sagara

ಈಜಲು ನೀರಿಗಿಳಿದ ಯುವಕ ನಾಪತ್ತೆ

(ನ್ಯೂಸ್ ಕಡಬ)newskadaba.com  ಸಾಗರ, ಜ.24. ಕೆರೆಗೆ ಈಜಲು ಹೋದ ಯುವಕನೋರ್ವ ನಾಪತ್ತೆಯಾದ ಘಟನೆ ಭೀಮನಕೋಣೆ ಕೆರೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಸಾಗರ ಪಟ್ಟಣದ ಯಶ್ವಂತ್ (22) ನಾಪತ್ತೆಯಾದ ಯುವಕ. ಯಶ್ವಂತ್ ತನ್ನ ಸ್ನೇಹಿತರೊಂದಿಗೆ ಭೀಮನಕೋಣೆ ಕೆರೆಗೆ ಹೋಗಿದ್ದರು. ಈ ವೇಳೆ ಯಶ್ವಂತ್, ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಇಳಿದಿದ್ದಾನೆ.ಆದರೆ ಆತನಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ.  

ಈಜಲು ನೀರಿಗಿಳಿದ ಯುವಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಗರ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸಾಗರ , ಡಿ 19 :  ನೇಣು ಬಿಗಿದು ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ  ಸಾಗರ ತಾಲೂಕಿನ ಆಚಾಪುರದ ಕೆರೆಹಿತ್ತಲು ಎಂಬಲ್ಲಿ ವರದಿಯಾಗಿದೆ. ಮೃತನನ್ನು ಗೌತಮ್ (20) ಎಂದು ಗುರುತಿಸಲಾಗಿದೆ. ಈತ ಚಾಪುರ ಕೆರೆಹಿತ್ತಲು ನಿವಾಸಿ ಇವರು ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸಾಗರ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.05. ಖಾಸಗಿ ಬಸ್ ಹಾಗೂ ಆಟೊ ನಡುವೆ ಢಿಕ್ಕಿ ಸಂಭವಿಸಿ ಆಟೊದಲ್ಲಿದ್ದ ಐದು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಸಾಗರ ತಾಲೂಕಿನ ಆನಂದಪುರ ಸಮೀಪದ ಆಚಾಪುರ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತಪಟ್ಟವರು ಆಟೊದಲ್ಲಿದ್ದ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಭುವನಹಳ್ಳಿ ತಾವರೆಕೆರೆ ನಿವಾಸಿ ತಿಪ್ಪೇಸ್ವಾಮಿ, ಕುಮಾರ, ರಾಮು, ಪುಟ್ಟರಾಜು ಹಾಗೂ ಶಿವು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ Read More »

ಕರ್ನಾಟಕ
Scroll to Top