Road

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಮರ್ದಾಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಅಂತಿಬೆಟ್ಟು ಮಾರ್ಗವಾಗಿ ಕೋರಿಯಾರ್ ಮೂಲಕ ಕೋಡಿಂಬಾಳ ಸೇರಬೇಕಾದ ಗ್ರಾಮ ಸಡಕ್ ರಸ್ತೆಯು ಮಂಜೂರಾಗಿ ವರ್ಷಗಳೇ ಕಳೆದರೂ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಈ ಭಾಗದ ಗ್ರಾಮಸ್ಥರೆಲ್ಲ ಸೇರಿಕೊಂಡು ಕೆಸರುಮಯ, ಹೊಂಡ, ಗುಂಡಿಗಳಿಂದ ಕೂಡಿದ ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದ ಘಟನೆ ಭಾನುವಾರದಂದು ‌ನಡೆದಿದೆ. ಕಲ್ಲಾಜೆಯಿಂದ ಅಂತಿಬೆಟ್ಟುವರೆಗಿನ ಸುಮಾರು ೫೦ಕ್ಕೂ ಮೆಲ್ಪಟ್ಟ ಗ್ರಾಮಸ್ಥರು ಒಟ್ಟಾಗಿ ಬೆಳಿಗ್ಗೆಯಿಂದ ಸಂಜೆಯ ತನಕ ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ಥಿಗೊಳಿಸಿದ್ದಾರೆ. […]

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು Read More »

ಕರಾವಳಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯು ಜನವರಿಯಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಶಃ ಜನವರಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ Read More »

ಕರಾವಳಿ

ಸಂಪೂರ್ಣ ಹದಗೆಟ್ಟಿರುವ ಕಾಯರಡ್ಕ – ಪೆರಿಯಶಾಂತಿ ರಸ್ತೆ ದುರಸ್ತಿಗೆ ಆಗ್ರಹ ► ನಾಳೆ ‘ನೀತಿ ತಂಡ’ದಿಂದ ಸಾರ್ವಜನಿಕ ಭಿಕ್ಷಾಟನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.13. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯ ಕಾಯರಡ್ಕ- ಪೆರಿಯಶಾಂತಿ ನಡುವಿನ ಎರಡು ಕಿಮೀ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ರಸ್ತೆ ಕಾಮಗಾರಿಗೆ ಆಗ್ರಹಿಸಿ ಇಚಿಲಂಪಾಡಿಯ ನೀತಿ ತಂಡದ ವತಿಯಿಂದ ಡಿಸೆಂಬರ್ 14 ಗುರುವಾರದಂದು ಸಾರ್ವಜನಿಕ ಭಿಕ್ಷಾಟನೆ ನಡೆಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ನೀತಿ ತಂಡದ ರಾಜ್ಯಾಧ್ಯಕ್ಷರಾದ ಜಯನ್ ಟಿ. ತಿಳಿಸಿದ್ದಾರೆ. ಈ ರಸ್ತೆಯ ಅವ್ಯವಸ್ಥೆ ಬಗ್ಗೆ ನೀತಿ ತಂಡವು ಸಾರ್ವಜನಿಕರ ಸಹಕಾರದೊಂದಿಗೆ 2017 ಮಾರ್ಚ್ 22

ಸಂಪೂರ್ಣ ಹದಗೆಟ್ಟಿರುವ ಕಾಯರಡ್ಕ – ಪೆರಿಯಶಾಂತಿ ರಸ್ತೆ ದುರಸ್ತಿಗೆ ಆಗ್ರಹ ► ನಾಳೆ ‘ನೀತಿ ತಂಡ’ದಿಂದ ಸಾರ್ವಜನಿಕ ಭಿಕ್ಷಾಟನೆ Read More »

ಕರಾವಳಿ

ಕೈಕಂಬ ಸರಕಾರಿ ಶಾಲೆಯ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ನ.24. ತಾ.ಪಂ. ಅನುದಾನದಲ್ಲಿ ಬಿಳಿನೆಲೆ ಗ್ರಾಮದ ಕೈಕಂಬ ಹಿ.ಪ್ರಾ. ಶಾಲಾ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ತಾ.ಪಂ.ಅನುದಾನದಲ್ಲಿ ಮಂಜೂರಾದ ರೂ.70 ಸಾವಿರದಲ್ಲಿ ತಾ.ಪಂ.ಸದಸ್ಯೆ ಆಶಾಲಕ್ಷ್ಮಣ್ ಗುಂಡ್ಯ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿ ಅತೀ ಶೀಘ್ರದಲ್ಲಿ ನಡೆದು ಶಾಲೆಗೆ ಸಂಪರ್ಕ ರಸ್ತೆ ಅಭಿವೃದ್ದಿಯಾಗಲಿ ಎಂದು ಆಶಿಸಿದರು. ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ತೆಂಗಿನಕಾಯಿ ಒಡೆಯುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಬಿಳಿನೆಲೆ ಗ್ರಾ.ಪಂ.ಸದಸ್ಯ ಶಿವಪ್ರಸಾದ್ ನಡುತೋಟ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ನೀಲಪ್ಪ ಗೌಡ

