ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ರಾಜ್ಯ ಸರಕಾರ ಮನವಿ ಮಾಡಿದೆ. ಪ್ರಕರಣದ ಸಂತ್ರಸ್ತೆಯ ಗುರುತು ಮರೆಮಾಚಲು ಇನ್ ಕ್ಯಾಮರಾ ವಿಚಾರಣೆಗೆ ಹೈಕೋರ್ಟ್ ಗೆ ಎಸ್ ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿದರು. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ Read More »
ಕರ್ನಾಟಕ