ಶ್ರೀನಗರ : ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯ; 40% ಬೆಲೆ ಕುಸಿತ
(ನ್ಯೂಸ್ ಕಡಬ) newskadaba.com, ಸೆ.22 ಶ್ರೀನಗರ: ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯವಾಗಿದೆ.. ಇದರಿಂದಾಗಿ ಸೇಬು ಬೆಳೆಗಾರರಿಗೆ ತೀವ್ರ ತೊಂದರೆಯಾಗಿದೆ. ಮಳೆ, ಪ್ರವಾಹದಿಂದಾಗಿ ಆಗಸ್ಟ್ ಅಂತ್ಯದಿಂದ ಸೆಪ್ಟೆಂಬರ್ ಮಧ್ಯದವರೆಗೆ 3 ವಾರಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿತ್ತು. ಪರಿಣಾಮ ಟ್ರಕ್‌ಗಳಲ್ಲಿ ತುಂಬಿದ್ದ ಸೇಬು ಹಣ್ಣುಗಳು ಕೊಳೆತುಹೋಗಿವೆ. ಇದರ ನಡುವೆ ಕೇಂದ್ರ ಸರ್ಕಾರವು ಕಣಿವೆ ರಾಜ್ಯದ ಆರ್ಥಿಕತೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಕಾಶ್ಮೀರದಲ್ಲಿ ವಾರ್ಷಿಕ 20 ಲಕ್ಷ ಮೆಟ್ರಿಕ್‌ಟನ್‌ಗಳಿಗಿಂತ ಹೆಚ್ಚು […]

