ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದು ಹಳಿತಪ್ಪಿದ ಗೂಡ್ಸ್ ರೈಲು ➤ 6 ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜೂ. 24. ಟ್ರ್ಯಾಕ್ಟರ್‌ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ಶನಿವಾರ ನಡೆದಿದೆ. ಇಂದು ಬೆಳಗ್ಗೆ ಬಂಸಿಪಹಾರ್‌ಪುರ-ರೂಪ್ ಬಾಸ್ ರೈಲು ವಿಭಾಗದಲ್ಲಿ ಗೂಡ್ಸ್ ರೈಲೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು, ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ಆರು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಿಂದ ಹೆಚ್ಚಿನ ಹಾನಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದು ಹಳಿತಪ್ಪಿದ ಗೂಡ್ಸ್ ರೈಲು ➤ 6 ಮಂದಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
