ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ ಬನ್ನಡ್ಕದಲ್ಲಿ ಸರ್ವೀಸ್ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ
(ನ್ಯೂಸ್ ಕಡಬ) newskadaba.com ಜು. 23. ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಸ್ಥಳೀಯ ನಿವಾಸಿಗಳು ಹಾಗೂ ಸಂಘ-ಸಂಸ್ಥೆಗಳ ಮನವಿಗೆ ಸ್ಪಂದಿಸಿ, ಬನ್ನಡ್ಕ ಪ್ರದೇಶದಲ್ಲಿ ಕೈಬಿಡಲಾಗಿದ್ದ ಸರ್ವೀಸ್ ರಸ್ತೆ ಹಾಗೂ ವಾಮಂಜೂರು ಜಂಕ್ಷನ್ ಬಳಿ ನೂತನ ಪಾದಚಾರಿ ಮೇಲ್ಸೇತುವೆ (Foot […]

