ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಪುತ್ರ ಸಾವು
(ನ್ಯೂಸ್ ಕಡಬ) newdkadaba.com, ಆ. 02 ಶ್ರೀನಗರ: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜಿಂದರ್ ಸಿಂಗ್ ರಾಣಾ ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ. ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಶುಕ್ರವಾರ ಕುಟುಂಬ ಸಮೇತರಾಗಿ ಧರ್ಮರಿಯಿಂದ ಪಟ್ಟಿಯನ್ಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.
ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಪುತ್ರ ಸಾವು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
