ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ
(ನ್ಯೂಸ್ ಕಡಬ) newskadaba.com ಕಡಬ, ಮೇ.27., ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಹಿರಿಯ ಸದಸ್ಯರಾದ ಉಮೇಶ ಕೆ. ಸಣ್ಣಾರ ಅವರು ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಬಿದ್ದು ಅವರ ಕಾಲಿನ ಮೂಳೆ ಮುರಿತವಾಗಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಇವರಿಗೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಧನ ಸಂಗ್ರಹ ಮಾಡಿ ಅವರಿಗೆ ಹಸ್ತಾಂತರಿಸಲಾಯಿತು. ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ದನ ಸೂಡ್ಲು, ಕಾರ್ಯದರ್ಶಿ ಸುಂದರ ಒಗ್ಗು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ Read More »
ಕರಾವಳಿ
