ತಂದೆ ಎದುರೇ ಮಗಳನ್ನು ಕಿಡ್ನಾಪ್ ಮಾಡಿದ ನಾಲ್ವರ ಗ್ಯಾಂಗ್…!
(ನ್ಯೂಸ್ ಕಡಬ) newskadaba.com ತೆಲಂಗಾಣ , ಡಿ 20 : 18 ವರ್ಷದ ಯುವತಿಯನ್ನು ಆಕೆಯ ತಂದೆಯ ಮುಂದೆಯೇ ಕಿಡ್ನಾಪ್ ಮಾಡಿರುವ ಆಘಾತಕಾರಿ ಘಟನೆ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಸಂಭವಿಸಿದೆ. ಬೆಳಗ್ಗೆ ತಂದೆಯೊಂದಿಗೆ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಯುವತಿಯನ್ನು ಅಪಹರಿಸಲಾಗಿದೆ . ಕಾರಿನಲ್ಲಿ ಬಂದ ನಾಲ್ವರು ಯುವಕರು ಯುವತಿಯನ್ನು ಬಲವಂತವಾಗಿ ಹತ್ತಿಸಿಕೊಂಡು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ವೇಮುಲವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ತಂದೆ ಎದುರೇ ಮಗಳನ್ನು ಕಿಡ್ನಾಪ್ ಮಾಡಿದ ನಾಲ್ವರ ಗ್ಯಾಂಗ್…! Read More »
ರಾಷ್ಟ್ರೀಯ ನ್ಯೂಸ್