‘ಬೀದಿ ನಾಯಿ, ಬಿಡಾಡಿ ದನಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ ;- ಸುಪ್ರೀಂ ಸೂಚನೆ
(ನ್ಯೂಸ್ ಕಡಬ) newskadaba.com, ನ.06: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾಂಗಣಗಳು ಹಾಗೂ ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನ ಸ್ಥಳಾಂತರಿಸುವಂತೆ ಸೂಚನೆ ನೀಡಿದೆ. ಜೊತೆಗೆ ಹೆದ್ದಾರಿಗಳನ್ನ ಬಿಡಾಡಿ ದನಗಳಿಂದ ಮುಕ್ತಗೊಳಿಸುವಂತೆಯೂ ತಾಕೀತು ಮಾಡಿದೆ. ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್ವಿ ಅಂಜಾರಿಯಾ ಅವರ […]

