suicide

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 24. ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ರವರ ಪುತ್ರ ಲೋಕೇಶ(22) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಗಳೂರುನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ವಿಷ ಸೇವಿಸಿ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 15. ವಿಷ ಸೇವಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂದು ಗುರುತಿಸಲಾಗಿದೆ. ಈತನ ತಂದೆ ತಾಯಿ ಹಾಗೂ ಸಹೋದರ ಕಾರ್ಕಳ ಮಾರಿಗುಡಿಯ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ, ಮನೆಯಲ್ಲಿ ಒಬ್ಬನೇ ಇದ್ದ ಪ್ರಜ್ವಲ್‌ ವಿಷ ಸೇವಿಸಿದ್ದ. ಈ ಕುರಿತು ಪ್ರಜ್ವಲ್‌ನ ಗೆಳೆಯ ಮಲ್ಲಿಕಾರ್ಜುನ ಎಂಬಾತ ಪ್ರಜ್ವಲ್ ಅಣ್ಣ ಉಜ್ವಲ್‌ಗೆ ಕರೆಮಾಡಿ ವಿಷಯ ತಿಳಿಸಿದ್ದನು. ತಕ್ಷಣವೇ ಪ್ರಜ್ವಲ್‌ ನನ್ನು ಮಣಿಪಾಲದ ಆಸ್ಪತ್ರೆಗೆ

ವಿಷ ಸೇವಿಸಿ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 15. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು, ಬಳಿಕ ತಾನೂ ಮೋಟಾರ್ ಪಂಪ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ತಮಿಳುನಾಡು ನಾಮಕ್ಕಲ್ ಜಿಲ್ಲೆಯ ಮೋಹನೂರಿನಲ್ಲಿ ನಡೆದಿದೆ. ಮೃತರನ್ನು ಗುಣವತಿ, ಆಕೆಯ ಮಕ್ಕಳಾದ ಪ್ರಿಯಾನ್ (5) ಸುಜಿತ್ಪ್ರಿಯನ್ (2) ಎಂದು ಗುರುತಿಸಲಾಗಿದೆ.

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟೊ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.18.  ಕನ್ಯಾನದಲ್ಲಿ ಆಟೊ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತರನ್ನು ಆಟೊ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿದ್ದ ದಿನೇಶ್, ಆಟೊ ಚಾಲಕರಾಗಿ ಕೆಲಸ ಮಾಡುತ್ತಿದ್ದರು,ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.

ಆಟೊ ಚಾಲಕ ಆತ್ಮಹತ್ಯೆ Read More »

ಕರಾವಳಿ

ಜಾತಿ ನಿಂದನೆ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮುಂಬೈ,ಫೆ.15. ಐಐಟಿ ಬಾಂಬೆಯಲ್ಲಿ18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಜಾತಿ ನಿಂದನೆಯೇ ಇದಕ್ಕೆ ಕಾರಣ ಎಂದು ಆತನ ಕುಟುಂಬ ಹೇಳಿದೆ. ತನ್ನ ಜಾತಿಯಿಂದಾಗಿ ಸ್ನೇಹಿತರು ಕೂಡಾ ಅವಮಾನಿಸುತ್ತಿದ್ದರು ಎಂದು ಸಹೋದರಿ ಮತ್ತು ಅತ್ತೆಯೊಂದಿಗೆ ಈತ ಹೇಳಿದ್ದ ಎಂದು ವಿದ್ಯಾರ್ಥಿಯ ಕುಟುಂಬವು ಎನ್‌ಡಿಟಿವಿಗೆ ತಿಳಿಸಿದೆ. ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳಿದ್ದು, ದರ್ಶನ್ ಸೋಲಂಕಿ ಎಂಬ ವಿದ್ಯಾರ್ಥಿಯ ಕುಟುಂಬವು ತಮ್ಮ ಮಗ ಕಿರುಕುಳ ಅನುಭವಿಸಿದ್ದಾನೆ ಎಂದು ಹೇಳಿದೆ. “ಕಳೆದ ತಿಂಗಳು ಅವ

ಜಾತಿ ನಿಂದನೆ ವಿದ್ಯಾರ್ಥಿ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

 ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.13.  ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ತಹಶೀಲ್ದಾರ್ ಕಚೇರಿಯ ಬಳಿ ಸಂಭವಿಸಿದೆ. ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಮೃತ ದುರ್ದೈವಿ. ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ (ಶಿಕ್ಷಕ ಬಸವರಾಜ್) ಸಾವಿಗೆ ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್​.ಎಲ್ ಭಜಂತ್ರಿ, ಸಿಂದಗಿ ಬಿಇಓ, ಸಿಆರ್​​ಪಿ ಜಿ.ಎನ್ ಪಾಟೀಲ್ ಕಾರಣವೆಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

 ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ! Read More »

