ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ – ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಬೇಸಿಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ […]
