suspend

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌, ಅಡಿಷನಲ್‌ ಕಮಿಷನರ್‌ ವಿಕಾಸ್‌ ಕುಮಾರ್‌, ಸೆಂಟ್ರಲ್‌ ಡಿಸಿಪಿ ಶೇಖರ್‌ ತೆಕ್ಕಣ್ಣನವರ್‌, ಎಸಿಪಿ ಬಾಲಕೃಷ್ಣ, ಇನ್‌ಸ್ಪೆಕ್ಟರ್‌ ಗಿರೀಶ್‌ ಅವರನ್ನು ಅಮಾನತು ಮಾಡಲಾಗಿದೆ.

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾಕಪ್ ಡೆತ್: ಪಿಎಸ್ಐ, ಹೆಡ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ನ. 13. ಬ್ರಹ್ಮಾವರ ಠಾಣೆಯಲ್ಲಿ ನವೆಂಬರ್ 10ರಂದು ನಡೆದ ಲಾಕಪ್ ಡೆತ್ ಘಟನೆಯ ಹಿನ್ನೆಲೆ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಮಧು ಬಿ.ಇ ಮತ್ತು ಹೆಡ್ ಕಾನ್‌ಸ್ಟೇಬಲ್ ಸುಜಾತಾ ಅವರನ್ನು ಅಮಾನತುಗೊಳಿಸಲಾಗಿದೆ. ಮೃತ ಬಿಜು ಮೋಹನ್ ಎಂಬಾತನನ್ನು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚೇರ್ಕಾಡಿ ಗ್ರಾಮದಲ್ಲಿ ನಡೆದ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 9 ರಂದು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅವರು ಮೃತಪಟ್ಟಿದ್ದರು. ಘಟನೆ ಸಂಬಂಧ ಬಿಜು ಮೋಹನ್ ಅವರ ಕುಟುಂಬಸ್ಥರು ಬ್ರಹ್ಮಾವರ

ಲಾಕಪ್ ಡೆತ್: ಪಿಎಸ್ಐ, ಹೆಡ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಹಿಳಾ ಇಂಜಿನಿಯರ್ ಗೆ ಲೈಂಗಿಕ ಕಿರುಕುಳ ಆರೋಪ ಹಿರಿಯ ಇಂಜಿನಿಯರ್ ಸಸ್ಪೆಂಡ್

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 20. ಜೆಸ್ಕಾಂ ಮಹಿಳಾ ಎಂಜಿನಿಯರ್ ಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಹಿರಿಯ ಇಂಜಿನಿಯರ್ ನ ಅಮಾನತು ಮಾಡಿ ಆದೇಶಿಸಲಾಗಿದೆ. ಆರೋಪಿ ಜೆಸ್ಕಾಂ ಇಇ ಶ್ರೀನಿವಾಸ್ ಅಮಾನತು ಆದವರು. ರಾಯಚೂರಿನಲ್ಲಿ ಜೆಸ್ಕಾಂ ಹಿರಿಯ ಇಂಜಿನಿಯರ್ ಆಗಿರುವ ಶ್ರೀನಿವಾಸ್, ಮಹಿಳಾ ಇಂಜಿನಿಯರ್ ಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಶ್ರೀನಿವಾಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂತ್ರಸ್ತ ಮಹಿಳೆ ಹಾಗೂ ಜೆಸ್ಕಾಂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದರು.

ಮಹಿಳಾ ಇಂಜಿನಿಯರ್ ಗೆ ಲೈಂಗಿಕ ಕಿರುಕುಳ ಆರೋಪ ಹಿರಿಯ ಇಂಜಿನಿಯರ್ ಸಸ್ಪೆಂಡ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಚಾರಣೆಯ ವೇಳೆ ವಿಷಸೇವಿಸಿ ಕೈದಿ ಮೃತ್ಯು ➤ ಐವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ಜೂ. 25. ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಹೊನ್ನಾವರ ಠಾಣೆಯ ಪಿಐ, ಪಿಎಸ್​ಐ ಸಹಿತ ಐವರನ್ನು ಅಮಾನತು ಮಾಡಲಾಗಿರುವ ಕುರಿತು ವರದಿಯಾಗಿದೆ. ಬಿಹಾರ ಮೂಲದ ಕೈದಿಯೋರ್ವ ಠಾಣೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈಂ ಪಿಎಸ್​ಐ ಮಂಜೇಶ್ವರ್ ಚಂದಾವರ, ಸಿಬ್ಬಂದಿಗಳಾದ ಮಹಾವೀರ, ರಮೇಶ್ ಮತ್ತು ಸಂತೋಷ್ ಎಂಬವರನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಪಾಲೀಷ್ ಮಾಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ

