ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿವಿಧ ಹುದ್ದೆಗಳು – ಎಸ್.ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ನಿರ್ವಹಿಸಬೇಕೆನ್ನುವ ಕಾತರದಿಂದ ಇದ್ದವರಿಗೆ ಗುಡ್ ನ್ಯೂಸ್ ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬರೋಬ್ಬರಿ 5,280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಆಸಕ್ತ ಪದವೀಧರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ನವೆಂಬರ್ 22ರಿಂದ ಡಿಸೆಂಬರ್ 12ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಹತೆ- ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ […]

