ಪೈಶಾಚಿಕ ಕೃತ್ಯ- 2 ವರ್ಷದ ಮಗುವಿನ ಮೇಲೆ ಅತ್ಯಾಚಾರ..!
(ನ್ಯೂಸ್ ಕಡಬ) newskadaba.com ಕೊಡಗು, ಫೆ. 15. 2 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಬೀಭತ್ಸ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಟೇಟ್ ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಕಾಮುಕ ಮಣಿ ಎಂಬಾತ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಪೈಶಾಚಿಕ ಕೃತ್ಯ- 2 ವರ್ಷದ ಮಗುವಿನ ಮೇಲೆ ಅತ್ಯಾಚಾರ..! Read More »
ಕರ್ನಾಟಕ, ಕ್ರೈಮ್ ನ್ಯೂಸ್