puttur

ಕುಮಾರಧಾರ ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರುಪಾಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ.22. ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ಇಳಿದ ವಿದ್ಯಾರ್ಥಿಯೋರ್ವ ನೀರುಪಾಲಾದ ಘಟನೆ ಬುಧವಾರ ಸಂಜೆ ಪುತ್ತೂರಿನ ಅಂಬ್ರಿಗೇರಿ ಎಂಬಲ್ಲಿ ನಡೆದಿದೆ. ನೀರುಪಾಲಾದ ವಿದ್ಯಾರ್ಥಿಯನ್ನು ನಗರದ ವಿವೇಕಾನಂದ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ. ಹೇಮಂತ್ ತನ್ನ ಐವರು ಸಹಪಾಠಿಗಳೊಂದಿಗೆ ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಎಂಬಲ್ಲಿನ ಅಂಬ್ರಿಗೇರಿಯಲ್ಲಿ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ತೆರಳಿದ್ದು, ನೀರಿನಲ್ಲಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಮತ್ತು ಅಗ್ನಿಶಾಮಕ […]

ಕುಮಾರಧಾರ ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರುಪಾಲು Read More »

ಕರಾವಳಿ

ಪುತ್ತೂರು: ವಾಕಿಂಗ್ ಹೋಗುತ್ತಿದ್ದಾಗ ಬೈಕ್ ಢಿಕ್ಕಿ ► ಗಂಭೀರ ಗಾಯಗೊಂಡಿದ್ದ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ.21. ಬೆಳಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದ ಸಂದರ್ಭ ಬೈಕೊಂದು ಢಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಪಾದಚಾರಿಯು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಪುತ್ತೂರಿನ ಕೆಮ್ಮಾಯಿ ನೀರ್ಪಾಜೆ ನಿವಾಸಿ ರಾಮಚಂದ್ರ ಶಾಸ್ತ್ರಿ(78ವ) ಎಂದು ಗುರುತಿಸಲಾಗಿದೆ. ರಾಮಚಂದ್ರ ಶಾಸ್ತ್ರಿಯವರು ಇತ್ತೀಚೆಗೆ ಎಂದಿನಂತೆ ಬೆಳಿಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡಿದ್ದ ರಾಮಚಂದ್ರ ಶಾಸ್ತ್ರಿಯವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ಪುತ್ತೂರು: ವಾಕಿಂಗ್ ಹೋಗುತ್ತಿದ್ದಾಗ ಬೈಕ್ ಢಿಕ್ಕಿ ► ಗಂಭೀರ ಗಾಯಗೊಂಡಿದ್ದ ಪಾದಚಾರಿ ಮೃತ್ಯು Read More »

ಕರಾವಳಿ

ಪುತ್ತೂರು: ನಿವೃತ್ತ ಎಎಸ್ಐ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.21. ನಿವೃತ್ತ ಎಎಸ್ಐ ಓರ್ವರು ರಕ್ಷಿತಾರಣ್ಯದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಪುತ್ತೂರು ನಗರ ಠಾಣೆಯಲ್ಲಿ ಎಎಸ್ಐ ಯಾಗಿ ನಿವೃತ್ತಿ ಹೊಂದಿದ್ದ ಕುಂಜೂರು ಪಂಜ ನಿವಾಸಿ ಪರ್ಲಡ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶೇಷಪ್ಪ ಪೂಜಾರಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಸೋಮವಾರದಂದು ತನ್ನ ಕುಂಜೂರು ಪಂಜದ ಮನೆಗೆ ಬಂದಿದ್ದು, ಮಂಗಳವಾರದಂದು ತನ್ನ ಪಂಚೆಯಿಂದ ನೇಣು ಬಿಗಿದ‌ ಘಟನೆ ಬೆಳಕಿಗೆ ಬಂದಿದೆ. 1986 ರಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಕಾನ್ ಸ್ಟೇಬಲ್