ಕರ್ನಾಟಕ

ಬಂಧನದ ಭೀತಿಯಿಂದ ನವವಿವಾಹಿತೆ ಯುವತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ದಿಸ್ಪುರ್, ಫೆ.13. ತನ್ನ ಗಂಡನನ್ನು ಬಂಧಿಸುತ್ತಾರೆಂದು ಹೆದರಿ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ದಕ್ಷಿಣ ಸಾಲ್ಮರ ಪೊಲೀಸ್ ಠಾಣಾ ವ್ಯಾಪ್ತಿಯ ಕಮರ್ ಪದ ಗ್ರಾಮದ ನಿವಾಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು. ಅಸ್ಸಾಂ ಸರ್ಕಾರ ಬಾಲ್ಯವಿವಾಹ ವಿರುದ್ಧ ಕಾರ್ಯಾಚರಣೆ ನಡೆಸಿ ಸಾವಿರಾರು ಮಂದಿಯನ್ನು ಬಂಧಿಸಿದ್ದರು.ಈ  ಕುರಿತು ತನ್ನ ಪತಿಯನ್ನು ಬಂಧಿಸುತ್ತಾರೆ ಎಂದು ಹೆದರಿ 3 ತಿಂಗಳ ಹಿಂದೆಯಷ್ಟೇ ಮದುವೆಯಾದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತದೇಹವನ್ನು ಇದೀಗ

ಬಂಧನದ ಭೀತಿಯಿಂದ ನವವಿವಾಹಿತೆ ಯುವತಿ ಆತ್ಮಹತ್ಯೆ! Read More »

ರಾಷ್ಟ್ರೀಯ ನ್ಯೂಸ್

ವಿಷ ಸೇವಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಫೆ.10.  ವಿಷ ಸೇವಿಸಿ ಠಾಣೆಗೆ ಹೋಗಿ ರಕ್ಷಣೆಗೆ ಕೂಗಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿರುವ ಘಟನೆ ಚಂದ್ರಾ ಲೇಔಟ್ ನಲ್ಲಿ ನಡೆದಿದೆ.  ಡೆಲಿವರಿ ಏಜೆಂಟ್ ಆಗಿರುವ ಅನಿಲ್ (30) ಎಂಬ ವ್ಯಕ್ತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಸ್ನೇಹಿತೆ ಲೀಲಾ (40) ಎಂಬುವವರೊಂದಿಗೆ ಮನಸ್ತಾಪವಾಗಿದ್ದ ಹಿನ್ನೆಲೆಯಲ್ಲಿ ಅನಿಲ್ ವಿಷ ಸೇವಿಸಿದ್ದ ಎಂದು  ತಿಳಿದಿದೆ. ಈ ಹಿಂದೆ ಕೂಡ ಇಬ್ಬರ ನಡುವೆ ಜಗಳವಾಗಿದ್ದು, ಲೀಲಾ ಅವರು ಪೊಲೀಸರಿಗೆ ದೂರು ನೀಡಿದ್ದರು.

ವಿಷ ಸೇವಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು! Read More »

ಕರ್ನಾಟಕ

ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯನ ಕಿರುಕುಳ ಆರೋಪ ➤ ವೈದ್ಯೆ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.02. ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಮಾನಸಿಕ ಕಿರುಕುಳದಿಂದ ನೊಂದು ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿರುವುದು ವರದಿಯಾಗಿದೆ. ಉತ್ತರ ಪ್ರದೇಶ ಲಕ್ನೋ ಮೂಲದ ಡಾ.ಪ್ರಿಯಾಂಶಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆ ಎಂದು ತಿಳಿದುಬಂದಿದೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಈ ಬಗ್ಗೆ ಮೃತರ ತಂದೆ ಸುಶೀಲ್ ತ್ರಿಪಾಠಿ ಪೊಲೀಸ್ ದೂರು ನೀಡಿದ್ದಾರೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯ ವೈದ್ಯ ಡಾ.ಸುಮಿತ್ ಎಂಬಾತ ಪ್ರಿಯಾಂಶಿಗೆ ಪ್ರೇಮ ನಿವೇದನೆ ಮಾಡುತ್ತಿದ್ದು,

ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯನ ಕಿರುಕುಳ ಆರೋಪ ➤ ವೈದ್ಯೆ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೀತಿಸಿ ಮೋಸ ಮಾಡಿದ ಯುವತಿ ➤ ಮನನೊಂದು ಹಾಸನದ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾಸನ, ಜ.31. ಹುಡುಗಿ ಪ್ರೀತಿಸಿ ಕೈ ಕೊಟ್ಟಳೆಂದು ಮನನೊಂದ ಯುವಕ ಚೆನ್ನೈನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ನಗರದ ಸಂಗಮೇಶ್ವರ ಬಡಾವಣೆಯ ಕಾರ್ತಿಕ್ (26)ಮೃತಪಟ್ಟ ಯುವಕ. ಕಾರ್ತಿಕ್ ಕಳೆದ 4 ವರ್ಷದಿಂದ ಹೊಳೆನರಸೀಪುರ ತಾಲೂಕಿನ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಯುವತಿ ಕರೆಮಾಡಿ ತಾನು ಚೆನ್ನೈನಲ್ಲಿದ್ದು, ಅಲ್ಲಿಗೆ ಬರುವಂತೆ ಹೇಳಿದ್ದಾಳೆ. ಆಕೆಯ ಮಾತು ನಂಬಿ ಅಲ್ಲಿಗೆ ಕಾರ್ತಿಕ್ ಹೋಗಿದ್ದಾನೆ. ಬಳಿಕ ಯುವತಿ ತಾನು ಹಾಸನದಲ್ಲಿಯೇ ಇದ್ದೇನೆ ಎಂದು ಯುವತಿ ಹೇಳಿದ್ದಾಳೆ. ಇದರಿಂದ ಮನನೊಂದ

ಪ್ರೀತಿಸಿ ಮೋಸ ಮಾಡಿದ ಯುವತಿ ➤ ಮನನೊಂದು ಹಾಸನದ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top