newskadaba

ಕಡಬ: ಮರಬಿದ್ದು ದ್ವಿಚಕ್ರ ವಾಹನ ಸವಾರ ಮೃತ್ಯು – ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 02. ಹಾಲುಮಡ್ಡಿ ಮರವೊಂದು ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಎಂಬವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿರುವ ಸ್ಥಳೀಯರು ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ದೂಪದ ಮರ ರಸ್ತೆ ಬದಿ ಇರುವುದನ್ನು ತೆರವುಗೊಳಿಸಲು ಸ್ಥಳೀಯರು ಒತ್ತಾಯಿಸಿದ್ದರೂ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಪಾಯಕಾರಿ ಮರಗಳನ್ನು ಸಂಪೂರ್ಣ […]

ಕಡಬ: ಮರಬಿದ್ದು ದ್ವಿಚಕ್ರ ವಾಹನ ಸವಾರ ಮೃತ್ಯು – ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಹಾರ ಶ್ರೇಣೀಬದ್ಧತೆಗೆ ಹೆಚ್ಚು ಪ್ರಾಮುಖ್ಯತೆ- ಆರೋಗ್ಯವನ್ನು ಬೆಳೆಸುವ ಪರಿಕಲ್ಪನೆ; ಡಾ.ಅಜಿತ್ ಕೋಡಿಂಬಾಳ

(ನ್ಯೂಸ್ ಕಡಬ) newskadaba.com ನ. 02. ನಮ್ಮ ದೈನಂದಿನ ಆಹಾರವು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ಇಂದು, ಆರೋಗ್ಯಕರ ಜೀವನಶೈಲಿಯ ಪರಿಕಲ್ಪನೆಗಳಲ್ಲಿ ಆಹಾರ ಶ್ರೇಣೀಬದ್ಧತೆ ಹೊಸ ಘಟ್ಟವನ್ನು ಹೊಂದಿದೆ. ನಾವು ಆಯ್ಕೆ ಮಾಡುವ ಆಹಾರವು ನಮಗೆ ಪೋಷಣೆಯೊಂದಿಗೆ ಮಾತ್ರವಲ್ಲ, ಹಲವು ಕಾಯಿಲೆಗಳನ್ನು ತಡೆಯಲು ಸಹ ನೆರವಾಗುತ್ತದೆ. ಆಹಾರ ಶ್ರೇಣೀಬದ್ಧತೆ ಅಂದರೆ ಏನು? ಆಹಾರ ಶ್ರೇಣೀಬದ್ಧತರಯು ಅನ್ನದ ಮೂಲಗಳು, ಪೋಷಕಾಂಶಗಳು ಮತ್ತು ಆಹಾರದ ಗುಣಮಟ್ಟವನ್ನು ಪರಿಗಣಿಸುತ್ತವೆ. ಇದು ಮೂರು ಪ್ರಮುಖ ವರ್ಗಗಳಲ್ಲಿ ಹೆಸರಾಗುತ್ತದೆ. ಕಾರ್ಬೋಹೈಡ್ರೇಟ್ಸ್, ಪ್ರೋಟೀನ್ಸ್ ಮತ್ತು ಕೊಬ್ಬಿದ

ಆಹಾರ ಶ್ರೇಣೀಬದ್ಧತೆಗೆ ಹೆಚ್ಚು ಪ್ರಾಮುಖ್ಯತೆ- ಆರೋಗ್ಯವನ್ನು ಬೆಳೆಸುವ ಪರಿಕಲ್ಪನೆ; ಡಾ.ಅಜಿತ್ ಕೋಡಿಂಬಾಳ Read More »

