ರಾಜ್ಯಗಳ ತೆರಿಗೆ ಪಾಲು ಕಡಿತಕ್ಕೆ ಚಿಂತನೆ: ಅನ್ಯಾಯವಾದರೆ ಬೀದಿಗಿಳಿದು ಹೋರಾಟ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ರಾಜ್ಯಗಳ ತೆರಿಗೆ ಹಂಚಿಕೆಯನ್ನು ಶೇ 41 ರಿಂದ ಶೇ 40 ಕ್ಕೆ ಕಡಿತಗೊಳಿಸಲು ಎನ್ಡಿಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದ್ದು. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯವನ್ನು ಮನವಿ-ಮಾತುಕತೆ ಮೂಲಕ ಪರಿಹರಿಸಲು ನಡೆಸುತ್ತಿರುವ ಪ್ರಯತ್ನ ವಿಫಲವಾದಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ […]