ಕೈಕಂಬ ಸರಕಾರಿ ಶಾಲೆಯ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ Read More »

ಕರಾವಳಿ

ಅಗಲ ಕಿರಿದಾದ ಕಡಬ – ಪಂಜ ರಸ್ತೆಯ ಅಭಿವೃದ್ಧಿಗೆ ಚಾಲನೆ ► 5 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣಗೊಳ್ಳುತ್ತಿದೆ ಜಿಲ್ಲಾ ಮುಖ್ಯರಸ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.18. ಸುಳ್ಯ ತಾಲೂಕಿನಿಂದ ಪ್ರಸ್ತಾವಿತ ಕಡಬ ತಾಲೂಕನ್ನು ಸಂಪಕರ್ಿಸುವ ಪ್ರಮುಖ ಜಿಲ್ಲಾ ರಸ್ತೆಯಾಗಿರುವ ಕಡಬ-ಪಂಜ ರಸ್ತೆಯನ್ನು ಆಗಲಗೊಳಿಸಿ ಉನ್ನತೀಕರಿಸುವ ಕಾಮಗಾರಿ ಆರಂಭಗೊಂಡಿದ್ದು, ಸುಳ್ಯ ಶಾಸಕ ಎಸ್.ಅಂಗಾರ ಅವರ ಮುತುವರ್ಜಿಯಿಂದಾಗಿ ಪರಿಸರದ ಜನರ ಬಹುಕಾಲದ ಬೇಡಿಕೆಯೊಂದು ಈಡೇರುತ್ತಿದೆ. ಕಡಬದಿಂದ ಪಂಜ, ನಿಂತಿಕಲ್, ಬೆಳ್ಳಾರೆ ಮೂಲಕ ಸುಳ್ಯಕ್ಕೆ ಪ್ರಯಾಣಿಸುವ ಜನರಿಗೆ ಕಡಬ-ಪಂಜ ನಡುವಿನ ಪ್ರಯಾಣ ಅತ್ಯಂತ ತ್ರಾಸದಾಯಕ ಪ್ರಯಾಣ ಎನ್ನುವ ಕಾರಣದಿಂದಾಗಿ ಸದ್ರಿ ರಸ್ತೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿಗಳನ್ನು ಸಲ್ಲಿಸಲಾಗಿತ್ತು. ಅಗಲ ಕಿರಿದಾದ

ಅಗಲ ಕಿರಿದಾದ ಕಡಬ – ಪಂಜ ರಸ್ತೆಯ ಅಭಿವೃದ್ಧಿಗೆ ಚಾಲನೆ ► 5 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣಗೊಳ್ಳುತ್ತಿದೆ ಜಿಲ್ಲಾ ಮುಖ್ಯರಸ್ತೆ Read More »

ಕರಾವಳಿ

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ

(ನ್ಯೂಸ್ ಕಡಬ) newskadaba.com ಕಡಬ, ನ.12. ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿ ದಿನೇ ದಿನೇ ಜನ ಸಂಚಾರ ಹೆಚ್ಚಾಗುತ್ತಿದ್ದು, ಪ್ರಸ್ತಾವಿತ ಸುಮಾರು 35 ಗ್ರಾಮಗಳಿಂದ ಕಛೇರಿ ಕೆಲಸಗಳಿಗಾಗಿ ಕಡಬಕ್ಕೆ ಬರುವುದು ಅನಿವಾರ್ಯ. ಕಡಬ ಪೇಟೆಯಿಂದ ಕೇವಲ ಮೂರು ಕಿಮೀ ದೂರದಲ್ಲಿರುವ ಕಾಯರಡ್ಕದಿಂದ ಪೇರಡ್ಕದ ವರೆಗಿನ ಎರಡು ಕಿಮೀ ರಸ್ತೆಯು ಇಲ್ಲಿನ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜಾಣ ಕುರುಡುತನದಿಂದಾಗಿ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದೆ. ಈ ರಸ್ತೆಯು ಕಡಬದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದು, ಈ ರಸ್ತೆಯ ಮೂಲಕ

