newws kadaba

ಸೈಬರ್ ಅಪರಾಧ ತಡೆಗೆ ಸರ್ಕಾರದಿಂದ ಮಹತ್ವದ ಹೆಜ್ಜೆ: ಇನ್ನು ಸಿಮ್ ಇದ್ದರೆ ಮಾತ್ರ ವಾಟ್ಸಾಪ್ ಕಾರ್ಯನಿರ್ವಹಿಸಲಿದೆ

(ನ್ಯೂಸ್‌ ಕಡಬ) newskadaba.com, ಡಿ.06 : ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ (DoT) ಯಿಂದ ಮಹತ್ವದ ನಿರ್ದೇಶನವೊಂದು ಹೊರಬಿದ್ದಿದೆ. ಸೈಬರ್ ಅಪರಾಧ ಕೃತ್ಯಗಳನ್ನು ತಡೆಯುವ ಉದ್ದೇಶದಿಂದ, ಇನ್ನು ಮುಂದೆ ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯ ಸಿಮ್ ಕಾರ್ಡ್ ಇದ್ದರೆ ಮಾತ್ರ ವಾಟ್ಸಾಪ್, ಟೆಲಿಗ್ರಾಂ, ಸಿಗ್ನಲ್, ಸ್ನಾಪ್‌ಚಾಟ್, ಶೇರ್‌ಚಾಟ್, ಮತ್ತು ಜೋಶ್‌ನಂತಹ ಪ್ರಮುಖ ಆಪ್-ಆಧಾರಿತ ಸಂವಹನ ಸೇವೆಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ, ಒಮ್ಮೆ ಒಟಿಪಿ ಮೂಲಕ ಲಾಗಿನ್ ಆದರೆ, ಸಿಮ್ ತೆಗೆದರೂ ಅಥವಾ ನಿಷ್ಕ್ರಿಯಗೊಂಡರೂ ಈ ಆಪ್‌ಗಳು ವೈಫೈ […]

ಸೈಬರ್ ಅಪರಾಧ ತಡೆಗೆ ಸರ್ಕಾರದಿಂದ ಮಹತ್ವದ ಹೆಜ್ಜೆ: ಇನ್ನು ಸಿಮ್ ಇದ್ದರೆ ಮಾತ್ರ ವಾಟ್ಸಾಪ್ ಕಾರ್ಯನಿರ್ವಹಿಸಲಿದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ ಅವರ ಪರಿಶ್ರಮಕ್ಕೆ ಫಲ ನೀಡಿದೆ. ಹೆದ್ದಾರಿ ಪ್ರಾಧಿಕಾರದ

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಅ..29: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದಲ್ಲಿ ದಾಳಿ ನಡೆಸಿದ್ದು, ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ. ಜೊತೆಗೆ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ

ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಜ.22 : ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 75 ರೂ. ಮತ್ತು 86 ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,525 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,209 ರೂ. ಇದೆ.

ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ.! ➤ 8 ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.03. ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್‌ ಬೋಟ್‌ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬಾಲಕೃಷ್ಣ ಎಂಬವರ ಮಾಲಕತ್ವದ ಜಲ-ಮಾತಾ ಬೋಟು ಮೀನುಗಾರಿಕೆಗೆ ತೆರಳುತ್ತಿದ್ದಾಗ ಹಡಗಿನ ಅವಶೇಷಗಳಿಗೆ ತಾಗಿ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ತಕ್ಷಣ ಹತ್ತಿರದಲ್ಲೇ ಇದ್ದ ಲಲಿತಾ ಸಾಗರ ಎಂಬ ಹೆಸರಿನ ಬೋಟಿನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಈ

ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ.! ➤ 8 ಮೀನುಗಾರರ ರಕ್ಷಣೆ Read More »

ಕರಾವಳಿ

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಸುಳ್ಯ, ಜ.03. ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಸಂಭವಿಸಿದೆ. ಮೃತರನ್ನು ಬಾಬು ಡಿಸೋಜಾ ಅವರ ಪುತ್ರ ಡೆನಿಸ್ (51) ಎಂದು ಗುರುತಿಸಲಾಗಿದೆ.      ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಲಾಗುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.    

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top