ವಿಚಾರಣೆಯ ವೇಳೆ ವಿಷಸೇವಿಸಿ ಕೈದಿ ಮೃತ್ಯು ➤ ಐವರು ಪೊಲೀಸರ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

118 ಕೋಟಿ ರೂ. ನಕಲಿ ಬಿಲ್ ಹಗರಣ ➤ 8 ಬಿಬಿಎಂಪಿ ಇಂಜಿನಿಯರ್ ಗಳ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. 118ಕೋಟಿ ರೂ. ಮೊತ್ತದ ನಕಲಿ ಬಿಲ್ ಸೃಷ್ಟಿಸಿದ ಆರೋಪದಲ್ಲಿ ಬಿಬಿಎಂಪಿಯ 8 ಇಂಜಿನಿಯರ್ ಗಳನ್ನು ರಾಜ್ಯ ಸರಕಾರ ಅಮಾನತುಗೊಳಿಸಿದೆ. ಆರ್.ಆರ್ ನಗರದ ವಿಧಾಸಭಾ ಕ್ಷೇತ್ರದಲ್ಲಿ ಬಿಬಿಎಂಪಿಯಿಂದ ಕೆಆರ್.ಐಡಿಎಲ್ ಗೆ ವಹಿಸಲಾಗಿದ್ದ ಕೆಲಸಗಳನ್ನು ಮಾಡದೇ ಬಿಲ್ ಮೊತ್ತ ಬಿಡುಗಡೆಯಾಗಿರುವುದು  ಲೋಕಾಯುಕ್ತ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತರ ಶಿಫಾರಸಿನ ಮೇರೆಗೆ ಸರಕಾರವು ಅಮಾನತು ಮಾಡಿದೆ. ಅಲ್ಲದೇ ಈ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ

118 ಕೋಟಿ ರೂ. ನಕಲಿ ಬಿಲ್ ಹಗರಣ ➤ 8 ಬಿಬಿಎಂಪಿ ಇಂಜಿನಿಯರ್ ಗಳ ಅಮಾನತು Read More »

ಕರ್ನಾಟಕ

ಬೀಟೆ ಮರ ಕಡಿದು ಮಾರಾಟ ಪ್ರಕರಣ  ➤ ಉಪ ಅರಣ್ಯಾಧಿಕಾರಿ ಸಸ್ಪೆಂಡ್..!

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.02. ಮೀಸಲು ಅರಣ್ಯದಲ್ಲಿ ಬೀಟೆ ಮರ ಕಡಿದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಅರಣ್ಯಾಧಿಕಾರಿಯನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅಮಾನತುಗೊಂಡವರು ಎನ್ನಲಾಗಿದೆ. ಬೀಟೆ ಮರವನ್ನು ಕಡಿದು ಮಾರಾಟ ಮಾಡಿದ್ದಾರೆ ಎಂದು ದರ್ಶನ್ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಡಿಎಫ್ ಒ ಕ್ರಾಂತಿ, ದರ್ಶನ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಬೀಟೆ ಮರ ಕಡಿದು ಮಾರಾಟ ಪ್ರಕರಣ  ➤ ಉಪ ಅರಣ್ಯಾಧಿಕಾರಿ ಸಸ್ಪೆಂಡ್..! Read More »

ಕರ್ನಾಟಕ

ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ ವಿದ್ಯಾರ್ಥಿಗಳು ಅಮಾನತು

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 13. ಖಾಸಗಿ ವಿದ್ಯಾಸಂಸ್ಥೆಯ ಹಿಂದೂ ವಿದ್ಯಾರ್ಥಿನಿಯೋರ್ವಳು ಮುಸ್ಲಿಂ ಯುವಕನಿಗೆ ಪತ್ರ ಬರೆದ ವಿಚಾರವಾಗಿ ಗೊಂದಲವುಂಟು ಮಾಡಿದ ಎರಡು ಕೋಮಿನ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೇಪು ಮೂಲದ ಹಿಂದೂ ವಿದ್ಯಾರ್ಥಿನಿ ಹಾಗೂ ಕೆಲಿಂಜದ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮಾಂಕುರವಾಗಿದ್ದು, ಈ ಹಿಂದೆಯೇ ಪ್ರಾಂಶುಪಾಲರು ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಬ್ಯಾಗ್ ನಲ್ಲಿ ಲವ್ ಲೆಟರ್ ಪತ್ತೆಯಾಗಿದ್ದು, ಎರಡು ಕೋಮಿನ

ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ ವಿದ್ಯಾರ್ಥಿಗಳು ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top