scooter accident

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಮೃತ ಸವಾರನನ್ನು ನೈತಾಡಿಯ ಇಸ್ಮಾಯಿಲ್‌ ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ […]

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 06. ಕಾರು ಹಾಗೂ ಟ್ರಕ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರರು ಟ್ರಕ್ ಗೆ ಸಿಲುಕಿ ಹಲವು ಕಿ.ಮೀ ದೂರದ ವರೆಗೆ ಎಳೆದೊಯ್ಯಲ್ಪಟ್ಟು ಮೃತಪಟ್ಟ ಘಟನೆ ಕೊಲ್ಕತ್ತಾದಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅನಂತ ದಾಸ್ ಎಂದು ಗುರುತಿಸಲಾಗಿದೆ ಈತ ಮನೆಗೆ ತೆರಳುತ್ತಿದ್ದ ವೇಳೆ ಡಂಪರ್ ಟ್ರಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಟ್ರಕ್ ನ ಬದಿಗೆ ಸಿಲುಕಿಕೊಂಡು ವ್ಯಕ್ತಿಯ ಮೃತದೇಹ 1.5 ಕಿ.ಮೀ ವರೆಗೆ ಎಳೆದೊಯ್ಯಲ್ಪಟ್ಟಿದೆ.

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top