Prajwal Revanna

ಪ್ರಜ್ವಲ್‌ ಹುಟ್ಟುಹಬ್ಬ: ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

(ನ್ಯೂಸ್‌ ಕಡಬ) newskadaba.com, ಆ.05: ರೇಪ್‌ ಕೇಸ್‌ನಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಶೃಂಗೇರಿ ಶಾರದಾಂಬೆಗೆ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ.4ರ ರಾತ್ರಿಯೇ ಬಂದು ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿದ್ದ ರೇವಣ್ಣ, ಶೃಂಗೇರಿ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇಂದು ಬೆಳ್ಳಂ ಬೆಳಗ್ಗೆಯೇ ರೇವಣ್ಣ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದಾರೆ.

ಪ್ರಜ್ವಲ್‌ ಹುಟ್ಟುಹಬ್ಬ: ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ Read More »

ಕರ್ನಾಟಕ

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..!

(ನ್ಯೂಸ್‌ ಕಡಬ)newskadaba.com ಜು.25: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ವಜಾಗೊಳಿಸಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..! Read More »

ಕರ್ನಾಟಕ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 2ಕ್ಕೆ ಮುಂದೂಡಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರಕಾರದ ಪರ ಎಸ್ ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿ, ಪ್ರಜ್ವಲ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬದಲಾದ ಪರಿಸ್ಥಿತಿ ಇದ್ದರೆ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 09.ಬಂಟ್ವಾಳ: ನವದೆಹಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ: ಸುಪ್ರೀಂ ಕೋರ್ಟ್ Read More »

ಕರ್ನಾಟಕ

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ರಾಜ್ಯ ಸರಕಾರ ಮನವಿ ಮಾಡಿದೆ. ಪ್ರಕರಣದ ಸಂತ್ರಸ್ತೆಯ ಗುರುತು ಮರೆಮಾಚಲು ಇನ್‌ ಕ್ಯಾಮರಾ ವಿಚಾರಣೆಗೆ ಹೈಕೋರ್ಟ್‌ ಗೆ ಎಸ್‌ ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿದರು. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ Read More »

ಕರ್ನಾಟಕ
Scroll to Top