NIA ride

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 05. ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕರ್ ಸ್ಫೋಟ ಪ್ರಕರಣ ➤ ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ಮೇಲೆ ಎನ್ಐಎ ಅಧಿಕಾರಿಗಳ ತಂಡ ದಾಳಿ ಮಾಡಿ, ಪರಿಶೀಲನೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.   ಎನ್ಐಎ ವಶದಲ್ಲಿರುವ ಆರೋಪಿ ಮಾಝ್ ಮುನೀರ್ ಎಂಬಾತ ಇದೇ ಶಿಕ್ಷಣ ಸಂಸ್ಥೆಯಿಂದ ಇಂಜಿನಿಯರಿಂಗ್‌‌ ಪದವಿ‌ಯನ್ನು ಪಡೆದಿದ್ದ, ಹಿನ್ನೆಲೆ, ಬೆಂಗಳೂರಿನಿಂದ ಬಂದಿದ್ದ ಏಳು ಮಂದಿಯ ಎನ್ಐಎ ತಂಡವು ಶಿಕ್ಷಣ ಸಂಸ್ಥೆಯಲ್ಲಿ ತನಿಖೆ ನಡೆಸಿದೆ ಎಂದು ತಿಳಿದು ಬಂದಿದೆ.

ಕುಕ್ಕರ್ ಸ್ಫೋಟ ಪ್ರಕರಣ ➤ ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಾಳಿ Read More »

ಕರ್ನಾಟಕ
Scroll to Top