NIA

ಬೆಂಗಳೂರು, ಕೋಲಾರಗಳಲ್ಲಿ NIA ದಾಳಿ: ಉಗ್ರರಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com, ಜು. 09. ಬೆಂಗಳೂರು: ಲಷ್ಕರೆ ತಯ್ಬಾ (LeT) ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದ ಆರೋಪ ಸಂಬಂಧ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (NIA) ನಿನ್ನೆ ಮಂಗಳವಾರ ಬಂಧಿಸಿದೆ. ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ಡಾ. ನಾಗರಾಜ್‌, ಎಎಸ್‌ಐ ಚಾನ್‌ಪಾಷಾ, ಕೋಲಾರದ ಅನೀಸಾ ಫಾತೀಮಾ ಬಂಧಿತರು. ಆರೋಪಿ ಅನಿಸಾ, ತಲೆಮರೆಸಿಕೊಂಡಿರುವ ಉಗ್ರ ಜುನೈದ್‌ ಅಹಮ್ಮದ್‌ನ ತಾಯಿ. ಈ ಮೂವರು ಶಂಕಿತರು ಜೈಲಿನಲ್ಲಿರುವ […]

ಬೆಂಗಳೂರು, ಕೋಲಾರಗಳಲ್ಲಿ NIA ದಾಳಿ: ಉಗ್ರರಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಮೂವರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಎನ್ಐಎ ವಶಕ್ಕೆ..!

(ನ್ಯೂಸ್ ಕಡಬ) newskadaba.com ಜೂ. 26. ಮೇ.1 ರಂದು ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳನ್ನು ಬೆಂಗಳೂರಿನ 50ನೇ ಸಿಸಿಎಚ್‌  ನ್ಯಾಯಾಲಯವು ಎನ್‌ಐಎ ಕಸ್ಟಡಿಗೆ ನೀಡಿದೆ.   ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್‌ ದಾಖಲು ಮಾಡಿದ್ದು, ಹೆಚ್ಚಿನ ವಿಚಾರಣೆಗೆಂದು ಆರೋಪಿಗಳನ್ನು ವಶಕ್ಕೆ ನೀಡುವಂತೆ ಎನ್‌ಐಎ ಎಸ್‌ಪಿಪಿ ಪ್ರಸನ್ನ ಕುಮಾರ್‌ ನ್ಯಾಯಾಲಯಕ್ಕೆ ಮನವಿಯನ್ನು ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಜು.1 ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಎನ್ಐಎ ವಶಕ್ಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ

(ನ್ಯೂಸ್ ಕಡಬ) newskadaba.com ಜೂ. 14. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್ಐಎ ತಂಡ ನಡೆಸುತ್ತಿದ್ದು, ಅದರಂತೆ ಇಂದು ಬೆಂಗಳೂರಿನಿಂದ ಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ Read More »

ಕರ್ನಾಟಕ

ಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

(ನ್ಯೂಸ್ ಕಡಬ) newskadaba.com, ಜೂ.06. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ನಿರಂತರವಾಗಿ ಭಯೋತ್ಪಾದರ ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ಇದೀಗ ಎನ್‌ಐಎ ಕಾಶ್ಮೀರದ 32 ಕಡೆಗಳಲ್ಲಿ ದಾಳಿ ನಡೆಸಿದ್ದು, ಮದ್ದುಗುಂಡುಗಳು ಹಾಗೂ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳು ಮತ್ತು ಅವುಗಳ ಶಾಖೆಗಳಿಂದ ನಡೆಯುತ್ತಿರುವ ಭಯೋತ್ಪಾದಕ ಪಿತೂರಿಯ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಕಾಶ್ಮೀರ ಕಣಿವೆಯ

ಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ Read More »

ಕರಾವಳಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ

(ನ್ಯೂಸ್ ಕಡಬ) newskadaba.com ಜ.22 ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತ ವ್ಯಕ್ತಿ ಅತೀಕ್ ಅಹ್ಮದ್ ನನ್ನು ಜನವರಿ 20 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಎಂದು ಗುರುತಿಸಲಾದ ಅಹ್ಮದ್, ಜುಲೈ 2022 ರಲ್ಲಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 05. ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬೆಳ್ಳಂ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ ➤ ದಾಖಲೆಗಳ ಪರಿಶೀಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.31. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್‌‌ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ವೇಣೂರು ಸೇರಿ 16 ಕಡೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ, ದಾಖಲೆಗಳನ್ನು ಪರಿಶೀಲಿಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆ ಮತ್ತು ಆಸ್ಪತ್ರೆಯ ಕಚೇರಿಗಳ

ಮಂಗಳೂರು: ಬೆಳ್ಳಂ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ ➤ ದಾಖಲೆಗಳ ಪರಿಶೀಲನೆ Read More »

ಕರಾವಳಿ

ಎನ್‌ಐಎಗೆ ಭಯೋತ್ಪಾದನಾ ದಾಳಿಯ ಬೆದರಿಕೆ ಸಂದೇಶ

(ನ್ಯೂಸ್ ಕಡಬ)newskadaba.com ಮುಂಬೈ, ಫೆ.04. ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೇಲ್ ಸಂದೇಶ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ತಾಲಿಬಾನಿ ಸದಸ್ಯ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯಿಂದ ಮೇಲ್ ಸ್ವೀಕರಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಅಲರ್ಟ್ ಆಗಿರಲು ಎನ್‌ಐಎ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. “ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತನ್ನನ್ನು ತಾಲಿಬಾನಿ ಎಂದು ಹೇಳಿಕೊಂಡಿದ್ದಾನೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಆತ ಹೇಳಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು

ಎನ್‌ಐಎಗೆ ಭಯೋತ್ಪಾದನಾ ದಾಳಿಯ ಬೆದರಿಕೆ ಸಂದೇಶ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್ (48) ಹಾಗೂ ನೆಕ್ಕಿಲಾಡಿಯ ಮಸೂದ್ ಪತ್ತೆಗೆ ಎನ್ಐಎ 5ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ಸುಳಿವು ನೀಡಿದವರ

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top