ಆರೋಗ್ಯ ಮಾಹಿತಿ

ಕಡಬ: ಹೃದಯಾಘಾತದಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 02. ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಡಬ: ಹೃದಯಾಘಾತದಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ನ. 02. ನೇಪಾಳ ಮೂಲದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಾಪಿಕಾಡ್ ಬಳಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ (25) ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳಿಂದ ತೊಕ್ಕೊಟ್ಟುವಿನಲ್ಲಿ ಪುಡ್ ಕಾರ್ನರ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಕಾಪಿಕಾಡ್ ನಲ್ಲಿ ಬಾಡಿಗೆ ಕೊಠಡಿ ಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ತಿಂಗಳ ಹಿಂದೆ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಬೇಸರಗೊಂಡ ಪತ್ನಿ ಪತಿಯನ್ನು ಬಿಟ್ಟು ಕುವೈತ್ ಗೆ ಹೋಗಿದ್ದರು.‌

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಕ್ಫ್ ಬೋರ್ಡ್ ವಿರುದ್ದ ಪ್ರಧಾನಿಗೆ ಪತ್ರ ಬರೆದ ಯತ್ನಾಳ್..!

(ನ್ಯೂಸ್ ಕಡಬ) newskadaba.com ನ. 01.  ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಸೃಷ್ಟಿಯಾಗಲು ಬಿಡಬಾರದು. ಆ ಕಾರಣದಿಂದ ನಾನು ಪ್ರಧಾನಿಯವರಿಗೆ ಪತ್ರ ಬರೆದಿದ್ದೇನೆ. ಈ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡಬೇಕು. ಇಲ್ಲವಾದರೆ ರೈತರು, ಮಠ-ಮಂದಿರಗಳು, ಗ್ರಾಮಗಳನ್ನು ವಕ್ಫ್ ಎನ್ನಲಾಗುತ್ತದೆ. ನೆಹರು, ಗಾಂಧಿ ಮಾಡಿದ

ವಕ್ಫ್ ಬೋರ್ಡ್ ವಿರುದ್ದ ಪ್ರಧಾನಿಗೆ ಪತ್ರ ಬರೆದ ಯತ್ನಾಳ್..! Read More »

ಕರ್ನಾಟಕ

ಅನ್ನಭಾಗ್ಯ ಯೋಜನೆ- 8,433 ಕೋಟಿ ರೂ. ಹಣ ವರ್ಗಾವಣೆ

(ನ್ಯೂಸ್ ಕಡಬ) newskadaba.com ನ. 01.  ಸರಕಾರದ ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 2023 ರ ಜುಲೈ ತಿಂಗಳಿನಿಂದ ಇಲ್ಲಿಯವರೆಗೆ 51.39 ಕೋಟಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ 8,433 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ

ಅನ್ನಭಾಗ್ಯ ಯೋಜನೆ- 8,433 ಕೋಟಿ ರೂ. ಹಣ ವರ್ಗಾವಣೆ Read More »

ಕರ್ನಾಟಕ

500 ಕರ್ನಾಟಕ ಪಬ್ಲಿಕ್ ಶಾಲೆಗಳ ಅನುಷ್ಠಾನ- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ನ. 01.  ಕಾರ್ಪೊರೇಟ್‌ ಸಂಸ್ಥೆಗಳ ಸಿಎಸ್‌‍ಆರ್‌ ಮಿತಿಯ ಅಡಿಯಲ್ಲಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಹಾಗೂ ಗ್ರೀನ್‌ಫೀಲ್ಡ್ ಯೋಜನೆಯಡಿ 100 ಶಾಲೆಗಳನ್ನು ಗುರುತಿಸಿ, ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ತಿಳಿಸಿದರು. ಈ ಸಂಬಂಧ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಹಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರಿ ಶಾಲೆಯ ಗುಣಾತ್ಮಕ ಶಿಕ್ಷಣಕ್ಕಾಗಿ ಕಲಿಕಾ

500 ಕರ್ನಾಟಕ ಪಬ್ಲಿಕ್ ಶಾಲೆಗಳ ಅನುಷ್ಠಾನ- ಮಧು ಬಂಗಾರಪ್ಪ Read More »

ಕರ್ನಾಟಕ

ವಾಣಿಜ್ಯ ಸಿಲಿಂಡರ್ ದರ ಏರಿಕೆ..!

