ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಕಡಬ ತಹಶಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರದಂದು ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ನಡೆಸಿ, ಊರವರು ಕಡಬದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಕಲ್ಲುಗುಡ್ಡೆಯಲ್ಲಿ ಸೋಮವಾರದಂದು ಬೆಳಿಗ್ಗೆ ಪೊಲೀಸ್ ರಕ್ಷಣೆಯಲ್ಲಿ ಮದ್ಯದಂಗಡಿಯನ್ನು ತೆರೆಯಲಾಯಿತು. ವಿಷಯ ತಿಳಿದ ಪ್ರತಿಭಟನಾಕಾರರು ಅಬಕಾರಿ […]








