suicide

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಮೊಬೈಲ್‌ ಹೆಚ್ಚು ಬಳಕೆ ಮಾಡಬೇಡ ಎಂದು ಹೇಳಿದಕ್ಕೆ ನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ. ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಾಲಕನು ಹೆಚ್ಚು ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿ ಸ್ವಲ್ಪ ಗದರಿಸಿದ್ದು, ಇದರಿಂದ ಬೇಸರಗೊಂಡು ನಾನು ಸ್ನಾನ ಮಾಡಿ ಬರುವುದಾಗಿ ಹೇಳಿ ರೂಮಿನೊಳಗೆ ಹೋದವನು ಬಾರದಿದ್ದಾಗ ತಂದೆ ಜಗದೀಶ್ ಬಾತ್ರೂಮ್ ಬಳಿಯಿರುವ ಕಿಟಕಿಯ […]

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ !

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.30. ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ (19) ಎಂದು ಗುರುತಿಸಲಾಗಿದೆ. ಹರ್ಷಿತ್ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.28. ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿಯೊಬ್ಬ ಹಾಸಿಗೆ ಹಿಡಿದಿದ್ದ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಶೈಲಜಾ (64) ಮತ್ತು ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು. ದಿನೇಶ್ ಪತ್ನಿಯನ್ನು ಕೊಂದು ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಚಂಡೀಗಢ, ಜ.28. ಸರಕಾರಿ ಶಾಲೆಯ ಶಿಕ್ಷಕ ಮತ್ತು ಪತ್ನಿ,ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಂಡೀಗಢದಲ್ಲಿ ನಡೆದಿದೆ. ಶಿಕ್ಷಕ ಜಿತೇಂದ್ರ,ಪತ್ನಿ ಸುಶೀಲಾ,ಮಗಳು ಹಿಮಾನಿ ಮೃತರು. ಇವರ ಮೃತದೇಹ ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ. ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿದು ಬರಬೇಕಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.  

ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕುಂದಾಪುರ: ಮದ್ಯಪಾನಕ್ಕೆ ಹಣ ನೀಡದಕ್ಕೆ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.27. ಮದ್ಯಪಾನ ಮಾಡಲು ಹಣ ನೀಡದ ಕಾರಣಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ವಿಟ್ಟಲ (48) ಆತ್ಮಹತ್ಯೆಗೈದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋವಾದಲ್ಲಿ ಹೊಟೇಲ್ ನಡೆಸುತ್ತಿರುವ ಚಂದಮ್ಮ ಶೆಟ್ಟಿ ಸಳ್ವಾಡಿ ಅವರ ಪುತ್ರನ ಹೊಟೇಲ್‌ನಲ್ಲಿ ವಿಟ್ಟಲ ಕೆಲಸ ಮಾಡಿಕೊಂಡಿದ್ದ. ಬಳಿಕ ಚಂದಮ್ಮ ಶೆಟ್ಟಿ ಅವರನ್ನು ನೋಡಿಕೊಳ್ಳಲೆಂದ ವಿಟ್ಟಲನನ್ನು ಮನೆಯಲ್ಲಿ ಇರುವಂತೆ ಹೇಳಲಾಗಿತ್ತು. ಆದರೆ ಕಳೆದ ಐದು ವರ್ಷಗಳಿಂದ ವಿಟ್ಟಲ ಕುಡಿತದ ಚಟ ಹೊಂದಿದ್ದ. ಮದ್ಯಪಾನ ಮಾಡಲು ಹಣ

ಕುಂದಾಪುರ: ಮದ್ಯಪಾನಕ್ಕೆ ಹಣ ನೀಡದಕ್ಕೆ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಸುಳ್ಯ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಜ.27. ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ಸಂಭವಿಸಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎನ್ನಲಾಗಿದೆ. ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ. ಶವವನ್ನು ಸುಳ್ಯ ಸರಕಾರಿ

ಸುಳ್ಯ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.26. ಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೃಷ್ಣ ಸಫಲಿಗ ಎಂದು ಗುರುತಿಸಲಾಗಿದ್ದು, ಮೃತರು ತಮ್ಮ ಮಾಲೀಕತ್ವದ ವ್ಯಾನ್ ಅನ್ನು ಟ್ಯಾಕ್ಸಿಯಾಗಿ ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ವಾಹನದಲ್ಲಿ ಕುಳಿತು ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ತನ್ನ ಸೋದರನ ಮನೆಯಲ್ಲಿ ನಡೆದ ‘ಮೆಹೆಂದಿ’ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ

ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ. ಸ್ಥಳದಲ್ಲಿ

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ      Read More »

ಕರಾವಳಿ, ಕ್ರೈಮ್ ನ್ಯೂಸ್

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..!

(ನ್ಯೂಸ್ ಕಡಬ)newskadaba.com  ಮುಂಬೈ, ಜ.24. ಕೆಲವರು ತಮಗೆ ತಾವೇ ವಿಚಿತ್ರವಾಗಿ ಅಂತ್ಯ ಹೇಳಿಕೊಳ್ಳುತ್ತಾರೆ. ಅಂಥದ್ದೇ ಒಂದು ಪ್ರಕರಣ ಇಲ್ಲೊಂದು ಕಡೆ ನಡೆದಿದ್ದು, ಯುವಕನೊಬ್ಬ ತನಗೇ ತಾನೇ ವಾಟ್ಸ್​ ಆಪ್​ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿಕೊಂಡಿದ್ದ. ವಿಚಿತ್ರವೆಂದರೆ ಆತ ಹಾಗೆ ಸ್ಟೇಟಸ್ ಹಾಕಿಕೊಂಡ ಕೆಲವೇ ಗಂಟೆಗಳಲ್ಲಿ ಆತನ ಶವ ಮರವೊಂದರಲ್ಲಿ ನೇತಾಡುವ ಸ್ಥಿತಿಯಲ್ಲಿ ಕಂಡುಬಂದಿತ್ತು ಎನ್ನಲಾಗಿದೆ. ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ನೇರಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಲ್‌ಇನ ರಿಷಿಕೇಶ್ ದಿಲಿಪ್​ ಖೊಡ್ಪೆ (25) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!  

(ನ್ಯೂಸ್ ಕಡಬ)newskadaba.com ಸುರತ್ಕಲ್, ಜ.23. ವಿವಾಹಿತ ಯುವತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ನಡೆದಿದೆ. ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ(26) ಮೃತರು. ದಿವ್ಯಾ ಒಂದೂವರೆ ವರ್ಷದ ಹಿಂದೆ ಹರೀಶ್ ರನ್ನು ಪ್ರೀತಿಸಿ ವಿವಾಹವಾಗಿದ್ದರು. ದಿವ್ಯಾ ಮನೆಯಲ್ಲಿ ಒಬ್ಬರೇ ಇರುವಾಗ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರು ನೀಡಲಾಗಿದೆ. ಈ ಕುರಿತು ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!   Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top