ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಕೊಲೆ ಪ್ರಕರಣ – ಡಾ. ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ
(ನ್ಯೂಸ್ ಕಡಬ) newskadaba.com ಸುಳ್ಯ, ಅ. 05. ಕಳೆದ ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರದಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಡಾ. ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೊ.ಎ.ಎಸ್.ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಕಳೆದ ವಾರವಷ್ಟೇ ರದ್ದುಗೊಳಿಸಿದ್ದ ಹೈಕೋರ್ಟ್ ಅವರು ದೋಷಿಗಳೆಂದು ತೀರ್ಪು ನೀಡಿತ್ತು. ಡಾ. ರೇಣುಕಾ ಪ್ರಸಾದ್ ಕೆ.ವಿ. […]
