puttur

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಸ್ಕೂಟರ್ ಸ್ಕಿಡ್ ಆಗಿ ಬಿದ್ದು ದಂಪತಿ ಗಾಯಗೊಂಡ ಘಟನೆ ಬಲ್ನಾಡ್ ಗ್ರಾಮ ಆನಂದಸಾಗರ ಎಂಬಲ್ಲಿ ನಡೆದ ಕುರಿತು ವರದಿಯಾಗಿದೆ. ಬಲ್ನಾಡ್ ಗ್ರಾಮದ ಸುಂಕದ ಮೂಲೆ ನಿವಾಸಿ ಪುರಂದರ ಮತ್ತು ಪತ್ನಿ ಮಲ್ಲಿಕಾ.ಬಿ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಸ್ಕಿಡ್ ಆಗಿ ಮಗುಚಿ ಬಿದ್ದಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯೊಳಗೆ ನುಗ್ಗಿದ ಮಳೆ ನೀರು ➤ ಘಟನಾ ಸ್ಥಳಕ್ಕೆ ಶಾಸಕ ಭೇಟಿ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಕೋಡಿಂಬಾಡಿ ಗ್ರಾಮದ ಪರಬಪಾಲು ಎಂಬಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿ ಮನೆಯವರು ತೊಂದರೆಗೆ ಸಿಲುಕಿಸಿದ್ದು, ಘಟನಾ ಸ್ಥಳಕ್ಕೆ ಶಾಸಕ ಅಶೋಕ ರೈ ಬೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ವರದಿ ತಿಳಿಸಿದೆ. ಲೀಲಾವತಿ ಎಂಬವರ ಮನೆಯ ಪಕ್ಕದ ಮನೆಯವರ ಆವರಣಗೋಡೆ ಕುಸಿದು ಬಿದ್ದ ಕಾರಣ ಮಳೆ ನೀರು ಲೀಲಾವತಿಯವರ ಮನೆಯೊಳಗೆ ಬಂದಿತ್ತು ಎನ್ನಲಾಗಿದೆ. ಮನೆಯವರು ತೊಂದರೆಗೆ ಸಿಲುಕಿರುವ ಮಾಹಿತಿ ಪಡೆದ ಶಾಸಕರು ತಕ್ಷಣವೇ ಸ್ಥಳಕ್ಕೆ ತಹಶೀಲ್ದಾರ್ ಬೇಟಿ ನೀಡಿ ಸೂಕ್ತ ವ್ಯವಸ್ಥೆ

ಮನೆಯೊಳಗೆ ನುಗ್ಗಿದ ಮಳೆ ನೀರು ➤ ಘಟನಾ ಸ್ಥಳಕ್ಕೆ ಶಾಸಕ ಭೇಟಿ Read More »

ಕರಾವಳಿ

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ರಾತ್ರಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಎಂದು ಗುರುತಿಸಲಾಗಿದೆ. ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.21. ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಮತ್ತು ಲಾರಿಯ ಕಂಡಕ್ಟರ್ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೆಂಡಿಂಗ್ ಮತ್ತು ಪುತ್ತೂರಿಯಲ್ಲಿರುವ ಅಝರ್ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್ ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ.  

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 19. ವಿದ್ಯಾರ್ಥಿನಿಗೆ ಶಾಲೆಗೆ ಹೋಗುವ ಸಂಧರ್ಭದಲ್ಲಿ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಗೆ ಸಂಬಂಧಿಸಿದಂತೆ ಓರ್ವನ ವಿರುದ್ಧ ದೂರು ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಎಂಬವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.    

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಕಲಿ‌ ದಾಖಲೆ ಸೃಷ್ಟಿ ಕಛೇರಿಗೆ ಇ.ಒ ದಾಳಿ- ಕಡಬ ಸಹಿತ ಮೂರು ಗ್ರಾ.ಪಂ.ಗಳ ಮೊಹರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 11. ಭೂದಾಖಲೆ ಸಹಿತ ಹಲವಾರು ವಿಚಾರಗಳಿಗೆ ನಿರಾಪೇಕ್ಷಣಾ ಪತ್ರದ ನಕಲಿ ದಾಖಲೆ ಪತ್ರಗಳನ್ನು ಮಾಡುತ್ತಿದ್ದ ಆರೋಪಕ್ಕೆ ಪುತ್ತೂರು ಪಡೀಲ್ ನಲ್ಲಿರುವ ಕಚೇರಿಯೊಂದಕ್ಕೆ ಅಧಿಕಾರಿಗಳು ದಾಳಿ ನಡೆಸಿದ ಕುರಿತು ವರದಿಯಾಗಿದೆ. ಪಡೀಲ್‌ ನ ವಿಶ್ವನಾಥ್‌ ಎಂಬವರಿಗೆ ಸೇರಿದ ಇಲೆಕ್ಟ್ರಿಕಲ್ಸ್ ವರ್ಕ್ ಶಾಪ್ ಗೆ ದಾಳಿ ನಡೆಸಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಭಂಡಾರಿ ನೇತೃತ್ವದ ತಂಡ, ಪುತ್ತೂರು ಮತ್ತು ಕಡಬ ತಾಲೂಕಿನ ಎಲ್ಲಾ ಗ್ರಾ.ಪಂ.ಗಳ ಮೊಹರು ಮತ್ತು ಬಂಟ್ವಾಳ ತಾಲೂಕಿನ ಮೂರು

