swamy

ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಜು.19. ಹೊಟ್ಟೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ರತ್ರೆಯಲ್ಲಿ ನಿಧನರಾಗಿದ್ದಾರೆ. ಸೋಮವಾರದಂದು ಶಿರೂರು ಮೂಲ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಗೆ ಹೊಟ್ಟೆನೋವು ಕಾಣಿಸಿಕೊಂಡು ವಿಪರೀತ ವಾಂತಿ ಮಾಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಬುಧವಾರದಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ Read More »

ಕರಾವಳಿ

ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಅವಹೇಳನ ► ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ದೂರು

(ನ್ಯೂಸ್ ಕಡಬ) newskadabacom ಪುತ್ತೂರು, ಅ.01. ಸಾಮಾಜಿಕ ಜಾಲತಾಣಗಳಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಬಗ್ಗೆ ಅವಹೇಳನಕಾರಿಯಾಗಿ ಸಂದೇಶ ಕಳುಹಿಸಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ. ಸಂತೋಷ್ ಉಪ್ಪುರ್ ಎನ್ನುವ ವ್ಯಕ್ತಿ ಕೊರಗಜ್ಜನ ಬಗ್ಗೆ ತನ್ನ ಫೇಸ್‌ಬುಕ್‌ ವಾಲ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಅದನ್ನು ಏಂಜೆಲ್ ನಯನ ಪ್ರಜ್ವಲ್ ಮತ್ತು ಕುಂಜತ್ತುಮೊಯಿದಿನ್ ಕುಂಜತ್ತೂರು ಎಂಬವರು ಶೇರ್ ಮಾಡಿ ಕಮೆಂಟ್ಸ್ ಮಾಡಿರುತ್ತಾರೆ. ಕೊರಗಜ್ಜನನ್ನು ನಿಂದಿಸಿದ ಇವರ ಮೇಲೆ

ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಅವಹೇಳನ ► ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ದೂರು Read More »

ಕರಾವಳಿ
Scroll to Top