ್ಷತೆಯಲ್ಲಿ ಆದಿತ್ಯವಾರದಂದು ಬಿಸ್ಮಿಲ್ಲಾ ಮದರಸ ದೂಮಳಿಕೆಯಲ್ಲಿ ನಡೆಯಿತು. ಸಭೆಯಲ್ಲಿ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹೈದರ್ ಕಾವಳಕಟ್ಟೆ, ಪ್ರ,ಕಾರ್ಯದರ್ಶಿಯಾಗಿ ಫರಾಝ್ ಬೆಂಗತ್ತೋಡಿ, ಉಪಾಧ್ಯಕ್ಷರಾಗಿ ಹಸೈನಾರ್ ಮದನಿ ದೂಮಳಿಕೆ, ಜೊತೆ ಕಾರ್ಯದರ್ಶಿಯಾಗಿ ಶಿಹಾಬ್ ದೂಮಳಿಕೆ, ವರ್ಕಿಂಗ್ ಕಾರ್ಯದರ್ಶಿಯಾಗಿ ಸಾದಿಕ್ ದೂಮಳಿಕೆ, ಕೋಶಾಧಿಕಾರಿಯಾಗಿ ಯೂಸುಫ್ ಅಲಂಗಾಲ್ ಮತ್ತು ಸದಸ್ಯರುಗಳಾಗಿ

ಬಿಸ್ಮಿಲ್ಲಾ ಜುಮಾ ಮಸ್ಜಿದ್ ದೂಮಳಿಕೆ, ಕಾವಳಕಟ್ಟೆ; 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ನ. 02. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿಕೊಂಡಿದ್ದಾರೆ. ಕ್ಯಾ. ಚೌಟ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ದೀಪಾವಳಿ ಆಚರಿಸಿಕೊಂಡಿದ್ದು, ಸಂಜೆ ಪಣಂಬೂರಿನಲ್ಲಿರುವ ಕರಾವಳಿ ಭದ್ರತಾ ಪಡೆಯ ಮಂಗಳೂರು ಘಟಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರು ಯೋಧರೊಂದಿಗೆ ಸಿಹಿ ಹಂಚಿಕೊಂಡು, ಜವಾನರೊಂದಿಗೆ ಉಭಯ ಕುಶಲೋಪರಿ ನಡೆಸುವ ಮೂಲಕ ದೀಪಾವಳಿಯನ್ನು ಅರ್ಥಪೂರ್ಣವಾಗಿ

ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ Read More »

ಕರಾವಳಿ, ಕರ್ನಾಟಕ
Scroll to Top