ಪುತ್ತೂರು: ನಿವೃತ್ತ ಎಎಸ್ಐ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ಕಲ್ಲುಗುಡ್ಡೆ: ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.17. ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನವು ಇತ್ತೀಚಿಗೆ ಕಡಬ ಕಲ್ಲುಗುಡ್ಡೆಯಲ್ಲಿ ನಡೆಯಿತು. ಪುತ್ತೂರು ಘಟಕದ ಪ್ರಧಾನ ಕಾರ್ಯದರ್ಶಿ ತೇಜಸ್ ಬಿರ್ವ ಕೇಪುಳು ಮಾತನಾಡಿ ಬಿರುವೆರ್ ಕುಡ್ಲದ ವತಿಯಿಂದ ಸಮಾಜದ ಎಲ್ಲಾ ವರ್ಗದ ಬಡಮಕ್ಕಳಿಗೆ ಉನ್ನತ ಶಿಕ್ಷಣ ನೀಡುವಲ್ಲಿ ನೆರವಾಗುವುದು ಸೇರಿದಂತೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರೊಂದಿಗೆ ತುಳುನಾಡಿನ ಸಂಸ್ಕೃತಿ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸಬೇಕೆಂದರು. ಕಡಬ ಪರಿಸರದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಚೇತನ್

ಕಲ್ಲುಗುಡ್ಡೆ: ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನ Read More »

ಕರಾವಳಿ

ದೇಯಿಬೈದೇತಿಗೆ ಅವಮಾನ ಪ್ರಕರಣ ► ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿಬೈದೆತಿಯ ಪುತ್ತಳಿಯ ಸಮೀಪ ಕುಳಿತು ಅಶ್ಲೀಲವಾಗಿ ಫೊಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣದ ಆರೋಪಿಗೆ ಪುತ್ತೂರು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯ ಮಂಗಳವಾರದಂದು ಜಾಮೀನು ಮಂಜೂರು ಮಾಡಿದೆ. ಪ್ರಕರಣದ‌ ಆರೋಪಿ ಈಶ್ವರ ಮಂಗಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಹನೀಫ್ ವಿರುದ್ಧ ಸಂಪ್ಯ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿತ್ತು. ಅರೋಪಿ ಪರವಾಗಿ ವಕೀಲರಾದ ಅಶ್ರಫ್

ದೇಯಿಬೈದೇತಿಗೆ ಅವಮಾನ ಪ್ರಕರಣ ► ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11. ಇಲ್ಲಿನ ಕೊಯಿಲ ಗ್ರಾಮದ ಏಣಿತಡ್ಕದಲ್ಲಿ ಶಾಸಕರ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಸುಳ್ಯ ಶಾಸಕ ಎಸ್.ಅಂಗಾರ ವೀಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಏಣಿತಡ್ಕದ ನೂತನ ಸೇತುವೆ ಬಳಿಯಿಂದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ತನಕ ಸುಮಾರು 97 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಡಾಮಾರೀಕರಣ ನಡೆಯುತ್ತಿದೆ. ಇತ್ತೀಚೆಗೆ ಇದರ ಗುದ್ದಲಿ ಪೂಜೆ ನೇರವೇರಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಯಲ್ಲಿ ಶಾಸಕರು ಕಾಮಗಾರಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ Read More »

ಕರಾವಳಿ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »

ಕರಾವಳಿ

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ನ.11. ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರುನಗರದಲ್ಲಿ ಇತ್ತೀಚೆಗೆ ನಡೆದ ಕನಸುಗಳು ಎಂಬ ಕಾರ್ಯಕ್ರಮದಲ್ಲಿ ಸರಸ್ವತೀ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ದೀಪಕ್.ಕೆ ಇವರು ಭಾಗವಹಿಸಿ ವರ್ಣ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಇವರು ಕಲ್ಲುಗುಡ್ಡೆ ನಿವಾಸಿ ಕಿಟ್ಟು ಅಜಿಲ ಮತ್ತು ವೆಂಕಮ್ಮ ದಂಪತಿಯ ಸುಪುತ್ರ.