(ನ್ಯೂಸ್ ಕಡಬ) newskadaba.com ನ. 01.  ದೀಪಾವಳಿ ಹಬ್ಬದ ಸಂದರ್ಭದಲ್ಲೇ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವನ್ನು 62 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ದೆಹಲಿಯಲ್ಲಿ ಸಿಲಿಂಡರ್‌ ದರ 1,802 ರೂಪಾಯಿ ಎಂದು ವರದಿಯಾಗಿದೆ.   5 ಕೆ.ಜಿ. ಫ್ರೀ ಟ್ರೇಡ್‌ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆಯೂ ಏರಿಕೆ ಕಂಡಿದ್ದು, 15 ರೂಪಾಯಿ ಹೆಚ್ಚಿಸಲಾಗಿದೆ. 14.2 ಕೆ.ಜಿ. ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಯತಾಸ್ಥಿತಿಯಲ್ಲಿದೆ. ಸದ್ಯ ವಾಣಿಜ್ಯ ಬಳಕೆಯ ಸಿಲಿಂಡರ್‌ ದರಗಳನ್ನು ಮಾತ್ರವೇ ಹೆಚ್ಚಿಸಲಾಗಿದ್ದು, ಗಹ

ವಾಣಿಜ್ಯ ಸಿಲಿಂಡರ್ ದರ ಏರಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ನಿಷೇಧಿತ ಪಟಾಕಿ ಬಳಕೆ- 292 ಜನರ ಬಂಧನ

(ನ್ಯೂಸ್ ಕಡಬ) newskadaba.com ನ. 01.  ನಗರದ ವಿವಿಧ ಭಾಗಗಳಲ್ಲಿ ನಿಷೇಧಿತ ಪಟಾಕಿ ಸಿಡಿಸಿದ ಮತ್ತು ಅನೈತಿಕ ವರ್ತನೆಗೆ ಸಂಬಂಧಿಸಿದಂತೆ 500 ಕೆಜಿಗೂ ಅಧಿಕ ನಿಷೇಧಿತ ಪಟಾಕಿ ಸಹಿತ 292 ಜನರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಪಶ್ಚಿಮ ಬಂಗಾಳದಲ್ಲಿ ಕಾಳಿಪೂಜೆ ಮತ್ತು ದೀಪಾವಳಿಯನ್ನು ಆಚರಿಸಲಾಗಿದ್ದು, ಬಣ್ಣಬಣ್ಣದ ದೀಪಗಳು ಮತ್ತು ಅಲಂಕತವಾದ ಪೆಂಡಾಲ್‌ ಗಳು ರಾಜ್ಯದಾದ್ಯಂತ ಹಬ್ಬದ ಉತ್ಸಾಹವನ್ನು ಸಷ್ಟಿಸಿದ್ದವು. ಕೋಲ್ಕತ್ತಾ ಪೊಲೀಸರು ನಿನ್ನೆ ಮಧ್ಯರಾತ್ರಿಯವರೆಗೆ ನಿಷೇಧಿತ ಪಟಾಕಿ ಸಿಡಿಸಿದ 117 ಜನರನ್ನು ಮತ್ತು

ನಿಷೇಧಿತ ಪಟಾಕಿ ಬಳಕೆ- 292 ಜನರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ನ. 01.  ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಸ್ತಾರ ಚಾನಲ್ ನ ಸಿಇಒ ಹಾಗೂ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮಣೆ ಅವರು ರಾಷ್ಟ್ರಧ್ವಜ ಮತ್ತು ನಾಡಧ್ವಜವನ್ನು ಆರೋಹಣವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಹಾಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ದೀಪವನ್ನು ಹಚ್ಚುವುದರಿಂದ ಕಣ್ಣಿಗೆ ಆನಂದವಾಗುತ್ತದೆ. ಬೆಳಕು ಸಿಗುತ್ತದೆ. ನಮ್ಮ ಮುಖದ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ Read More »

ಕರಾವಳಿ
Scroll to Top