ಇಂದಿನಿಂದ ಸಿದ್ದರಾಮಯ್ಯ ನೇತೃತ್ವದ ಕೊನೆಯ ಚಳಿಗಾಲದ ಅಧಿವೇಶನ ► ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣ ಸೌಧ ಸಜ್ಜು
(ನ್ಯೂಸ್ ಕಡಬ) newskadaba.com ಬೆಳಗಾವಿ ನ.13. ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕಾಗಿ ಬೆಳಗಾವಿಯ ಸುವರ್ಣಸೌಧ ಸಜ್ಜಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ -ವೈಫಲ್ಯ ಕುರಿತು ಆರೋಪ -ಪ್ರತ್ಯಾರೋಪಗಳ ಸುರಿಮಳೆಯೇ ಹರಿದಾಡುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕೊನೆಯ ಅಧಿವೇಶನ ಇದಾಗಿದೆ. ಪ್ರತಿಪಕ್ಷಗಳು ವೈಫಲ್ಯಗಳ ಪಟ್ಟಿಯೊಂದಿಗೆ ಮುಗಿಬೀಳಲು ಸಜ್ಜಾಗಿದ್ದರೆ, ಸಾಧನೆಗಳ ಅಸ್ತ್ರ ಪ್ರಯೋಗಿಸಿ ತಿರುಗೇಟು ನೀಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಅಧಿವೇಶನದಲ್ಲಿ ಹೋರಾಟ […]