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ Read More »

ಕರಾವಳಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11. ಇಲ್ಲಿನ ಕೊಯಿಲ ಗ್ರಾಮದ ಏಣಿತಡ್ಕದಲ್ಲಿ ಶಾಸಕರ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಸುಳ್ಯ ಶಾಸಕ ಎಸ್.ಅಂಗಾರ ವೀಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಏಣಿತಡ್ಕದ ನೂತನ ಸೇತುವೆ ಬಳಿಯಿಂದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ತನಕ ಸುಮಾರು 97 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಡಾಮಾರೀಕರಣ ನಡೆಯುತ್ತಿದೆ. ಇತ್ತೀಚೆಗೆ ಇದರ ಗುದ್ದಲಿ ಪೂಜೆ ನೇರವೇರಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಯಲ್ಲಿ ಶಾಸಕರು ಕಾಮಗಾರಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ Read More »

ಕರಾವಳಿ

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.1. ಮರ್ದಾಳ- ಸುಬ್ರಹ್ಮಣ್ಯ ರಸ್ತೆಯ ಐತ್ತೂರು ಸಂಪರ್ಕಿಸುವ ಜಿ.ಪಂ. ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನೆರವೇರಿಸಿದರು. 3.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅಂಗಾರ ಅವರು, ಪ್ರಾಮಾಣಿಕ ಮನಸ್ಸಿನಿಂದ ಜನರು ನೀಡಿದ ಅವಕಾಶವನ್ನು ಉಪಯೋಗಿಸಿಕೊಂಡು ಜನಹಿತಕ್ಕಾಗಿ ಶ್ರಮಿಸುವ ಜನಪ್ರತಿನಿಧಿಗಳಿಗೆ ಜನರು ನಿಜವಾದ ಗೌರವವನ್ನು ಸಲ್ಲಿಸುತ್ತಾರೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು. ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ Read More »

ಕರಾವಳಿ

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!!

(ನ್ಯೂಸ್ ಕಡಬ) newskadaba.com ಕಡಬ, ಅ.26. ಮರ್ದಾಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಸಮೀಪ ರಸ್ತೆಯ ಬದಿಯಲ್ಲಿ ಮರವೊಂದು ರಸ್ತೆಗೆ ಬೀಳುವ ಹಂತದಲ್ಲಿದ್ದು ಇದಕ್ಕೆ  ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಅರಣ್ಯ ಇಲಾಖಾ ವಸತಿಗೃಹದ ಕಚೇರಿ ಸಮೀಪವೇ ಈ ಅಪಾಯಕಾರಿ ಮರ ಸಂಪೂರ್ಣವಾಗಿ ಒಣಗಿ ರಸ್ತೆಗೆ ಬೀಳುವ ಹಂತದಲ್ಲಿದ್ದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತೆರವುಗೊಳಿಸುವ ಮನಸ್ಸು ಮಾಡುತ್ತಿಲ್ಲ. ಈ ರಸ್ತೆಯಲ್ಲಿ ದಿನನಿತ್ಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾವಿರಾರು ಯಾತ್ರಾರ್ಥಿ ವಾಹನಗಳು ಸಂಚಾರಿಸುತ್ತಿದ್ದು ಅಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯ

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!! Read More »

ಕರಾವಳಿ

ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.17. 2017-18ನೇ ಸಾಲಿನ ತಾ.ಪಂ. ಸದಸ್ಯರ ರೂ 75.000 ಹಾಗೂ ಗ್ರಾ.ಪಂ. ರೂ 31.000 ಅನುದಾನದಲ್ಲಿ ಮರ್ದಾಳ ಗ್ರಾಮದ ನೀರಾಜೆ- ಮುಂಡ್ರಾಡಿ ರಸ್ತೆ ದುರಸ್ತಿಗೊಳಿಸಲು ಸೋಮವಾರ ಚಾಲನೆ ನೀಡಲಾಯಿತು. ತಾ.ಪಂ.ಸದಸ್ಯೆ ಪಿ.ವೈ ಕುಸುಮ ತೆಂಗಿನಕಾಯಿ ಒಡೆಯುವ ಮೂಲಕ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ.ಸದಸ್ಯ ದಾಮೋದರ ಗೌಡ ಡೆಪ್ಪುಣಿ, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್

ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ Read More »

ಕರಾವಳಿ
Scroll to Top