short circuit

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಸೆ. 25. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರನ್ನು ಚಲಾಯಿಸುತ್ತಿದ್ದಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ವೇಗವಾಗಿ ಕಾರಿನ ಮುಂಭಾಗಕ್ಕೆ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಕಾರಿನ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ […]

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ತೋಟದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಆಲಂಪಾಡಿ ಎಂಬಲ್ಲಿ ಇಂದು ಸಂಭವಿಸಿದೆ. ಮೃತ ಯುವಕನನ್ನು ಬೋಳಿಯಾರು ನಿವಾಸಿ ಇಬ್ರಾಹೀಮ್ ರವರ ಮಗ ಶಾಫಿ (29) ಎಂದು ಗುರುತಿಸಲಾಗಿದೆ. ಶಾಫಿ ಇಂದು ಬೆಳಿಗ್ಗೆ ಆಲಂಪಾಡಿಯಲ್ಲಿ ಅಡಿಕೆ ತೆಗೆಯಲೆಂದು ಹೋಗಿದ್ದು, ಈ ಸಂದರ್ಭ ಅವರ ಕೈಯಲ್ಲಿದ್ದ ಅಡಿಕೆ ತೆಗೆಯುವ ದೋಟಿ ಸರ್ವಿಸ್ ವಯರ್ ಗೆ ತಾಗಿ ಕರೆಂಟ್ ಶಾಕ್ ಹೊಡೆದು, ಶಾಫಿ ಸ್ಥಳದಲ್ಲೇ

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 05. ವಿದ್ಯುತ್ ಸರ್ಕ್ಯೂಟ್ ನಿಂದಾಗಿ ಟೈಲರ್ ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು  ಕರಕಲಾದ ಘಟನೆ ಚಾಮರಾಜನಗರ ಪಟ್ಟಣದ ಸಂತೇಮರಳ್ಳಿ ವೃತ್ತದ ಸಮೀಪವಿರುವ ಜಾಮಿಯಾ ಮಸೀದಿ ಬಳಿ ನಡೆದಿದೆ. ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಅಂಗಡಿಯಲ್ಲಿದ್ದ ಬಟ್ಟೆಗಳು, ಟೈಲರ್ ಮೆಷಿನ್ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿರುವುದಾಗಿ ತಿಳಿದುಬಂದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!!        

(ನ್ಯೂಸ್ ಕಡಬ) newskadaba.com  ಬಜ್ಪೆ, ಜ.05. ಕಂದಾವರ ಗ್ರಾಮ ಪಂಚಾಯತ್‌ ಬಳಿ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಾತ್ರಿ ಸುಮಾರು 9.45ರ ವೇಳೆ ನೆಲ ಮಹಡಿಯಲ್ಲಿ ಬೆಂಕಿ ಉಂಟಾಗಿ ದಟ್ಟವಾಗಿ ಹೊಗೆ ಮೇಲಿನ ಮಹಡಿಗೆ ಆವರಿಸಿದೆ ಎಂದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎನ್ನಲಾಗಿದೆ. ಫ್ಲ್ಯಾಟ್‌ ಪೂರ್ತಿ ಹೊಗೆ ಆವರಿಸಿದ್ದರಿಂದ ಅಲ್ಲಿದ್ದವರನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿತ್ತು. ಕೂಡಲೇ ಗುರುಪುರದ ರಫೀಕ್‌ ಅವರನ್ನು ಕರೆಸಿ ಸ್ಥಳೀಯರೂ ಜೊತೆ ಸೇರಿ ಅಪಾಯಕ್ಕೆ ಸಿಲುಕಿದ್ದ ಎಲ್ಲ

ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!!         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್…! ➤ ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ತೀವ್ರ ಗಾಯಗೊಂಡ ಘಟನೆ ಕೆದಂವಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಪರ್ಪುಂಜ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ಇವರು ಕೆದಂಬಾಡಿ ಶಾಲೆಯ ಸ್ಮಾರ್ಟ್ ಕ್ಲಾಸ್ ಕೋಣೆಯ ವಯರಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಕೆಳಗಡೆ ಬಿದ್ದು ತಲೆಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. CIRCUIT,

ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್…! ➤ ಯುವಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 28, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ಹತ್ತಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ಸಂಭವಿಸಿದ್ದು, ಬೇಕರಿ, ಮೊಬೈಲ್ ಶಾಪ್ ಸೇರಿದಂತೆ ಐದು ಅಂಗಡಿಗಳಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದು, ಈ ಕುರಿತು ನೆಲೋಗಿ ಪೊಲೀಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ Read More »

ಕರ್ನಾಟಕ
Scroll to Top