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ Read More »

ಕರಾವಳಿ

ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.8. ಗ್ರಾಮೀಣ ಭಾಗದ ಆಟೋ ರಿಕ್ಷಾ ಚಾಲಕರು ಸಂಕಷ್ಟದ ಬದುಕು ಸಾಗಿಸಿ ತಮ್ಮ ಜೀವನ ನಿರ್ವಹಣೆ ಮಾಡುತ್ತಿರುವುದು ಸಾಮಾನ್ಯ. ಆದರೆ ತಮ್ಮ ಸಮಸ್ಯೆಗಳ ನಡುವೆಯೂ ಉಪ್ಪಿನಂಗಡಿಯ ನೇತ್ರಾವತಿ ಆಟೋ ರಿಕ್ಷಾ ಚಾಲಕ-ಮಾಲಕ ಸಂಘದವರು ಅಸಾಹಯಕರೊಬ್ಬರಿಗೆ ನೆರವಾಗುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ. ಅಪರಿಚಿತ ಊರಿನಲ್ಲಿ ಬಸ್ಸಿಗೆ ಹಣವಿಲ್ಲದೆ ಒಬ್ಬಂಟಿಯಾಗಿದ್ದ ಚಿತ್ರದುರ್ಗದ ಯುವಕನಾದ ಮೋಹನ್‌ ಅವರಿಗೆ ಆಟೋ ರಿಕ್ಷಾದವರು ಹಣ ಸಂಗ್ರಹಿಸಿ ಅವರನ್ನು ಮರಳಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆಯವರಾಗಿದ್ದ ಮೋಹನ್‌ ಅವರ ಗೆಳೆಯ ಪುತ್ತೂರಿನಲ್ಲಿ ಕೆಲಸಕ್ಕಿದ್ದರು. ಆತನಿಗೆ ನೀಡಿದ್ದ

ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು Read More »

ಕರಾವಳಿ

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.8. ► ಇಲ್ಲಿನ ಕುಟ್ರುಪ್ಪಾಡಿ ಗ್ರಾಮದ ಪುರಿಯ ಎಂಬಲ್ಲಿ ಎಂಡೋ ಪೀಡಿತೆ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟವರನ್ನು ಪುರಿಯ ನಿವಾಸಿ ಪೋಸ್ಟ್‌ಮ್ಯಾನ್ ರವಿ ಎಂಬವರ ಪುತ್ರಿ ಅಶ್ವಿನಿ(28) ಎಂದು ಗುರುತಿಸಲಾಗಿದೆ. ಈಕೆ ಹುಟ್ಟಿನಿಂದಲೇ ಎಂಡೋ ಪೀಡಿತಳಾಗಿ ಕಳೆದ ಇಪ್ಪತ್ತೆಂಡು ವರ್ಷಗಳಿಂದ ದೃಷ್ಟಿಕ ಳೆದುಕೊಂಡು ಪೋಷಕರ ಆಶ್ರಯದಲ್ಲಿ ಬೆಳೆದು ಬಂದಿದ್ದಾಳೆ. ಕಳೆದ ಹತ್ತು ದಿನಗಳಿಂದ ಖಾಯಿಲೆ ಉಲ್ಭಣಿಸಿ ಮೃತಪಟ್ಟಿದ್ದಾಳೆ. ರವಿಯವರ ಇಬ್ಬರೂ ಹೆಣ್ಣು ಮಕ್ಕಳು ಕೂಡಾ ಎಂಡೋ ಪೀಡಿತರಾಗಿದ್ದು, ಈ ಪೈಕಿ ಹಿರಿ ಮಗಳು

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು Read More »

ಕರಾವಳಿ
Scroll to Top