ನಕಲಿ‌ ದಾಖಲೆ ಸೃಷ್ಟಿ ಕಛೇರಿಗೆ ಇ.ಒ ದಾಳಿ- ಕಡಬ ಸಹಿತ ಮೂರು ಗ್ರಾ.ಪಂ.ಗಳ ಮೊಹರು ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ

(ನ್ಯೂಸ್ ಕಡಬ)news kadaba.com ಪುತ್ತೂರು, ಜು. 3. ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆಯಾಗಿರುವ ಘಟನೆ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ನಾಪತ್ತೆಯಾದ ನಿವಾಸಿ ಉಮ್ಮರ್‌ ಎಂಬವರು, ಜು.1ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದರು ಆ ಬಳಿಕ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.ಮಗನ ಮದುವೆ ಇಂದು ನಡೆಯಬೇಕಾಗಿತ್ತು. ನಿನ್ನೆ ಮದರಂಗಿ ಶಾಸ್ತ್ರ ನಿಗದಿಯಾಗಿತ್ತು. ಈಗ ತಂದೆ ನಾಪತ್ತೆಯಾಗಿರುವ ಕಾರಣ ಮದುವೆ ರದ್ದು ಮಾಡಲಾಗಿದೆ. ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಮೊಬೈಲ್‌ ಲೊಕೇಶನ್‌ ಆಧಾರದಲ್ಲಿ

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 23. ವ್ಯಕ್ತಿಯೊಬ್ಬರು ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸುಳ್ಯಪದವು ಕಜೆಮೂಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಮೃತರನ್ನು ನೆಟ್ಟಣಿಗೆ ಗ್ರಾಮದ ಆದೂರು ಬೀರಮೂಲೆ ನಿವಾಸಿ ನಾರಾಯಣ ನಾಯ್ಕ(75) ಎಂದು ಗುರುತಿಸಲಾಗಿದೆ ಇವರು ಸುಳ್ಯಪದವು ಕಜೆಮೂಲೆ ವೆಂಕಟೇಶ್ವರ ಭಟ್ ಎಂಬವರ ತೋಟದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮನೆಯಿಂದ ಹೋದ ಅವರು ನಾಪತ್ತೆಯಾಗಿದ್ದ ಕುರಿತು ಅವರ ಮನೆ ಮಂದಿ ದೂರು ನೀಡಿದ್ದರು. ಜೂ. 22ರಂದು ವೆಂಕಟೇಶ್ವರ ಭಟ್

ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಹೀರೇಬಂಡಾಡಿ ಗ್ರಾಮದ ಮುರ ಕಾಲೊನಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬಾಲಕೃಷ್ಣ ಗೌಡ ಎಂಬವರ ಪತ್ನಿ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಎಂದು ಗುರುತಿಸಲಾಗಿದೆ. ಹಸುಗೂಸು ಆರೋಗ್ಯವಾಗಿರುವುದಾಗಿ ತಿಳಿದುಬಂದಿದೆ.      

ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು Read More »

ಕರಾವಳಿ

ಪುತ್ತೂರು: ಯುವಕನಿಗೆ ಹಲ್ಲೆ, ಜೀವಬೆದರಿಕೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಯುವಕನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ಸಂಜೆ ತಾಲೂಕಿನ ನರಿಮೊಗರು ಗ್ರಾಮದ ಪುರುಷಕಟ್ಟೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಇಲ್ಲಿನ ಇಂದ್ರನಗರ, ಕಟ್ಟೆ ನಿವಾಸಿ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವೀಣ್ ಮತ್ತು ಪ್ರವೀಣ್ ಆಚಾರ್ಯ ಇಬ್ಬರೂ ಈ ಹಿಂದೆ ಬಿಜೆಪಿಯ ಕಾರ್ಯಕರ್ತರಾಗಿದ್ದರು. ಬಳಿಕ ಪ್ರವೀಣ್ ಆಚಾರ್ಯ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಇದೀಗ ರಾಜಕೀಯ ವಿಚಾರಕ್ಕೆ

ಪುತ್ತೂರು: ಯುವಕನಿಗೆ ಹಲ್ಲೆ, ಜೀವಬೆದರಿಕೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top