ಸರ್ವೆಯ ವಿನುತಾ ಕೊಲೆ ಪ್ರಕರಣದಲ್ಲಿ ಸೈನೆಡ್ ಮೋಹನ್‌ಗೆ ಗಲ್ಲು ಶಿಕ್ಷೆ ವಿಧಿಸಿ’ ಸಂಪ್ಯ ಪೊಲೀಸರ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್
ಸವಣೂರು: ಸರ್ವೆಯ ವಿನುತಾರವರ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಸರಣಿ ಸ್ತ್ರೀ ಹಂತಕ ಸೈನೈಡ್ ಮೋಹನ್ ಕುಮಾರ್‌ಗೆ ಅಧೀನ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ಪ್ರಮಾಣವನ್ನು ಹೆಚ್ಚಿಸುವಂತೆ ಕೋರಿ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ೨೦ಕ್ಕೂ ಅಧಿಕ ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ನಂತರ ಸೈನೆಡ್ ನೀಡಿ ಕೊಲೆ ಮಾಡಿ ಪರಾರಿಯಾಗುತ್ತಿದ್ದ ಪುತ್ತೂರು ತಾಲೂಕಿನ ವಿವಿಧ ಶಾಲೆಗಳಲ್ಲಿ ಶಿಕ್ಷಕನಾಗಿದ್ದ ಕನ್ಯಾನ ಮೂಲದ ಮೋಹನ್ ಕುಮಾರ್‌ಗೆ ಸರ್ವೆಯ […]

