train accident

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 15. ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುರ ಎಂಬಲ್ಲಿ ನಡೆದಿದೆ. ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲಟ್‌ ಗಾಯಾಳುವನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 23. ರೈಲಿಗೆ ಸಿಲುಕಿ ರೈಲ್ವೇ ಸ್ಟೇಷನ್ ಮಾಸ್ಟರ್ ಓರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ, ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್‍ಕುಮಾರ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದ ಅವರು ಕುಮ್ಸಿ ನಿಲ್ದಾಣದಲ್ಲಿ ಇಳಿದಿದ್ದರು. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾವಲ್ಪಿಂಡಿ, ಆ. 07. ಹಜಾರಾ ಎಕ್ಸ್‌ ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಶೆಹಜಾದ್ ಪುರ ಮತ್ತು ನವಾಬ್ ಶಾ ನಡುವಿನ ಸರ್ಹರಿ ರೈಲು ನಿಲ್ದಾಣದ ಬಳಿ ನಡೆದಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಹಲವು ಪ್ರಯಾಣಿಕರು ಬೋಗಿಗಳಲ್ಲಿ ಸಿಲುಕಿದ್ದಾರೆ. ಅಪಘಾತವಾದ ರೈಲು ಕರಾಚಿಯಿಂದ ಪಾಕಿಸ್ತಾನದ ಪಂಜಾಬ್‌ ಗೆ ಹೊರಟಿತ್ತು. ಗಾಯಗೊಂಡವರನ್ನು ಕೂಡಲೇ ನವಾಬ್ ಶಾದಲ್ಲಿರುವ ಮೆಡಿಕಲ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು. 08. ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ್ದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸ್ಟೇಷನರಿ ಗೂಡ್ಸ್ ಈ ಮೂರು ರೈಲುಗಳ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಸಿಬಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಿಯೋಜಿಸಲಾದ ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು

(ನ್ಯೂಸ್ ಕಡಬ)newskadba.com ಒಡಿಶಾ, ಜೂ  08 . ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಜಜ್ಪುರ ಜಿಲ್ಲೆಯಲ್ಲಿ ನಡೆದಿದೆ. ಜಜ್ಪುರ ಕಿಯೋಂಜರ್ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ವೇಳೆ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಚಲಿಸಲು ಆರಂಭಿಸಿದೆ.ಇನ್ನು ಗಾಯಗೊಂಡ ಕಾರ್ಮಿಕರನ್ನು ಕಟಕ್ ಎಸ್ ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ

(ನ್ಯೂಸ್ ಕಡಬ) newskadaba.com ಒಡಿಶಾ, ಜೂ. 05. ಕಳೆದ ವಾರ ನಡೆದ ಭೀಕರ ರೈಲು ದುರಂತದ ದುಃಖ ಮಾಸುವ ಮುನ್ನವೇ ಬಾರ್ಗಢ ಜಿಲ್ಲೆಯ ಮೆಂಧಪಾಲಿ ಬಳಿ ಗೂಡ್ಸ್ ರೈಲಿನ ಐದು ಬೋಗಿಗಳು ಹಳಿತಪ್ಪಿದ ಘಟನೆ ವರದಿಯಾಗಿದೆ. ವರದಿಯ ಪ್ರಕಾರ, ಸುಣ್ಣದಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಹಲವಾರು ವ್ಯಾಗನ್‌ಗಳು ಬರ್ಗರ್‌ನಲ್ಲಿ ಹಳಿತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಘಟನಾ ಸ್ಥಳಕ್ಕೆ ಈಗಾಗಲೇ ಪೊಲೀಸರು ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು

(ನ್ಯೂ ಸ್ ಕಡಬ) newskadaba.com ಬೈಂದೂರು, ಮಾ. 21.  ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ. ಎರ್ನಾಕುಲಂಗೆ ತೆರಳುತ್ತಿದ್ದ ಮರುಸಾಗರ ರೈಲಿನಲ್ಲಿ ಅಜ್ಮೀರ್ ಜಂಕ್ಷನ್‌ನಿಂದ ಹತ್ತಿದ್ದ ವ್ಯಕ್ತಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್‌ನ, ಮಾ. 18. ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮನೋಜ್ ಸಾಬ್ (19), ಶಿವಚರಣ್ ಸಾಬ್ (20) ಮತ್ತು ಬಬ್ಲೂ ಕುಮಾರ್ (20) ಎಂದು ಗುರುತಿಸಲಾಗಿದೆ. ಮೂವರು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಹೌರಾ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ವರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ  ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 17. ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top